Food Park: ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ನಿರ್ಮಾಣ
ಸಿಎಂ ಸಿದ್ದರಾಮಯ್ಯ ಅವರು ಇಂದು (ಫೆಬ್ರವರಿ 16) ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಈ ವೇಳೆ ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾಮಾಂತರ ಜಿಲ್ಯಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಿದರು.
ಇನ್ನು ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆಯು ಹೆಸರುವಾಸಿ ಆಗಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯೆ ಅವರು ಘೋಷಣೆ ಮಾಡಿದರು.

ಇನ್ನು ಏಷ್ಯಾದಲ್ಲೇ ಅತಿ ಹೆಚ್ಚು ರೇಷ್ಮೆಗೂಡು ಮಾರಾಟ ವಹಿವಾಟು ನಡೆಸುವ ರಾಮನಗರ ಮತ್ತು ಶಿಡ್ಲಘಟ್ಟದಲ್ಲಿರುವ ರೇಷ್ಮೆ ಮಾರುಕಟ್ಟೆಗಳನ್ನು ಮೊದಲನೇ ಹಂತದಲ್ಲಿ 150 ಕೋಟಿ ರೂಪಾಯಿ ವೆಚ್ಚದಲ್ಲಿ ಹೈ-ಟೆಕ್ ಮಾರುಕಟ್ಟೆಗಳನ್ನಾಗಿ ಅಭಿವೃದ್ಧಿ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಈ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ 250 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.












Click it and Unblock the Notifications