Karnataka Budget 2024: ಬಿಟ್ಟಿ ಗ್ಯಾರಂಟಿ, ದಿವಾಳಿ ಎಂದು ಸುಳ್ಳು ಸುದ್ದಿ: ಕೇಂದ್ರದ ವಿರುದ್ಧ ಸಿಎಂ ಕಿಡಿ

ಬೆಂಗಳೂರು, ಫೆಬ್ರವರಿ.16: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16 ರ ಶುಕ್ರವಾರ ಕರ್ನಾಟಕದ 2024-25ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಬಜೆಟ್ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ ಬಜೆಟ್ ಕೂಡ. ಈ ಬಾರಿ 3,71,383 ಕೋಟಿ ರೂಪಾಯಿಯ ಬಜೆಟ್ ಮಂಡಿಸಲಾಗುತ್ತಿದೆ.

ಬಜೆಟ್ ಮಂಡನೆಗೆ ಹೊಸ ಬ್ಯಾಗ್ ಹಿಡಿದು ಬಂದ ಅವರು ಕಾಂಗ್ರೆಸ್ ಸಾಲು ತೊಟ್ಟು ಬಜೆಟ್ ಮಂಡಿಸುತ್ತಿದ್ದಾರೆ. ಶರಣರು, ವಚನಕಾರರು, ಕುವೆಂಪು ಅವರ ಹೇಳಿಕೆಗಳನ್ನು ಉಲ್ಲೇಖಿಸುತ್ತಾ, ಬಸವಣ್ಣ, ಡಾ ಬಿ.ಆರ್. ಅಂಬೇಡ್ಕರ್ ಹೆಸರನ್ನು ಪ್ರಸ್ತಾಪಿಸುತ್ತಾ ಬಜೆಟ್ ಮಂಡನೆ ಮಾಡಿದ್ದಾರೆ. ನಮ್ಮದು ಎಲ್ಲರನ್ನೂ ಒಳಗೊಂಡ ಬಜೆಟ್ ಎಂದು ಘೋಷಿಸಿದ್ದಾರೆ.

Karnataka Budget 2024: CM Siddaramaiahs Budget Speech on Guarantee Schemes

ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ

ಬಜೆಟ್ ಭಾಷಣದ ಆರಂಭದಲ್ಲೇ ಕೇಂದ್ರ ಸರ್ಕಾರ ಮತ್ತು ವಿರೋಧ ಪಕ್ಷಗಳ ಕಿಡಿ ಕಾರಿದ ಸಿಎಂ ಸಿದ್ದರಾಮಯ್ಯ, ಗ್ಯಾರಮಟಿ ಯೋಜನೆಗಳನ್ನು ಬಿಟ್ಟಿ ಎಂದು ಟೀಕೆ ಮಾಡುತ್ತಲೇ ಕೇಂದ್ರ ಸರ್ಕಾರ ಅವುಗಳನ್ನು ನಕಲು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಜೊತೆಗೆ ನಮ್ಮ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ ಎಂದು ಒತ್ತಿ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ. ಗ್ಯಾರಂಟಿ ಯೋಜನೆ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ತಿರುಗಿ ನೋಡುತ್ತಿವೆ. ಹಲವು ದೇಶಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ನಮ್ಮ ಯೋಜನೆಗಳ ಬಗ್ಗೆ ಅಧ್ಯಯನ ನಡೆಸಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Karnataka Budget 2024: CM Siddaramaiahs Budget Speech on Guarantee Schemes

ಮುಂದುವರೆದು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸೀಮಿತವಾಗಿಲ್ಲ. ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಇವು ಪ್ರಮುಖ ಪಾತ್ರ ವಹಿಸಿವೆ. ಶಕ್ತಿ ಯೋಜನೆಯಿಂದ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ 57 ಸಾವಿರ ಕೋಟಿ ಬಳಸಲಾಗುತ್ತಿದೆ. ಐದು ಗ್ಯಾರಂಟಿ ಜಾರಿಯಿಂದ ಸರ್ಕಾರದಲ್ಲಿ ಹಣವಿಲ್ಲ ಎಂದು ವಿಪಕ್ಷಗಳು ಸುಳ್ಳು ಹೇಳುತ್ತಿವೆ. ನಮ್ಮ ಯೋಜನೆಗಳನ್ನು ಟೀಕೆ ಮಾಡುತ್ತಲೇ ನಕಲು ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.

ಈ ಬಜೆಟ್‌ನಲ್ಲಿ ದುರ್ಬಲ ವರ್ಗದವರಿಗೆ ಮತ್ತಷ್ಟು ಆದ್ಯತೆ ನೀಡಲಾಗುವುದು. ಅಭಿವೃದ್ಧಿ ಪೂರಕವಾಗಿ ನಮ್ಮ ಬಜೆಟ್ ಆಗಿದೆ. ಗ್ಯಾರಂಟಿ ಯೋಜನೆ ಮೂಲಕ ಎಲ್ಲಾ ವರ್ಗದವರನ್ನು ವೃದ್ಧಿಗೊಳಿಸಲಾಗುತ್ತಿದೆ. ರಾಜಕೀಯ, ಆರ್ಥಿಕ, ಸಾಮಾಜಿಕ ನ್ಯಾಯ ನೀಡುವುದು ನಮ್ಮ ಆಶಯ. ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಹೆಚ್ಚಳವಾಗಿದೆ. ಇದರಿಂದಾಗಿ ರಾಜ್ಯದಲ್ಲಿ ತೆರಿಗೆ ಸಂಗ್ರಹ ಹೆಚ್ಚಾಗಲಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+