Karnataka Budget 2024; ಗ್ರಾಮ ಪಂಚಾಯಿತಿಗೆ ಕೊಡುಗೆಗಳು
ಬೆಂಗಳೂರು, ಫೆಬ್ರವರಿ 16; ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಬಜೆಟ್ ಭಾಷಣದಲ್ಲಿ ಅವರು ಗ್ರಾಮ ಪಂಚಾಯಿತಿಗಳಿಗೆ ಹಲವಾರು ಘೋಷಣೆಗಳನ್ನು ಮಾಡಿದರು.
3,71,383 ಕೋಟಿ ರೂ. ಗ್ರಾತ್ರದ ಬಜೆಟ್‌ನಲ್ಲಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಭಾಷಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಹಲವಾರು ಹೊಸ ಘೋಷಣೆಗಳನ್ನು ಮಾಡಿದರು.

ಕರ್ನಾಟಕದಲ್ಲಿ ಗ್ರಾಮ ಪಂಚಾಯತಿಗಳು ಆರೋಗ್ಯ ರಕ್ಷಣೆ, ಘನತ್ಯಾಜ್ಯ ನಿರ್ವಹಣೆ, ಗ್ರಂಥಾಲಯ ನವೀಕರಣ ಮುಂತಾದ ಕ್ಷೇತ್ರಗಳಲ್ಲಿ ನಾಯಕತ್ವದ ಸಾಮರ್ಥ್ಯವನ್ನು ಪ್ರದರ್ಶಿಸಿವೆ. ಈ ದಿಸೆಯಲ್ಲಿ ಗ್ರಾಮ ಪಂಚಾಯಿತಿಗಳನ್ನು ಸಾಮಾಜಿಕ ಕಳಕಳಿಯುಳ್ಳ ಸ್ಪಂದನಾಶೀಲ ಹಾಗೂ ಸಮರ್ಥ ಗ್ರಾಮ ಸರ್ಕಾರಗಳನ್ನಾಗಿ ರೂಪಿಸಲು ಕ್ರಮವಹಿಸಲಾಗುವುದು ಎಂದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲಾಗುವುದು. ಗ್ರಾಮ ಪಂಚಾಯಿತಿಗಳ ಸಂಪನ್ಮೂಲಗಳನ್ನು ಹೆಚ್ಚಿಸಲು ಗ್ರಾಮ ಪಂಚಾಯಿತಿ ಸ್ವತ್ತುಗಳ Asset Monetisation ನೀತಿಯನ್ನು ಜಾರಿಗೆ ತರಲಾಗುವುದು. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್ ಅನ್ನು ಪ್ರಾರಂಭಿಸಲಾಗುವುದು. ಸೇವಾ ಸಿಂಧು ಪೋರ್ಟಲ್ ಮೂಲಕ ಒದಗಿಸಲಾಗುತ್ತಿರುವ ಎಲ್ಲಾ ಸೇವೆಗಳನ್ನು ಈ ವರ್ಷದಿಂದ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಪ್ರಾರಂಭಿಸಲಾಗುವುದು ಎಂದರು.
ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಿಗದಿತ ಶುಲ್ಕ ಪಾವತಿಯೊಂದಿಗೆ ವ್ಯವಹಾರ ಪರವಾನಗಿಗಳ ಸ್ವಯಂಚಾಲಿತ ನವೀಕರಣಕ್ಕೆ ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ತರಲಾಗುವುದು. ಗ್ರಾಮ ಪಂಚಾಯಿತಿಗಳ ಸಭೆಗಳು ಮತ್ತು ಗ್ರಾಮ ಸಭೆಗಳ ಕಾರ್ಯಕಲಾಪಗಳ ನೇರ ಪ್ರಸಾರ ಮಾಡಲಾಗುವುದು. ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್ ಬಳಕೆಯ ಮೇಲೆ ನಿಗಾವಹಿಸಲು ಹಾಗೂ ವಿದ್ಯುತ್ ವೆಚ್ಚ ಕಡಿಮೆ ಮಾಡಲು ಪ್ರಾಯೋಗಿಕವಾಗಿ 50 ಗ್ರಾಮ ಪಂಚಾಯಿತಿಗಳಲ್ಲಿ ಹೊಂಬೆಳಕು ಕಾರ್ಯಕ್ರಮದಡಿ 25 ಕೋಟಿ ರೂ.ಗಳ ವೆಚ್ಚದಲ್ಲಿ ಸೋಲಾರ್ ದೀಪಗಳನ್ನು ಅಳವಡಿಸಲಾಗುವುದು. 200 ಗ್ರಾಮ ಪಂಚಾಯಿತಿಗಳಲ್ಲಿ ಬೀದಿ ದೀಪಗಳ ವ್ಯವಸ್ಥಿತ ಮೀಟರಿಂಗ್ ಮಾಡಲಾಗುವುದು ಎಂದು ಘೋಷಣೆ ಮಾಡಿದರು.
ಪ್ರಸಕ್ತ ಸಾಲಿನಿಂದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸ್ಥರ ಸಹಭಾಗಿತ್ವದೊಂದಿಗೆ ಹಿರಿಯ ನಾಗರಿಕರ ಆರೈಕೆ ಮತ್ತು ಚಿಕಿತ್ಸೆಯನ್ನು ನಿರ್ವಹಿಸಲು ಆರೈಕೆ-ಉಪಶಮನ (Palliative Care) ಕೇಂದ್ರಗಳನ್ನು ಪ್ರಾರಂಭಿಸಲಾಗುವುದು.
ರಾಜ್ಯದ 100 ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುವುದು. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತಲಾ ಒಂದು ಲಕ್ಷ ರೂ. ನೆರವಿನೊಂದಿಗೆ ಎಸ್.ಹೆಚ್.ಜಿ.ಗಳ ಸಹಯೋಗದೊಂದಿಗೆ ಎಣ್ಣೆ ಗಾಣವನ್ನು ಸ್ಥಾಪಿಸಲಾಗುವುದು ಎಂದರು.
ಗ್ರಾಮೀಣ ಪ್ರದೇಶದಲ್ಲಿ ಘನತ್ಯಾಜ್ಯ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿ ಮಟ್ಟದ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟಗಳ ಮೂಲಕ ಕೈಗೊಳ್ಳಲಾಗುತ್ತಿದೆ. ಸದರಿ ವ್ಯವಸ್ಥೆಯನ್ನು ಸುಸ್ಥಿರವಾಗಿ ನಿರ್ವಹಿಸಲು, ತ್ಯಾಜ್ಯವನ್ನು ಕಡಿಮೆ ಮಾಡುವ, ಪುನಃ ಬಳಸುವ ಮತ್ತು ಮರಳಿ ಉಪಯೋಗಿಸುವ ತತ್ವಗಳಾಧಾರಿತ ವರ್ತುಲ ಆರ್ಥಿಕತೆ (Circular Economy) ಮಾದರಿಯನ್ನು ಪ್ರಸಕ್ತ ಸಾಲಿನಿಂದ ಪ್ರೋತ್ಸಾಹಿಸಲಾಗುವುದು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ಚುನಾಯಿತ ಸದಸ್ಯರಿಗೆ ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಸದಸ್ಯರಿಗೆ ತರಬೇತಿ ನೀಡಲಾಗುವುದು ಹಾಗೂ ದೇಶದ ಪ್ರಪ್ರಥಮ ವರ್ತುಲ ಆರ್ಥಿಕತೆಯ (Circular Economy) ಪ್ರಯೋಗಾಲಯವನ್ನು ಸ್ಥಾಪಿಸಲು ಎರಡು ಕೋಟಿ ರೂ.ಗಳನ್ನು ಒದಗಿಸಲಾಗುವುದು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications