ಕರ್ನಾಟಕ ಬಜೆಟ್ 2022: ಪ್ರವಾಸೋದ್ಯಮ ಇಲಾಖೆಗೆ ಸಿಕ್ಕಿದ್ದೇನು?|

ಬೆಂಗಳೂರು, ಮಾರ್ಚ್ 4: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4ರ ಮಧ್ಯಾಹ್ನ 12.30ಕ್ಕೆ ಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ಅಭಿವೃದ್ಧಿ ಪರವಾಗಿದ್ದು, ಪಂಚಸೂತ್ರಗಳ ಆಧಾರದ ಬಜೆಟ್ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಪ್ರವಾಸೋದ್ಯಮ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕಿರುವ ಅನುದಾನದ ಬಗ್ಗೆ ಮುಖ್ಯಾಂಶಗಳು ಇಲ್ಲಿವೆ...

ಪ್ಯಾಕೇಜ್ ಟ್ರಿಪ್ ಸೇವೆ
* ಕಾಶಿಯಾತ್ರೆ ಕೈಗೊಳ್ಳುವವರಿಗೆ 5 ಸಾವಿರ ರು ಸಹಾಯಧನ ಘೋಷಿಸಲಾಗಿದೆ. ಸುಮಾರು 30 ಸಾವಿರ ಯಾತ್ರಾರ್ಥಿಗಳಿಗೆ ಸಹಾಯಧನ ಸಿಗಲಿದೆ.
* ಧರ್ಮಸ್ಥಳ, ಕುಕ್ಕೆ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ಮರವತ್ತೂರುಗೆ ಪ್ಯಾಕೇಜ್ ಟ್ರಿಪ್ ಸೇವೆ ಆರಂಭ
* ಪುಣ್ಯ ಕ್ಷೇತ್ರಗಳಿಗೆ ಕೆಎಸ್ ಟಿಡಿಸಿ ವತಿಯಿಂದ ಪ್ರವಾಸಕ್ಕೆ ವ್ಯವಸ್ಥೆ
* ಪರ್ವತಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟ ಮತ್ತು ಬಾಬಾ ಬುಡನ್ ಗಿರಿ ದತ್ತಪೀಠ, ಮುಳ್ಳಯ್ಯನಗಿರಿಧಾಮಗಳಲ್ಲಿ ರೋಪ್ ವೇ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ

Karnataka Budget 2022 Highlights for Tourism sector in Kannada

* ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ ಮೀಸಲಾಗಿಡುತ್ತದೆ.
* ಪ್ರಸ್ತಾವಿತ ಯೋಜನೆಯಡಿಯಲ್ಲಿ ನಂದಿ ಬೆಟ್ಟದಲ್ಲಿ 93 ಕೋಟಿ ವೆಚ್ಚದಲ್ಲಿ ರೋಪ್ ವೇ, ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ರೋಪ್ ವೇ ನಿರ್ಮಾಣಕ್ಕೆ ಕ್ರಮ
* ಜೋಗದಲ್ಲಿ 116 ಕೋಟಿ ವೆಚ್ಚದಲ್ಲಿ ಹೋಟೆಲ್ ಮತ್ತು ರೋಪ್ ವೇ
* ಬೇಲೂರು, ಹಳೆಬೀಡು, ಸೋಮನಾಥಪುರ ಸೇರಿ ಹೊಯ್ಸಳರ‌ ಸ್ಮಾರಕ ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೆ ಕ್ರಮ.
* ಹಂಪಿ-ಬಾದಾಮಿ, ಐಹೊಳೆ- ಪಟ್ಟದಕಲ್ಲು-ವಿಜಯಪುರ ಪ್ರವಾಸಿ ವೃತ್ತ, ಮೈಸೂರು-ಶ್ರೀರಂಗಪಟ್ಟಣ-ಹಾನ-ಬೇಲೂರು- -ಹಳೆಬೀಡು ಪ್ರವಾಸಿ ವೃತ್ತ ಅಭಿವೃದ್ಧಿಗೆ ಕ್ರಮ
* ಕಡಲತೀರದ ಪ್ರವಾಸೋದ್ಯಮ ಉತ್ತೇಜನಕ್ಕೆ ಸಿಆರ್‌ಜಡ್ ಮಾನದಂಡ ಸಡಿಲಗೊಳಿಸಲು ಕೇಂದ್ರ ಸರ್ಕಾರಕ್ಕೆ ಮನವಿ.
* ತದಡಿ ಬಂದರಿನಲ್ಲಿ ಸಮಗ್ರ ಪರಿಸರ-ಪ್ರವಾಸೋದ್ಯಮ ಕೇಂದ್ರ ಅಭಿವೃದ್ಧಿ
* ಬೀದರ್ ಹಾಗೂ ಕಲಬುರಗಿ ಕೋಟೆಗಳ ಪುನರುಜ್ಜೀವನಕ್ಕೆ ಕ್ರಮ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+