Government employee; ಬಜೆಟ್‌ನಲ್ಲಿ 7ನೇ ಆಯೋಗದ ಘೋಷಣೆ ಏನು?

ಬೆಂಗಳೂರು, ಫೆಬ್ರವರಿ 16; ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಣಕಾಸು ಸಚಿವ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಭಾಷಣದಲ್ಲಿ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಕುರಿತು ಅವರು ಉಲ್ಲೇಖಿಸಿದ್ದಾರೆ.

ಶುಕ್ರವಾರ 3,71,383 ಕೋಟಿ ರೂ. ಮೊತ್ತದ ಬಜೆಟ್‌ ಮಂಡಿಸಿದ ಸಿದ್ದರಾಮಯ್ಯ ಭಾಷಣದಲ್ಲಿ 7ನೇ ರಾಜ್ಯ ವೇತನ ಆಯೋಗದ ಕುರಿತು ಉಲ್ಲೇಖ ಮಾಡಿದರು. ಈಗಾಗಲೇ ಸರ್ಕಾರ ಕೆ. ಸುಧಾಕರ್ ನೇತೃತ್ವದಲ್ಲಿ ರಾಜ್ಯ 7ನೇ ವೇತನ ಆಯೋಗವನ್ನು ರಚನೆ ಮಾಡಿದೆ.

Karnataka Budget 2024: Key Announcement For Government Employee On 7th Pay Commission

ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿಗಳು 7ನೇ ರಾಜ್ಯ ವೇತನದ ಆಯೋಗದ ವರದಿ ಜಾರಿಯ ಮುನ್ಸೂಚನೆ ನೀಡಿದರು. ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ವೇತನ ಆಯೋಗವನ್ನು ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತರ ಪರಿಶೀಲಿಸಿ ಕ್ರಮವಹಿಸಲಾಗುತ್ತದೆ ಎಂದರು.

ಆಯೋಗ ಅವಧಿ ವಿಸ್ತರಣೆ: ಬಜೆಟ್ ಮಂಡನೆ ತಯಾರಿ ಆರಂಭಿಸಿದ್ದ ಸಿದ್ದರಾಮಯ್ಯ ಸೋಮವಾರ ಕೆ. ಸುಧಾಕರ್ ನೇತೃತ್ವದ 7ನೇ ವೇತನ ಆಯೋಗದ ಜೊತೆ ಮಹತ್ವದ ಸಭೆಯನ್ನು ನಡೆಸಿದ್ದರು. ಸರ್ಕಾರಿ ನೌಕರರು ಸಹ ಯಾವ ಘೋಷಣೆ ಮಾಡಲಿದ್ದಾರೆ? ಎಂದು ಕಾದು ಕುಳಿತಿದ್ದರು.

2023ರ ನವೆಂಬರ್‌ನಲ್ಲಿ 7ನೇ ರಾಜ್ಯ ವೇತನ ಆಯೋಗದ ಅವಧಿ ಅಂತ್ಯಗೊಳ್ಳುತ್ತಾ ಬಂದಿತ್ತು. ಆಗ ಕೆ. ಸುಧಾಕರ್ ನೇತೃತ್ವದ ವೇತನ ಆಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತ್ತು. ಆದರೆ ವರದಿಯನ್ನು ಸಲ್ಲಿಕೆ ಮಾಡಿರಲಿಲ್ಲ.

ಬಳಿಕ ಕರ್ನಾಟಕ ಸರ್ಕಾರ ರಾಜ್ಯ 7ನೇ ವೇತನ ಆಯೋಗದ ಅವಧಿಯನ್ನು 15/3/2024ರ ತನಕ ವಿಸ್ತರಣೆ ಮಾಡಿತ್ತು. ಆಯೋಗ ವರದಿ ನೀಡುವ ಮಾರ್ಚ್ 15ರ ಹೊತ್ತಿಗೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುವ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ ಬಜೆಟ್‌ನಲ್ಲಿ ವೇತನ ಆಯೋಗದ ಕುರಿತು ಯಾವುದಾದರೂ ಘೋಷಣೆ ಆಗಲಿದೆಯೇ? ಎಂಬ ನಿರೀಕ್ಷೆ ಇತ್ತು.

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಎರಡು ಬಾರಿ ರಾಜ್ಯ 7ನೇ ವೇತನ ಆಯೋಗದ ಅವಧಿಯನ್ನು ವಿಸ್ತರಣೆ ಮಾಡಿದೆ. ಸರ್ಕಾರ 2023ರ ನವೆಂಬರ್‌ನಲ್ಲಿ ಸರ್ಕಾರ 7ನೇ ರಾಜ್ಯ ವೇತನ ಆಯೋಗದ ವರದಿಯನ್ನು ಪಡೆಯಲಿದೆ ಎಂದು ಅಂದಾಜಿಸಲಾಗಿತ್ತು.

2023ರಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಿತು. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿತು, ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. 2023ರ ನವೆಂಬರ್‌ನಲ್ಲಿ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಸರ್ಕಾರ ಆಯೋಗದ ಅವಧಿ ವಿಸ್ತರಣೆ ಮಾಡಿತು.

7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಬೇಕಾದರೆ ಸರ್ಕಾರಕ್ಕೆ ಆರ್ಥಿಕ ಹೊರೆ ಉಂಟಾಗಲಿದೆ. ಆಯೋಗದ ವರದಿ ಅನ್ವಯ ಸರ್ಕಾರಿ ನೌಕರರ ವೇತನ, ಭತ್ಯೆ ಹೆಚ್ಚಳವಾಗಲಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾತ್ರ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮಾರ್ಚ್ ತಿಂಗಳಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾಗಲಿದೆ. ಚುನಾವಣೆ ಮುಗಿಯುವುದು ಮೇ ತಿಂಗಳಿನಲ್ಲಿ. ಬಳಿಕ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬರುವುದರಿಂದ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಲು ತೊಡಕಾಗಲಿರುವ ಅಂಶವನ್ನು ಸರ್ಕಾರಿ ನೌಕರರು ಆಯೋಗ ತಿಳಿಸಿದ್ದಾರೆ.

ಆದ್ದರಿಂದ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುವುದಕ್ಕೂ ಮೊದಲು 7ನೇ ವೇತನ ಆಯೋಗದ ವರದಿ ಅನುಷ್ಠಾನಗೊಳಿಸಲು ಅನುಕೂಲವಾಗುವಂತೆ ವರದಿಯನ್ನು ಶೀಘ್ರ ಸರ್ಕಾರಕ್ಕೆ ಸಲ್ಲಿಸಲು ಸರ್ಕಾರಿ ನೌಕರರ ಸಂಘ 7ನೇ ವೇತನ ಆಯೋಗದ ಅಧ್ಯಕ್ಷರಿಗೆ ಮನವಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+