ಬಜೆಟ್‌ನಲ್ಲಿ ಶಿಕ್ಷಣಕ್ಕೆ ಒತ್ತು: 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ

ಬೆಂಗಳೂರು, ಮಾ. 04: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಗೆ ಅಗತ್ಯ 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ. ಬಾಕಿ 27 ಸಾವಿರ ಅತಿಥಿ ಉಪನ್ಯಾಸಕರ ಸೇವೆ ಪಡೆಯಲು ಚಿಂತನೆ. ಅತಿಥಿ ಉಪನ್ಯಾಸಕರ ಗೌರವ ಧನ 11 ಸಾವಿರದಿಂದ 30 ಸಾವಿರಕ್ಕೆ ಹೆಚ್ಚಳ!

ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23 ನೇ ಸಾಲಿನ ಬಜೆಟ್‌ನಲ್ಲಿ ಬಂಪರ್ ಕೊಡುಗೆ ನೀಡಿದ್ದಾರೆ. ಶಿಕ್ಷಣಗೆ ಹೆಚ್ಚು ಒತ್ತು ಕೊಟ್ಟಿರುವ ಸಿಎಂ, ಈ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಹಂತದಲ್ಲಿ ಅನುಷ್ಠಾನ ಮಡಲು ಅನುದಾನ ಮೀಸಲಿಟ್ಟಿದ್ದಾರೆ. ಇದರ ಬೆನ್ನಲ್ಲೇ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಹಂತದ ಶಿಕ್ಷಣವನ್ನು ಎನ್ಇಪಿ ಅಡಿ ನೀಡಲಿದ್ದು, ಪಠ್ಯಕ್ರಮ ಮುದ್ರಣಕ್ಕಾಗಿ 30 ಕೋಟಿ ರೂ. ಮೀಸಲಿಟ್ಟಿರುವುದನ್ನು ಪ್ರಕಟಿಸಿದರು.

ಇದರ ಬೆನ್ನಲ್ಲೇ ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿರುವ 15 ಸಾವಿರ ಶೀಕ್ಷಷಕರ ನೇಮಕಕ್ಕೆ ಕ್ರಮ ಜರುಗಿಸಲಾಗುತ್ತಿದೆ. ಇದರ ಜತೆಗೆ ಅತಿಥಿ ಉಪನ್ಯಾಸಕರ ಸೇವೆಯನ್ನು ಸಹ ಮುಂದುವರೆಸಲು ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗಿದೆ. ಪದವಿ ಪೂರ್ವ ಕಾಲೇಜುಗಳಲ್ಲಿ ಕೆಲಸ ಮಾಡುವ ಅತಿಥಿ ಉಪನ್ಯಾಸಕರ ಮಾಸಿಕ ಗೌರವ ಧನವನ್ನು ಎರಡು ಪಟ್ಟು ಹೆಚ್ಚಳ ಮಾಡವುದಾಗಿ ಪ್ರಕಟಿಸಿದರು.

Karnataka Budget 2022 Highlights for Education Sector in Kannada

Recommended Video

      'ಯುದ್ಧ ಬೇಡ' ರಷ್ಯಾ ನಡೆ ವಿರೋಧಿಸಿ ಲೈವ್ ನಲ್ಲೇ ರಾಜೀನಾಮೆ ಕೊಟ್ಟ ರಷ್ಯಾ ಚಾನಲ್ | Oneindia Kannada

      ಪ್ರೌಢಶಾಲೆಗಳೇ ಕಾಲೇಜುಗಳು: ಇನ್ನು ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸಿಕೊಡಲು ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಪರಿವರ್ತಿಸುವ ಯೋಜನೆಯ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಬೊಮ್ಮಾಯಿ ಅವರ ಈ ಕೊಡುಗೆಯಿಂದ ಶಿಕ್ಷಣ ಕ್ಷೇತ್ರದಿಂದ ಉತ್ತಮ ಅಭಿಪ್ರಾಯಗಳು ಹೊರ ಬಿದ್ದಿವೆ.

      ಗುಣಮಟ್ಟದ ಶಿಕ್ಷಣ
      • ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ.
      • ಹೋಬಳಿ ಮಟ್ಟದಲ್ಲಿ "ಮಾದರಿ ಶಾಲೆ"ಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ.
      • ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ. ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ.
      • ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ.
      • 'ನೋಡಿ ಕಲಿ ಮಾಡಿ ತಿಳಿ' ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್-ಇನ್-ಎ-ಕಿಟ್ ವಿತರಣೆ.
      • Karnataka Institute of Technology ಗಳನ್ನಾಗಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ; ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ.
      • ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳ ಸ್ಥಾಪನೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+