Karnataka Budget 2023; ಗ್ರಾಮ ಪಂಚಾಯಿತಿಗೆ 10 ಲಕ್ಷ ಅನುದಾನ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್‌ನಲ್ಲಿ

ಬೆಂಗಳೂರು, ಫೆಬ್ರವರಿ 17; ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಬಾರಿಯ ಒಟ್ಟು ಬಜೆಟ್ ಗಾತ್ರ 309182 ಕೋಟಿ ರೂ. ಆಗಿದೆ.

ಶುಕ್ರವಾರ ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಬಜೆಟ್ ಭಾಷಣ ಆರಂಭಿಸಿದ್ದಾರೆ. ಕೃಷಿ, ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ಗ್ರಾಮೀಣಾಭಿವೃದ್ಧಿಗೂ ಬಜೆಟ್‌ನಲ್ಲಿ ವಿಶೇಷ ಗಮನ ನೀಡಲಾಗಿದೆ.

Karnataka Budget 2023 Highlights for Gram Panchayat In Kannada

ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ ಭಾಷಣದಲ್ಲಿ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೆ 10 ಲಕ್ಷ ರೂಪಾಯಿ ಅನುದಾನವನ್ನು ಘೋಷಣೆ ಮಾಡಿದರು. ಗ್ರಾಮಗಳ ಅಭವೃದ್ಧಿಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಮಹತ್ವದ್ದಾಗಿದೆ.

ಬಸವರಾಜ ಬೊಮ್ಮಾಯಿ ಅವರು ತಮ್ಮ ಬಜೆಟ್ ಭಾಷಣದಲ್ಲಿ, "ರಾಜ್ಯದ ಹಣಕಾಸು ಪರಿಸ್ಥಿತಿ ಸದೃಢವಾಗಿದ್ದು ರಾಜಸ್ವ ಸಂಗ್ರಹ ಹೆಚ್ಚಾಗಿದೆ. ಜಿಎಸ್‌ಟಿ ಸಂಗ್ರಹ ಶೇ 26ರಷ್ಟು ವೃದ್ಧಿಯಾಗಿದೆ. ಮುದ್ರಣ ಹಾಗೂ ನೋಂದಣಿ ಶುಲ್ಕ ಸಂಗ್ರಹವೂ ಹೆಚ್ಚಾಗಿದೆ. ತೆರಿಗೆ ಸಂಗ್ರಹ ಶೇ 20ರಷ್ಟು ಹೆಚ್ಚಾಗಿದೆ" ಎಂದು ಹೇಳಿದರು.

ಬಜೆಟ್‌ ಭಾಷಣದಲ್ಲಿ ಅವರು, "ಪ್ರಧಾನಿ ಅವರು ಕರೆ ನೀಡಿರುವ ಮುಂದಿನ 25 ವರ್ಷಗಳ ಅಮೃತ ಕಾಲ ಗುರಿಯೊಂದಿಗೆ ಅಭಿವೃದ್ಧಿಪಥದಲ್ಲಿ ನಡೆಯೋಣ. ಆ ಗುರಿಯೊಂದಿಗೆ ಈ ಬಜೆಟ್ ಮಂಡಿಸುತ್ತಿದ್ದೇನೆ. ರಾಜ್ಯದ ಆರ್ಥಿಕತೆ ಕೋವಿಡ್ ಪೂರ್ವ ಮಟ್ಟ ತಲುಪಿದೆ" ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿಗೆ ಸಿಕ್ಕಿದ್ದೇನು?

* ಗ್ರಂಥಾಲಯಗಳು ಇಲ್ಲದ 300 ಗ್ರಾಮ ಪಂಚಾಯಿತಿಯಲ್ಲಿ ಗ್ರಂಥಾಲಯಗಳನ್ನು ಸ್ಥಾಪನೆ ಮಾಡಲಾಗುತ್ತದೆ.

* ಮೂರು ವರ್ಷಗಳಲ್ಲಿ 5,213 ಗ್ರಾಮ ಪಂಚಾಯಿತಿಗಳಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆ ಮಾಡಲಾಗಿದೆ. ಉಳಿದ ಗ್ರಾಮ ಪಂಚಾಯಿತಿಗಳಲ್ಲಿ 2023ರ ಡಿಸೆಂಬರ್ ಒಳಗೆ ಘಟಕ ನಿರ್ಮಾಣ ಮಾಡಲಾಗುತ್ತದೆ.

* ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಂಥ ಪಾಲಕರ ಗೌರವಧನವನ್ನು 1000 ರೂ. ಹೆಚ್ಚಿಸಲಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.

* ಪ್ರತಿವರ್ಷ 2 ಸಾವಿರ ಕೆರೆಗಳನ್ನು 200 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತದೆ. ಈ ಮೂಲಕ ಪಂಚಾಯತಿ ವ್ಯಾಪ್ತಿಯ ಕೆರಗಳ ಪುನರುಜ್ಜೀವನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+