Karnataka Budget; ಕುರಿಗಾಯಿಗಳಿಗೆ ಸಿದ್ದರಾಮಯ್ಯ ಕೊಡುಗೆ

ಬೆಂಗಳೂರು, ಜುಲೈ 07; ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ದಾಖಲೆಯ 14ನೇ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯ ಕುರಿಗಾಯಿಗಳಿಗೆ ಕೊಡುಗೆಯನ್ನು ನೀಡಿದ್ದಾರೆ.

ತಮ್ಮ ಬಜೆಟ್‌ ಭಾಷಣದಲ್ಲಿ ಸಿದ್ದರಾಮಯ್ಯ 'ಅನುಗ್ರಹ ಯೋಜನೆ' ಮರು ಜಾರಿಗೊಳಿಸುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ಆಕಸ್ಮಿಕವಾಗಿ ಕುರಿ ಸತ್ತರ 5 ಸಾವಿರ, ಕುರಿ ಮರಿಗೆ 2,500 ರೂ. ಪರಿಹಾರವನ್ನು ನೀಡಲಾಗುತ್ತದೆ.

Karnataka budget 2023 Re Introduce Of Anugraha Scheme

ಬಜೆಟ್ ಭಾಷಣದಲ್ಲಿ ಸಿದ್ದಯ್ಯ ಪುರಾಣಿಕರ

ನಡೆಯದ ಹಾದಿಯಲ್ಲಿ ಎಡವಿದೆನೆಂದರೆ ಒಪ್ಪುವುದೆ ಅಯ್ಯಾ?
ಕಾಣದ ಮುಖದ ಕುಂದನೆಣಿಸಿದರೆ ಒಪ್ಪುವುದೆ ಅಯ್ಯಾ?
ಉಣ್ಣದ ಅಡಿಗೆಯ ರುಚಿಯ ಟೀಕಿಸಿದರೆ ಒಪ್ಪುವುದೆ ಅಯ್ಯಾ?
ನೋಡದುದನ್ನು ನೋಡಿದಂತೆ ವರ್ಣಿಸಿದರೆ ಒಪ್ಪುವುದೆ ಅಯ್ಯಾ? ಕವನವನ್ನು ಓದಿದ ಸಿದ್ದರಾಮಯ್ಯ ಜನರ ಕಲ್ಯಾಣವೇ ತಮ್ಮ ಪ್ರಮುಖ ಗುರಿ ಎಂದು ಘೋಷಣೆ ಮಾಡಿದರು.

ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ, "ಅನುಗ್ರಹ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಆದರೆ, ಹಿಂದಿನ ಸರ್ಕಾರ ಅದನ್ನು ನಿರ್ಲಕ್ಷಿಸಿರುವುದು ಅವರ ರೈತ ವಿರೋಧಿ ಧೋರಣೆಯನ್ನು ಬಿಂಬಿಸುತ್ತದೆ. ಈ ಯೋಜನೆಯನ್ನು ಪುನರ್‌ಸ್ಥಾಪಿಸಿ, ಕುರಿ ಮತ್ತು ಮೇಕೆಗಳಿಗೆ 5,000 ರೂ. ಹಾಗೂ ಹಸು, ಎಮ್ಮೆ ಮತ್ತು ಎತ್ತುಗಳಿಗೆ 10,000 ರೂ. ಪರಿಹಾರ ಒದಗಿಸಲಾಗುವುದು" ಎಂದು ಘೋಷಣೆ ಮಾಡಿದರು.

"ಗೋವಿನಿಂದ ಗ್ರಾಹಕರವರೆಗೆ ಗುಣಮಟ್ಟದ ಶ್ರೇಷ್ಠತೆ ಎಂಬ ಧೈಯವಾಕ್ಯ ಹೊಂದಿರುವ 'ನಂದಿನಿ'ಯು ಕೋಟ್ಯಾಂತರ ಜನರ ಬದುಕಿಗೆ ಆಸರೆಯಾಗಿದೆ. ನಂದಿನಿ ಬ್ರಾಂಡ್ ಕನ್ನಡಿಗರೊಂದಿಗೆ ಭಾವನಾತ್ಮಕ ಬೆಸುಗೆಯನ್ನು ಹೊಂದಿದ್ದು, ಇದನ್ನು ಉಳಿಸಿ ಇನ್ನಷ್ಟು ಬೆಳೆಸಲು ನಮ್ಮ ಸರ್ಕಾರ ಬದ್ಧವಾಗಿದೆ" ಎಂದರು.

"ರಾಜ್ಯದಲ್ಲಿ 2022-23 ನೇ ಸಾಲಿನಲ್ಲಿ ಚರ್ಮಗಂಟು ರೋಗದ ಹರಡುವಿಕೆ, ಪಶು ಆಹಾರದ ಕಚ್ಚಾ ಪದಾರ್ಥಗಳ ಬೆಲೆ ಏರಿಕೆ, ವಾಣಿಜ್ಯ ಬೆಳೆಗಳ ಪ್ರದೇಶಗಳ ಹೆಚ್ಚಳ ಹಾಗೂ ಮುಂಗಾರು ತಡವಾಗಿರುವ ಕಾರಣಗಳಿಂದ ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಹಾಲಿನ ಇಳುವರಿಯಲ್ಲಿ ಶೇ.5 ರಿಂದ ಶೇ.7 ಇಳಿಕೆಯಾಗಿರುತ್ತದೆ. ಉತ್ತಮ ಹಾಲು ನೀಡುವ ತಳಿಗಳನ್ನು ಅಭಿವೃದ್ಧಿಪಡಿಸುವ ಹಾಗೂ ರೋಗಗಳಿಂದ ಬಳಲುತ್ತಿರುವ ಜಾನುವಾರುಗಳಿಗೆ ಸೂಕ್ತ ಸಮಯದಲ್ಲಿ ಸಮರ್ಪಕ ಚಿಕಿತ್ಸೆ, ಔಷಧಿ ಮತ್ತು ಲಸಿಕೆಗಳನ್ನು ಒದಗಿಸುವ ಮೂಲಕ ಹಾಲಿನ ಇಳುವರಿಯನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು" ಎಂದು ಹೇಳಿದರು.

ನಮ್ಮ ಸರ್ಕಾರ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಅತ್ಯಂತ ಜನಪ್ರಿಯ ಹಾಗೂಉ ಉಪಯುಕ್ತ ಯೋಜನೆಯಾಗಿತ್ತು. ಈ ಯೋಜನೆಯನ್ನು ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಪ್ರಕಟಿಸಿದರು.

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು 'ನವೋದ್ಯಮ' ಎಂಬ ಹೊಸ ಯೋಜನೆಯಡಿ 10 ಕೋಟಿ ರೂ. ಒದಗಿಸಲಾಗುವುದು ಎಂದರು.

ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾಡಲು ಅನುಕೂಲವಾಗುವಂತೆ ಮಾರುಕಟ್ಟೆಯಲ್ಲಿ ಮಾರಾಟ 'ನಂದಿನಿ' ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆ ರೂಪಿಸಲು 10 ಕೋಟಿ ರೂ. ಒದಗಿಸಲಾಗುವುದು.

ರೈತ ಉತ್ಪಾದಕ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ ತಾಲ್ಲೂಕುಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ತಲಾ 20 ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.4 ರ ಬಡ್ಡಿ ಸಹಾಯಧನ ನೀಡಲಾಗುವುದು.

ರೈತ ಉತ್ಪಾದಕ ಸಂಸ್ಥೆಗಳ ಉತ್ಪನ್ನಗಳನ್ನು ರಫ್ತು ಮಾಡಲು ಅನುಕೂಲವಾಗುವಂತೆ ಗೋದಾಮು, ಶೀತಲಗೃಹ ನಿರ್ಮಾಣ ಮತ್ತು ಇತರ ಮೂಲಸೌಕರ್ಯ ಸೃಜನೆಗೆ ಯೋಜನಾ ವೆಚ್ಚದ ಗರಿಷ್ಠ ಶೇ. 20ರಷ್ಟು, ಒಂದು ಕೋಟಿ ರೂ. ಮೀರದಂತೆ Seed Capital ಒದಗಿಸಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+