Karnataka Budget 2023: ಒಲಂಪಿಕ್‌ ಹಾಗೂ ಪ್ಯಾರಾಲಿಂಪಿಕ್‌ ವಿಜೇತರಿಗೆ ಗ್ರೂಪ್‌ ಎ ಹುದ್ದೆ, ಕ್ರೀಡಾಪಟುಗಳಿಗೆ ಮೀಸಲಾತಿ ವಿವರ

ಒಲಂಪಿಕ್‌ ಹಾಗೂ ಪ್ಯಾರಾಲಿಂಪಿಕ್‌ ವಿಜೇತರಿಗೆ ಗ್ರೂಪ್‌ ಎ ಹುದ್ದೆ ಮತ್ತು ಏಷಿಯನ್‌ ಹಾಗೂ ಕಾಮನ್‌ ವೆಲ್ತ್‌ ಕ್ರೀಡಾ ವಿಜೇತರಿಗೆ ಗ್ರೂಪ್‌-ಬಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಪ್ರಸಕ್ತ ಸಾಲಿನಿಂದ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಕ್ರೀಡಾಪಟುಗಳಿಗೆ ಪೊಲೀಸ್‌ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಶೇ. 3 ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು ಎಂದು ಅವರು ಹೇಳಿದ್ದಾರೆ. ಈ ಮೂಲಕ ಕ್ರೀಡೆಯಲ್ಲಿ ಸಾಧನೆ ಮಾಡಿವರಿಗೆ ಇನ್ನು ಪೊಲೀಸ್ ಮತ್ತು ಅರಣ್ಯ ಇಲಾಖೆಯಲ್ಲಿ ನೇಮಕಾತಿ ಸುಲಭವಾಗಲಿದೆ.

Karnataka Budget 2023: Group A post recruitment for Olympic and Paralympic winners

ಕರ್ನಾಟಕ ಈಜು ಅಸೋಸಿಯೇಷನ್‌ ಸಹಭಾಗಿತ್ವದಲ್ಲಿ ರಾಜ್ಯದ ಪ್ರತಿಭಾವಂತ ಈಜು ಕ್ರೀಡಾಪಟುಗಳಿಗೆ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಯಶಸ್ವಿಯಾಗಿ ಭಾಗವಹಿಸಲು ತರಬೇತಿಯನ್ನು ನೀಡುವ ಸಲುವಾಗಿ ಮುಂದಿನ ಐದು ವರ್ಷಗಳವರೆಗೆ ಪ್ರತಿ ವರ್ಷ ಎರಡು ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು ಎಂದು ಹೇಳಿದರು.

ಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾ ವಸ್ತು ಸಂಗ್ರಹಾಲಯ

ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲು ಐದು ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು ಮತ್ತು ಕ್ರೀಡಾಪಟುಗಳಿಗೆ ತಂಗಲು ಅನುಕೂಲವಾಗುವಂತೆ ಸುಸಜ್ಜಿತವಾದ ಕ್ರೀಡಾ ವಸತಿ ನಿಲಯವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು. ಇದಕ್ಕಾಗಿ 10 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯವುಳ್ಳ ರಾಜ್ಯದ ಕ್ರೀಡಾಪಟುಗಳನ್ನು ತಯಾರಿಸಲು ಬೆಂಗಳೂರಿನಲ್ಲಿ ಬಾಸ್ಕೆಟ್‌ಬಾಲ್‌ ಪ್ರಾದೇಶಿಕ ತರಬೇತಿ ಕೇಂದ್ರ ಮತ್ತು ಮೈಸೂರಿನಲ್ಲಿ ಸೈಕ್ಲಿಂಗ್‌ ವೇಲೋಡ್ರೋಮ್‌ ಅನ್ನು ತಲಾ 10 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಕ್ರೀಡಾ ಚಟುವಟಿಕೆಗಳಲ್ಲಿ ವಿಶೇಷಚೇತನರ ಮತ್ತು ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಅಗತ್ಯವಾದ ಮೂಲಭೂತ ಸೌಕರ್ಯಗಳು ಮತ್ತು ನುರಿತ ತರಬೇತುದಾರರ ಸೇವೆಯನ್ನು ಒದಗಿಸಲು 10 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+