Karnataka Budget 2023: ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ ಹಂಚಿಕೆ ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದ ಹಣಕಾಸು ಸಚಿವರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ ಹಂಚಿಕೆಯಾಗಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು, ಫೆಬ್ರವರಿ 17: ರಾಜ್ಯದ ಹಣಕಾಸು ಸಚಿವರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. 3,09,182 ಕೋಟಿ ರೂಪಾಯಿ ಗಾತ್ರದ ಬಜೆಟ್‌ ಅನ್ನು ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಲಾಗಿದೆ.

ವಿಧಾನಸೌಧದಲ್ಲಿ ಬಜೆಟ್ ಭಾಷಣ ಆರಂಭಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ "ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಮುಂದಿನ 25 ವರ್ಷಗಳ ಅಮೃತ ಕಾಲ ಗುರಿಯೊಂದಿಗೆ ಅಭಿವೃದ್ಧಿ ಪಥದಲ್ಲಿ ನಡೆಯೋಣ. ಆ ಗುರಿಯೊಂದಿಗೆ ಈ ಬಜೆಟ್ ಮಂಡಿಸುತ್ತಿದ್ದೇನೆ" ಎಂದು ತಿಳಿಸಿದರು.

ಈ ಬಾರಿಯ ಬಜೆಟ್‌ನಲ್ಲಿ ಕೃಷಿ, ಕೈಗಾರಿಕೆ, ಶಿಕ್ಷಣ, ಮಹಿಳಾ ಅಭಿವೃದ್ಧಿ, ರೈತರಿಗೆ ವಿಶೇಷ ಅನುದಾನ ಸೇರಿದಂತೆ ವಿವಿಧ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. 2023-24ನೇ ಸಾಲಿನ ಬಜೆಟ್‌ನಲ್ಲಿ ಇಲಾಖಾವಾರು ಅನುದಾನದ ಹಂಚಿಕೆ ಈ ಕೆಳಗಿನಂತಿದೆ.

Karnataka Budget 2023: Department Wise Allocation

*ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ 37,960 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

*ರಾಜ್ಯ ಬಜೆಟ್‌ನಲ್ಲಿ ಜಲಸಂಪನ್ಮೂಲ ಇಲಾಖೆಗೆ 22,854 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

*ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ 20,494 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

*ರಾಜ್ಯ ಬಜೆಟ್‌ನಲ್ಲಿ ನಗರಾಭಿವೃದ್ಧಿ ಇಲಾಖೆಗೆ 17,938 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

*ರಾಜ್ಯ ಬಜೆಟ್‌ನಲ್ಲಿ ಕಂದಾಯ ಇಲಾಖೆಗೆ 15,943 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

*ರಾಜ್ಯ ಬಜೆಟ್‌ನಲ್ಲಿ ಆರೋಗ್ಯ ವಲಯ ಇಲಾಖೆಗೆ 15,151 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

*ರಾಜ್ಯ ಬಜೆಟ್‌ನಲ್ಲಿ ಒಳಾಡಳಿತ, ಸಾರಿಗೆ ಇಲಾಖೆಗೆ 14,509 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

*ರಾಜ್ಯ ಬಜೆಟ್‌ನಲ್ಲಿ ಇಂಧನ ಇಲಾಖೆಗೆ 13,803 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

*ರಾಜ್ಯ ಬಜೆಟ್‌ನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 11,163 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

*ರಾಜ್ಯ ಬಜೆಟ್‌ನಲ್ಲಿ ಲೋಕೋಪಯೋಗಿ ಇಲಾಖೆಗೆ 10,741 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

*ರಾಜ್ಯ ಬಜೆಟ್‌ನಲ್ಲಿ ಕೃಷಿ, ತೋಟಗಾರಿಕೆ ಇಲಾಖೆಗೆ 9,456 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

*ರಾಜ್ಯ ಬಜೆಟ್‌ನಲ್ಲಿ ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆಗೆ 5,676 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

*ರಾಜ್ಯ ಬಜೆಟ್‌ನಲ್ಲಿ ಆಹಾರ ವಲಯ ಇಲಾಖೆಗೆ 4,600 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

*ರಾಜ್ಯ ಬಜೆಟ್‌ನಲ್ಲಿ ವಸತಿ ಇಲಾಖೆಗೆ 3,787 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

*ರಾಜ್ಯ ಬಜೆಟ್‌ನಲ್ಲಿ ಇತರೆ ಇಲಾಖೆಗೆ 1,16,968 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+