ಬಜೆಟ್: ನೀರಾವರಿ ಯೋಜನೆಗಳಿಗೆ ಭರಪೂರ ಅನುದಾನ ಮಂಜೂರು
ಬೆಂಗಳೂರು, ಮಾರ್ಚ್ 4: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4ರ ಮಧ್ಯಾಹ್ನ 12.30ಕ್ಕೆ ಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ಅಭಿವೃದ್ಧಿ ಪರವಾಗಿದ್ದು, ಪಂಚಸೂತ್ರಗಳ ಆಧಾರದ ಬಜೆಟ್ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ನೀರಾವರಿ ಯೋಜನೆಗಳಿಗೆ ಬಜೆಟ್ ನಲ್ಲಿ ಸಿಕ್ಕಿರುವ ಅನುದಾನದ ಬಗ್ಗೆ ಮುಖ್ಯಾಂಶಗಳು ಇಲ್ಲಿವೆ...
Recommended Video
ನೀರಾವರಿ ಯೋಜನೆ:
* ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ 1000 ಕೋಟಿ ರು ಅನುದಾನ
* ಮೇಕೇದಾಟು ಯೋಜನೆ ಅನುಷ್ಠಾನಕ್ಕೆ 1000 ಕೋಟಿ ರು ಅನುದಾನ
* ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತಕ್ಕೆ 5000 ಕೋಟಿ ರು ಮಂಜೂರು
* ಭದ್ರಾ ಮೇಲ್ದಂಡೆ ಯೋಜನೆಗೆ 3000 ಕೋಟಿ ರು ಮಂಜೂರು
* ಎತ್ತಿನ ಹೊಳೆ ಯೋಜನೆಗೆ 3000 ಕೋಟಿ ರು ಮಂಜೂರು.
ಆಯವ್ಯಯ 2022-23 ಮುಖ್ಯಾಂಶಗಳು.
— CM of Karnataka (@CMofKarnataka) March 4, 2022
ನೀರಾವರಿಗೆ ಆದ್ಯತೆ. #ಜನಸಾಮಾನ್ಯರಬಜೆಟ್ pic.twitter.com/CUlLOASDoK
* ತುಂಗಭದ್ರಾ ಜಲಾಶಯದ ನೀರು ಸಂಗ್ರಹಣೆ ಕೊರತೆ ಸರಿದೂಗಿಸಲು ನವಲೆ ಬಳಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ 1,000 ಕೋಟಿ ರು ಅನುದಾನ.
* ಕೇಂದ್ರ ಸರ್ಕಾರವು PMKSY-AIBP ಅಡಿಯಲ್ಲಿ ಸನ್ನತಿ ಏತ ನೀರಾವರಿ ಯೋಜನೆ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆ ಹಂತ -1 ಹಾಗೂ 2 ರಲ್ಲಿನ ಬೂದಿಹಾಳ, ಪೀರಾಪುರ, ನಂದವಾಡಗಿ, ನಾರಾಯಣಪುರ ಬಲದಂಡೆ(9ಎ) ಕಾಲುವೆ ವಿಸ್ತರಣೆ ಯೋಜನೆ ಅನುಷ್ಠಾನಕ್ಕೆ ಕ್ರಮ.
* ಪ್ರಗತಿಯಲ್ಲಿರುವ 14 ನೀರಾವರಿ ಯೋಜನೆ ಪೂರ್ಣಗೊಳಿಸಿ, 35, 319 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ.
* 2021-22ನೇ ಸಾಲಿನಲ್ಲಿ ಅನುಮೋದಿಸಿದ 8,774 ಕೋಟಿ ರು ಗಳ ನೀರಾವರಿ ಯೋಜನೆಗಳಿಗೆ ರೂಪುರೇಷೆ ಸಿದ್ಧಪಡಿಸಲು ಕ್ರಮ.

* ನದಿಗಳಿಗೆ ಹಿಮ್ಮುಖವಾಗಿ ನುಗ್ಗುವ ಉಪ್ಪು ನೀರು ತಡೆಗಟ್ಟಲು ಖಾರ್ ಲ್ಯಾಂಡ್ ಯೋಜನೆ ಅನುಷ್ಠಾನ, ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾರಿಗೊಳಿಸಲಾಗುತ್ತಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಅನುಷ್ಠಾನ.
* ಬೆಂಗಳೂರು ನಗರದ ವೃಷಭಾವತಿ ಕಣಿವೆಯಿಂದ ಸಂಸ್ಕರಿಸಿದ 308 ದಶಲಕ್ಷ ಲೀಟರ್ ನೀರನ್ನು ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ 234 ಕೆರೆಗಳಿಗೆ ತುಂಬಿಸುವ ಯೋಜನೆಯನ್ನು ಮೊದಲ ಹಂತದಲ್ಲಿ 865 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುತ್ತದೆ
* 2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ ಒದಗಿಸಲಾಗುವುದು, ನಲ್ಲಿಗಳ ಮೂಲಕ ನೀರು ಸಂಪರ್ಕ ಒದಗಿಸಲಾಗುವುದು. ಕುಡಿಯುವ ನೀರು ಸಂಪರ್ಕಕ್ಕೆ 7 ಸಾವಿರ ಕೋಟಿ ರೂ. ಅನುದಾನ
* ಪ್ರಸಕ್ತ ವರ್ಷದಲ್ಲಿ ರಾಜ್ಯದ 1000 ಕೆರೆಗಳ ಅಭಿವೃದ್ಧಿ, ತಲಾ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ, ಗ್ರಾಮ ಒನ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ ಮಾಡಲು ಯೋಜನೆ ರೂಪಿಸಲಾಗಿದೆ.
* ಕಾಳಿ ನದಿಯಿಂದ ನೀರನ್ನು ಬಳಸಿಕೊಂಡು, ಉತ್ತರ ಕರ್ನಾಟಕದ 5 ಜಿಲ್ಲೆಗಳಿಗೆ ಕುಡಿಯುವ ನೀರಿನ ಯೋಜನೆ ರೂಪಿಸಲು ಕ್ರಮ.












Click it and Unblock the Notifications