Karnataka Budget 2023; ರೈತರಿಗೆ ಭರ್ಜರಿ ಗಿಫ್ಟ್ ; ರೈತರಿಗೆ ಬಡ್ಡಿ ರಹಿತ ಸಾಲದ ಮೊತ್ತ 3 ಲಕ್ಷದಿಂದ 5 ಲಕ್ಷ ರೂ.ಗೆ ಹೆಚ್ಚಳ

ರೈತರಿಗೆ ಶೂನ್ಯ ಬಡ್ಡಿಯಲ್ಲಿ ರೈತರಿಗೆ ರೂ.5 ಲಕ್ಷ ಸಾಲ ಸೌಲಭ್ಯ , 30 ಲಕ್ಷಕ್ಕೂ ಹೆಚ್ಚು ರೈತರಿಗೆ 25 ಸಾವಿರ ಕೋಟಿ ರೂ. ಸಾಲ ನೀಡಲಾಗುತ್ತದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು,ಫೆಬ್ರವರಿ17: ಬವಸರಾಜ ಬೊಮ್ಮಾಯ ಅವರು ಬಜೆಟ್ ಮೂಲಕ ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ್ದು, ರೈತರ ಬಡ್ಡಿ ರಹಿತ ಸಾಲ 3 ಲಕ್ಷದಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

ಶುಕ್ರವಾರ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರೈತರಿಗೆ ಶೂನ್ಯ ಬಡ್ಡಿಯಲ್ಲಿ ರೈತರಿಗೆ ರೂ.5 ಲಕ್ಷ ಸಾಲ ಸೌಲಭ್ಯ , 30 ಲಕ್ಷಕ್ಕೂ ಹೆಚ್ಚು ರೈತರಿಗೆ 25 ಸಾವಿರ ಕೋಟಿ ರೂ. ಸಾಲ ನೀಡಲಾಗುತ್ತದೆ ಎಂದಿದ್ದಾರೆ.

ಭೂಸಿರಿ ಎಂಬ ನೂತನ ಯೋಜನೆ ಅಡಿ 10,000 ರೂ. ಸಹಾಯಧನ ನೀಡಲು ಉದ್ದೇಶಿಸಲಾಗಿದೆ. ರೈತ ಸಿರಿ ಯೋಜನೆಯಡಿಯಲ್ಲಿ ಕಿರುಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟರ್​​ಗೆ 10 ಸಾವಿರ ರೂಪಾಯಿ ಪ್ರೋತ್ಸಾಹಧನ ಘೋಷಣೆ ಮಾಡಲಾಗಿದೆ. ರೈತರಿಗೆ ಅತ್ಯಾಧುನಿಕ ಕೃಷಿ ಯಂತ್ರೋಪಕರಣಗಳು ಸುಲಭವಾಗಿ ಗಿ ದೊರೆಯುವಂತೆ ಮಾಡಲು ಕೃಷಿ ಇಲಾಖೆಯು ಈಗಾಗಲೇ ನಿರ್ವಹಿಸುತ್ತಿರುವ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ 300 ಹೈಟೆಕ್‌ 11 ಹಾರ್ವೆಸ್ಟರ್ ಗಳನ್ನು ಹಂತ ಹಂತವಾಗಿ ಒದಗಿಸಲು ಉದ್ದೇಶಿಸಲಾಗಿದೆ. 2023-24ನೇ ಸಾಲಿನಲ್ಲಿ 100 ಹೈಟೆಕ್ ಹಾರ್ವೆಸ್ಟರ್ ಗಳಿಗೆ ತಲಾ 50 ಲಕ್ಷ ರೂ. ನಂತೆ, ಈ ವರ್ಷ 50 ಕೋಟಿ ರೂ. ಒದಗಿಸಲಾಗುವುದು.

Karnataka Budget 2023 Highlights for Agriculture Sector in Kannada

ಇಸ್ರೋ ಸಂಸ್ಥೆ ಸಹಯೋಗದೊಂದಿಗೆ ಡಿಜಿಟಲ್ ಕೃಷಿಯಲ್ಲಿ ಜಿಯೋ-ಸ್ಪೇಷಿಯಲ್ ತಾಂತ್ರಿಕತೆಗಳನ್ನು ಅಳವಡಿಸಲು 50 ಕೋಟಿ ರೂ. ವೆಚ್ಚದಲ್ಲಿ ಒಂದು ಹೊಸ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಈ ಯೋಜನೆಯಿಂದ ದೊರಕುವ ಮಾಹಿತಿಗಳನ್ನು ಉಪಯೋಗಿಸಿ, Precision Farming ಸೇರಿದಂತೆ ತಮ್ಮ ಉತ್ಪಾದನೆಯನ್ನು ಹೆಚ್ಚಿಸಲು ತಿಳಿವಳಿಕೆಯುಳ್ಳ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲು ರೈತರಿಗೆ ಅನುಕೂಲವಾಗಲಿದೆ.
Karnataka Budget 2023 Highlights for Agriculture Sector in Kannada

ಸಹ್ಯಾದ್ರಿ ಯೋಜನೆಯಡಿಯಲ್ಲಿ ಕರಾವಳಿ ಮಲೆನಾಡು ಹಾಗೂ ಅರೆಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ, ಕಿಂಡಿ ನಾಳ ಅಭಿವೃದ್ಧಿ ಕಾಮಗಾರಿಗೆ 75 ಕೋಟಿ ರೂ. ಅನುದಾನ ಮೀಸಲೀಡುವುದಾಗಿ ಘೋಷಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+