ಅರ್ಚಕರ ತಸ್ತೀಕ್ ಭತ್ಯೆ, ಬಜೆಟ್‌ನಲ್ಲಿ ಘೋಷಣೆ: ಶಶಿಕಲಾ ಜೊಲ್ಲೆ
ಬೆಂಗಳೂರು, ಮಾರ್ಚ್ 4: ರಾಜ್ಯದ ಮುಜರಾಯಿ ಇಲಾಖೆ 'ಸಿ' ದರ್ಜೆ ದೇವಾಲಯಗಳ ಅರ್ಚಕರ ತಸ್ತೀಕ್ ಭತ್ಯೆಯನ್ನು ಬಜೆಟ್‌ನಲ್ಲಿ ಹೆಚ್ಚಿಸುವ ನಿರೀಕ್ಷೆ ಇದೆ. ದೇವಸ್ಥಾನಗಳ ಅಭಿವೃದ್ದಿಯತ್ತ ವಿಶೇಷ ಕಾಳಜಿಯನ್ನು ಹೊಂದಿರುವ ಮುಖ್ಯಮಂತ್ರಿಗಳು ಮುಂದಿನ ಆಯವ್ಯಯದಲ್ಲಿ ದೇವಸ್ಥಾನಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡಲಿದ್ದಾರೆ,'' ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು.
ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಬಜೆಟ್‌ನಲ್ಲಿ ಸಿ ಗ್ರೇಡ್ ದೇವಸ್ಥಾನಗಳಲ್ಲಿ ಅರ್ಚಕರ ಭತ್ಯೆ ಹೆಚ್ಚಿಸಲಾಗುವುದು ಎಂದರು. ಹೊಸಪೇಟೆಯ ಕೃಷ್ಣ ಮಠದಲ್ಲಿ ಗುರುವಾರ ಸಂಜೆ ಶ್ರೀ ರಾಘವೇಂದ್ರ ಸ್ವಾಮಿಗಳ ಸಪ್ತಾಹ ಉದ್ಘಾಟಿಸಿ ಮಾತನಾಡಿ, ದೇವಸ್ಥಾನದ ಅರ್ಚಕರಿಗೆ 6ನೇ ವೇತನ ಆಯೋಗದ ಶಿಫಾರಸನ್ನು ಜಾರಿಗೊಳಿಸಲಾಗಿದೆ. ಎ ಗ್ರೇಡ್ ದೇಗುಲಗಳ ಸಿಬ್ಬಂದಿಗಳಿಗೆ 6ನೇ ವೇತನ ಆಯೋಗದ ಅನ್ವಯ ಸಂಬಳ, ಭತ್ಯೆ ಸಿಗುತ್ತಿದೆಅಲ್ಲದೆ, ಆರೋಗ್ಯ ವಿಮಾ ರಕ್ಷಣೆಯನ್ನು ಒದಗಿಸಲಾಗಿದೆ, ಇಲಾಖೆಯ ಅಡಿಯಲ್ಲಿ ಬರುವ ಅರ್ಚಕರು ಸಿಬ್ಬಂದಿಗಳಿಗೆ ಅನ್ವಯವಾಗಲಿದೆ ಎಂದರು.
ಎಲ್ಲ ದೇವಸ್ಥಾನಗಳಿಗೂ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲಾಗುವುದು, ನಮ್ಮ ಸರಕಾರ ದೇವಸ್ಥಾನಗಳ ಅಭಿವೃದ್ದಿಯತ್ತ ವಿಶೇಷ ಕಾಳಜಿಯನ್ನು ಹೊಂದಿದೆ. ದೇವಸ್ಥಾನಗಳ ಸಮಗ್ರ ಅಭಿವೃದ್ದಿ ಹಾಗೂ ನಮ್ಮ ರಾಜ್ಯದ ಭಕ್ತಾದಿಗಳಿಗೆ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರತ್ತ ನಾವು ಗಮನ ನೀಡುತ್ತಿದ್ದೇವೆ ಎಂದರು.

ಈ ಬಾರಿಯ ಆಯವ್ಯಯದಲ್ಲಿ 119 ಕೋಟಿ ರೂಪಾಯಿಗಳ ಅನುದಾನವನ್ನ ಮುಜರಾಯಿ ಇಲಾಖೆಗೆ ನೀಡಲಾಗಿತ್ತು. ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ದೇವಾಲಯಗಳ ಅಭಿವೃದ್ದಿಗೆ 168 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ನೀಡಿದ್ದು, ಒಟ್ಟಾರೆಯಾಗಿ ಪ್ರಸಕ್ತ ವರ್ಷ ಇದುವರೆಗೂ 287 ಕೋಟಿ ಅನುದಾನ ನೀಡಲಾಗಿದೆ. ಪ್ರತಿವರ್ಷ ಬಜೆಟ್‌ನಲ್ಲಿ 60 ರಿಂದ 70 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಲಾಗುತ್ತಿತ್ತು, ಬಿಜೆಪಿ ಸರಕಾರ ನಾಲ್ಕು ಪಟ್ಟು ಹೆಚ್ಚು ಅನುದಾನ ನೀಡಲಾಗಿದ್ದು ಈ ಬಾರಿಯ ಬಜೆಟ್‌ನಲ್ಲಿ ಇನ್ನೂ ಹೆಚ್ಚಿನ ಅನುದಾನ ಸಿಗುವ ಭರವಸೆಯನ್ನು ವ್ಯಕ್ತಪಡಿಸಿದರು.
ಈಗಾಗಲೇ ಶ್ರೀಶೈಲ, ಅಯೋಧ್ಯ, ಪಂಡರಾಪುರ ಸೇರಿದಂತೆ ಹಲವು ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.
ಮುಜರಾಯಿ ಇಲಾಖೆ ಅಧೀನದಲ್ಲಿ ರಾಜ್ಯದಾದ್ಯಂತ 34,000 ಕ್ಕೂ ಅಧಿಕ ದೇವಸ್ಥಾನಗಳು ಇವೆ. ಇದರಲ್ಲಿ ಹೆಚ್ಚಿನ ಆದಾಯ ಬರುವ ದೇವಸ್ಥಾನಗಳನ್ನು "ಎ" ಗ್ರೇಡ್ ಎಂದು, ಕಡಿಮೆ ಆದಾಯ ಗಳಿಸುವ ದೇವಸ್ಥಾನಗಳನ್ನು "ಬಿ" ಗ್ರೇಡ್ ಎಂದು ಹಾಗೂ ಯಾವುದೇ ಆದಾಯ ಇಲ್ಲದ ದೇವಸ್ಥಾನಗಳನ್ನು "ಸಿ" ಗ್ರೇಡ್‌ನಲ್ಲಿ ವಿಂಗಡಿಸಲಾಗಿದೆ. ಈ ಎಲ್ಲಾ ಬಗೆಯ ದೇವಸ್ಥಾನಗಳು ಸೇರಿ ಸುಮಾರು 40,000 ಸಿಬ್ಬಂದಿ ಇದ್ದಾರೆ.












Click it and Unblock the Notifications