Karnataka Budget 2024: ಬಜೆಟ್‌ನಲ್ಲಿ ಹೋಟೆಲ್ ವ್ಯಾಪಾರಿಗಳಿಗೆ ಭರ್ಜರಿ ಕೊಡುಗೆ
ಬೆಂಗಳೂರು ಫೆಬ್ರವರಿ 16: ಸಿಎಂ ಸಿದ್ದರಾಮಯ್ಯ ಇಂದು 15ನೇಯ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬಜೆಟ್‌ನಲ್ಲಿ ಹೋಟೆಲ್ ವ್ಯಾಪಾರಿಗಳಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ.
ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ವ್ಯಾಪಾರ ನಡೆಸುತ್ತಿರುವ ಹೋಟೆಲ್ ವ್ಯಾಪರಿಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ಸಿಎಂ ಗುಡ್fನ್ಯೂಸ್ ಕೊಟ್ಟಿದ್ದಾರೆ. ಅದೆಂದರೆ ಇನ್ನು ಮುಂದೆ ಹೋಟೆಲ್ ಮಾಲೀಕರು ರಾತ್ರಿ ಒಂದು ಗಂಟೆಯವರೆಗೆ ವ್ಯಾಪಾರ ನಡೆಸಲು ಅನುಮತಿ ನೀಡಲಾಗಿದೆ.

ಹೀಗಾಗಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಹೋಟೆಲ್ ನಡೆಸುವ ವ್ಯಾಪಾರಿಗಳು ಈ ಸಮಯದ ಸದುಪಯೋಗ ಮಾಡಿಕೊಳ್ಳಬಹುದಾಗಿದೆ. ಲೋಕಸಭಾ ಚುನಾವಣೆ ವರ್ಷದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ಬಗ್ಗೆ ರಾಜ್ಯದ ಜನ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಬಜೆಟ್‌ನಲ್ಲಿ ಬೆಂಗಳೂರಿಗೆ ಅನೇಕ ಕೊಡುಗೆಗಳನ್ನು ನೀಡಲಾಗಿದೆ.
ಬೆಂಗಳೂರು ಸುತ್ತ ಸ್ಯಾಟಲೈಟ್ ಟೌನ್‌ಗಳು
ಬೆಂಗಳೂರು ಸುತ್ತಮುತ್ತಲಿನ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿ ಪಟ್ಟಣಗಳನ್ನು ಸ್ಯಾಟಲೈಟ್ ಟೌನ್‌ಶಿಪ್‌ಗಳಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಬಜೆಟ್ ಮಂಡನೆ ವೇಳೆ ಸಿದ್ದರಾಮಯ್ಯ ಹೇಳಿದರು.

ಜೊತೆಗೆ ಬಹುನಿರೀಕ್ಷೆಯ ಪ್ರಸಕ್ತ ಸಾಲಿನ ಕರ್ನಾಟಕ ಬಜೆಟ್ ನಲ್ಲಿ ಬೆಂಗಳೂರಿನಲ್ಲಿ ನಾಲ್ಕು ಕಾರಿಡಾರ್‌ನಲ್ಲಿ ನಿರ್ಮಾಣವಾಗುತ್ತಿರುವ ಉಪನಗರ ರೈಲು ಯೋಜನೆಗೆ ಚುರುಕುಗೊಳಿಸಲು ಕ್ರಮವಹಿಸಲಾಗಿದೆ. ಚಿಕ್ಕಬಾಣಾವರ-ಬೈಯಪ್ಪನಹಳ್ಳಿವರೆಗಿನ ಕಾರಿಡಾರ್ ಎರಡರ ತ್ವರಿತ ಕಾರ್ಯಾಚರಣೆಗೊಳಿಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್
ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು.












Click it and Unblock the Notifications