Karnataka Budget 2023: ಉ.ಕನ್ನಡ ಜನತೆಗೆ ಗುಡ್‌ನ್ಯೂಸ್‌ , ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ

ರಾಜ್ಯದ ಹಣಕಾಸು ಸಚಿವರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಜನತೆಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಘೋಷಣೆ ಮಾಡಿದ್ದಾರೆ.

ಬೆಂಗಳೂರು, ಫೆಬ್ರವರಿ 17: ರಾಜ್ಯದ ಹಣಕಾಸು ಸಚಿವರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. 3,09,182 ಕೋಟಿ ರೂಪಾಯಿ ಗಾತ್ರದ ಬಜೆಟ್‌ ಅನ್ನು ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಲಾಗಿದೆ.

'ಎಲ್ಲರಿಗೂ ಆರೋಗ್ಯ.. ಎಲ್ಲೆಡೆಯೂ ಆರೋಗ್ಯ' ಎನ್ನುವ ಧ್ಯೇಯ ವಾಕ್ಯದೊಂದಿಗೆ ಈ ಬಾರಿ ಆರೋಗ್ಯ ಕ್ಷೇತ್ರಕ್ಕೆ 15,151 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಜನತೆಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿದೆ.

ಪ್ರಸಕ್ತ ವರ್ಷದದಲ್ಲಿ ರಾಯಚೂರಿನಲ್ಲಿ ಏಮ್ಸ್‌ ಮಾದರಿಯ ಆಸ್ಪತ್ರೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಫಾಪಿಸಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ. ಇನ್ನು ಕಾರವಾರದಲ್ಲಿ ಪ್ರಗತಿಯಲ್ಲಿರುವ 450 ಹಾಸಿಗೆ ಸಾಮಥ್ಯದ ಆಸ್ಪತ್ರೆಗಳ ನಿರ್ಮಾಣವನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

Karnataka Budget 2023: Announcement Of Super Specialty Hospital For Uttara Kannada District

ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಆಸ್ಪತ್ರೆಗಾಗಿ ಹತ್ತಾರು ಹೋರಾಟಗಳು ನಡೆದರೂ ಸಹ ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ ಹೊನ್ನವರದ ರೋಗಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಆಂಬ್ಯುಲೆನ್ಸ್‌ ಉಡುಪಿ ಶಿರಸಿ ಬಳಿಯಲ್ಲಿ ಭೀಕರ ಅಪಘಾತಕ್ಕೊಳಗಾಗಿತ್ತು. ಈ ಘಟನೆ ಬಳಿಕ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಕೂಗು ಜೋರಾಗಿದ್ದು, ಟ್ವಿಟರ್‌ ಸೇರಿದಂತೆ ಅನೇಕ ರೀತಿಯಲ್ಲಿ ಅಭಿಯಾನ ನಡೆಸಲಾಗಿತ್ತು. ಕೊನೆಗೂ ಉತ್ತರ ಕನ್ನಡ ಜಿಲ್ಲೆಯ ಜನರ ಒತ್ತಡಕ್ಕೆ ಮಣಿದ ಸರ್ಕಾರ, ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ತಾತ್ವಿಕ ಒಪ್ಪಿಗೆ ನೀಡಿತ್ತು. ಈ ಬಗ್ಗೆ ಆರೋಗ್ಯ ಸಚಿವ ಸುಧಾಕರ್‌ ಉತ್ತರ ಕನ್ನಡ ಭಾಗದ ಜನಪ್ರತಿನಿಧಿಗಳ ಜೊತೆ ಸಭೆ ಕೂಡ ನಡೆಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+