Karnataka Budget 2024: ಪ್ರವಾಸೋದ್ಯಮಕ್ಕೆ ಬಜೆಟ್‌ನಲ್ಲಿ ಬಂಪರ್ ಕೊಡುಗೆ- ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನ!
ಬೆಂಗಳೂರು ಫೆಬ್ರವರಿ 16: ಪ್ರವಾಸೋದ್ಯಮಕ್ಕೆ ಬಜೆಟ್‌ನಲ್ಲಿ ಕರ್ನಾಟಕ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಅಂಜನಾದ್ರಿ ಬೆಟ್ಟದಲ್ಲಿನ ಸುತ್ತಮುತ್ತಲಿನ ಪ್ರದೇಶ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ನೀಡಿದೆ.
ಜೊತೆಗೆ ರಾಜ್ಯದ ಪ್ರವಾಸಿ ತಾಣಗಳಲ್ಲಿ 10 ಕೇಬಲ್ ಕಾರ್ ರೋಪ್ ವೇ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಹಲವು ಇಂಟ್ರಪ್ರೇಷನ್ ಸೆಂಟರ್ ತೆರೆಯಲಾಗುವುದು ಎಂದು ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರು 2024-2025ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದಲ್ಲಿ ಪ್ರವಾಸೋದ್ಯಮಕ್ಕೆ ಬಂಪರ್ ಕೊಡುಗೆ ನೀಡಿರುವ ಬಗ್ಗೆ ಪ್ರಸ್ತಾಪಿಸಿದರು. ಕೊಪ್ಪಳ ಜಿಲ್ಲೆಯ ಆಂಜನಾದ್ರಿ ಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಪೌರಾಣಿಕ ಮತ್ತು ಐತಿಹಾಸಿಕ ಮಹತ್ವವನ್ನು ಹೊಂದಿದ್ದು ಇದರ ಅಭಿವೃದ್ಧಿಗೆ 100 ಕೋಟಿ ಅನುದಾನವನ್ನು ನೀಡಲಾಗುವುದು ಎಂದು ಹೇಳಿದರು.
ರಾಜ್ಯದ ಪ್ರವಾಸೋದ್ಯಮ ಸಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಹೆಚ್ಚಿನ ಪ್ರವಾಸಿಗರು ಮತ್ತು ಹೋಡಿಕೆದಾರರನ್ನು ಆಕರ್ಷಿಸಲು ಪ್ರವಾಸೋದ್ಯಮ ನೀತಿಯನ್ನು 2024-2029ಕ್ಕೆ ಪರಿಷ್ಕರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಸಿದರು.

ಮದ್ಯಪ್ರಿಯರಿಗೆ ಬಿಕ್ ಶಾಕ್:
ಸಿಎಂ ಸಿದ್ದರಾಮಯ್ಯ 15ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿರುವರು. ಒಟ್ಟು 3,71, 383 ಕೋಟಿ ರೂ. ಮೊತ್ತದ ಬಜೆಟ್ ಇದಾಗಿದೆ. ಬಜೆಟ್ ಮಂಡನೆ ವೇಳೆ ಮದ್ಯದ ದರ ಮತ್ತೆ ಹೆಚ್ಚಿಸಲು ನಿರ್ಧಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹೌದು.. ಬಿಯರ್ ಸೇರಿದಂತೆ ಎಲ್ಲಾ ಬ್ರ್ಯಾಂಡ್‌ಗಳ ಬೆಲೆಯನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ರಾಜ್ಯ ಸರ್ಕಾರ ಮದ್ಯಪ್ರಿಯರಿಗೆ ಬಿಗ್ ಶಾಕ್ ಕೊಟ್ಟಿದೆ. ನೆರೆ ರಾಜ್ಯಗಳ ಮದ್ಯದ ಬೆಲೆ ಅನುಗುಣವಾಗಿ ಪರಿಷ್ಕರಣೆ ಮಾಡಲು ಯೋಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದರು. 2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.












Click it and Unblock the Notifications