ಕರ್ನಾಟಕ ಬಜೆಟ್ 2023 : ಕೆಎಂಎಫ್ ಮೆಗಾ ಡೈರಿ ಅಭಿವೃದ್ಧಿಗೆ ಬಳ್ಳಾರಿಗೆ 100 ಕೋಟಿ ರೂಪಾಯಿ
ಬಳ್ಳಾರಿಗೆ 2 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆಗೆ ಸರ್ಕಾರದಿಂದ 100 ಕೋಟಿ ರೂ. ಅನುದಾನ
ಬೆಂಗಳೂರು, ಫೆಬ್ರವರಿ. 17: ರಾಜ್ಯದಲ್ಲಿ ಹಾಲು ಉತ್ಪಾದನೆ ಮತ್ತು ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮೆಗಾ ಡೈರಿ ಸ್ಥಾಪನೆಗೆ ಅನುದಾನ ಜಾರಿ ಮಾಡಿದೆ.
ಪ್ರಸಕ್ತ ವರ್ಷದಲ್ಲಿ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಉತ್ಪಾದನೆಯನ್ನು ಹೆಚ್ಚಿಸಲು, ಬಳ್ಳಾರಿ ಜಿಲ್ಲೆಯಲ್ಲಿ ಪ್ರತಿ ದಿನ 2 ಲಕ್ಷ ಲೀಟರ್ ಹಾಲು ಸಂಸ್ಕರಣಾ ಸಾಮರ್ಥ್ಯದ ಮೆಗಾ ಡೈರಿಯನ್ನು 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
ಇನ್ನು, ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆಗೆ ಸರ್ಕಾರದಿಂದ 90 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ 20,000 ಫಲಾನುಭವಿಗಳಿಗೆ 355 ಕೋಟಿ ರೂಪಾಯಿ ವೆಚ್ಚದಲ್ಲಿ ಕುರಿ ಮತ್ತು ಮೇಕೆ ಘಟಕಗಳನ್ನು ಸ್ಥಾಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಿಎಂ ಬಸವರಾಜ ಬೊಮ್ಮಾಯಿ ಅವರ ಕೊನೆಯ ಬಜೆಟ್ ಇದಾಗಿದ್ದು, ಕೃಷಿ, ತೋಟಗಾರಿಕೆ ವಲಯಗಳಿಗೆ 9,456 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ.
ವಿಧಾನಸಭಾ ಚುನಾವಣೆಯ ಹತ್ತಿರದಲ್ಲಿರುವ ಕಾರಣ ಇದು ಬಿಜೆಪಿಗೆ ಮತದಾರರನ್ನು ಸೆಳೆಯುವ ಬಜೆಟ್ ಕೂಡ ಆಗಿದೆ.












Click it and Unblock the Notifications