Karnataka Budget 2023: ವಿದ್ಯಾರ್ಥಿಗಳಿಗಾಗಿ 'ಮಕ್ಕಳ ಬಸ್ಸು' ಎಂಬ ಹೊಸ ಯೋಜನೆ ಘೋಷಣೆ

2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ವಿದ್ಯಾರ್ಥಿಗಳಿಗಾಗಿ “ಮಕ್ಕಳ ಬಸ್ಸು” ಎಂಬ ಹೊಸ ಯೋಜನೆ ಘೋಷಣೆ ಮಾಡಲಾಗಿದೆ.

ಬೆಂಗಳೂರು ಫೆಬ್ರವರಿ 17: ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಅಯ್ಯವ್ಯಯ ಮಂಡನೆ ಮಾಡಿದರು. ಈ ಬಜೆಟ್‌ನಲ್ಲಿ ಸಾರ್ವಜನಿಕ ಬಸ್‌ಗಳನ್ನು ಅವಲಂಬಿಸಿರುವ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 'ಮಕ್ಕಳ ಬಸ್ಸು'' ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದರು. ಈ ಯೋಜನೆಯಡಿ ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ.ವೆಚ್ಚದಲ್ಲಿ 1000 ಹೊಸ 'ಮಕ್ಕಳ ಬಸ್ಸು'ಗಳು ಕಾರ್ಯಾಚರಣೆ ಪ್ರಾರಂಭಿಸಲಾಗುತ್ತಿದೆ. ಇದರಿಂದ ಎರಡು ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ರಾಜ್ಯ ಬಿಜೆಪಿ ಸರ್ಕಾರದ ಮಹತ್ವದ ಯೋಜನೆಯಾಗಿರುವ ರೈತ ವಿದ್ಯಾನಿಧಿ ಯೋಜನೆಯನ್ನು ಈ ಬಾರಿ ಮಕ್ಕಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಬಜೆಟ್ ನಲ್ಲಿ ಸಿಎಂ ಘೋಷಣೆ ಮಾಡಿದ್ದಾರೆ. ರಾಜ್ಯದ 10.32ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯ ಅಡಿ ಈವರೆಗೂ 725 ಕೋಟಿ ರೂಪಾಯಿ ಮೊತ್ತವನ್ನು ನೀಡಲಾಗಿದೆ. 2022-23ರಲ್ಲಿ ಈ ಸೌಲಭ್ಯವನ್ನು ಭೂರಹಿತ ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರು ಹಾಗೂ ಆಟೋ ರಿಕ್ಷಾ ಚಾಲಕರ ಮಕ್ಕಳಿಗೆ ವಿಸ್ತರಣೆ ಮಾಡಲಾಗಿತ್ತು. ಹೆಚ್ಚುವರಿಯಾಘಿ ಮೂರು ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ರೂಪಾಯೊ ಮೊತ್ತವನ್ನು ನೀಡಲಾಘಿದೆ. ಪ್ರಸಕ್ತ ವರ್ಷ ಈ ಯೋಜನೆಯನ್ನು ನಿಂಪಿಗರ ಮಕ್ಕಳಿಗೆ ವಿಸ್ತರಣೆ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ.

Karnataka Budget 2023 : CM Basavaraj Bommai Announced Makkala Bus scheme for students

ಎಲ್ಲಾ ಪೌಢಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಹೊಂದಲು ಅನುವು ಮಾಡಿಕೊಡುವ ದೃಷ್ಟಿಯಿಂದ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆಯನ್ನು ಪ್ರಾರಂಭ ಮಾಡಲಾಗುತ್ತದೆ. ಇದರ ಅಡಿಯಲ್ಲಿ ಸರ್ಕಾರಿ ಪದವಿಪೂರ್ವ ತ್ತು ಸರ್ಕಾರ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುತ್ತದೆ. ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ ಎಂಟು ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+