Karnataka Budget 2024: ಆರೋಗ್ಯ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ಬಂಪರ್‌ ಕೊಡುಗೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು, ಫೆಬ್ರವರಿ 16: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ. ಆರೋಗ್ಯ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಬಜೆಟ್‌ ನಲ್ಲಿ ಭರ್ಜರಿ ಕೊಡುಗೆ ನೀಡಿದೆ.

ಹೌದು, ತಾಲೂಕು ಆಸ್ಪತ್ರೆಯಿಲ್ಲದ ಆನೇಕಲ್ ನೆಲಮಂಗಲ ಹೊಸಕೋಟೆ ಶೃಂಗೇರಿ ಶಿರಹಟ್ಟಿ ತಾಲೂಕಿಗಳಲ್ಲಿ 28 0ಕೋಟಿ ವೆಚ್ಚದಲ್ಲಿ 100 ಹಾಸಿಗೆ ಆಸ್ಪತ್ರೆ ನಿರ್ಮಾಣ. ಬೆಂಗಳೂರಿನ ಕೆ ಸಿ ಜನರಲ್ ಆಸ್ಪತ್ರೆ ಆವರಣದಲ್ಕಿ ತಾಯಿ ಮತ್ತು ಮಕ್ಕಳ ಮೂಲಸೌಕರ್ಯ ಕಾಮಗಾರಿಗಳನ್ನ 150 ಕೋಟಿ ವೆಚ್ಚದಲ್ಲಿ ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Karnataka Budget 2024 Key Announcement on Health Sector: Details in Kannada

ಕಲ್ಯಾಣ ಕರ್ನಾಟಕ ಭಾಗದಲ್ಲಿ 46 ಹೊಸ ಪ್ರಾಥಮಿಕ ಕೇಂದ್ರಗಳ 221 ಕೋಟಿಗಳ ವೆಚ್ಚದಲ್ಲಿ ಸ್ಥಾಪನೆ ಮಾಡುವ ಕುರಿತು ಸಿದ್ದರಾಮಯ್ಯ ತಿಳಿಸಿದ್ದಾರೆ. ಮಧುಮೇಹ ನಿಯಂತ್ರಣಕ್ಕಾಗಿ ಆಯುಶ್ ಚಿಕಿತ್ಸೆ ಕೊಡಲು ರಾಜ್ಯದ 4 ಭಾಗಗಳಲ್ಲಿ ಆರ್ಯವೇದ ಘಟಕ ಸ್ಪಾಪನೆ, ಕೋವಿಡ್ ರೋಗ ನಿವಾರಣೆ ತಡೆಗಟ್ಟುವ ಸಂಬಂಧಿಸುವ 21 ರ ಸಾರ್ವಜನಿಕ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರ ಆರೋಪಗಳಿಗೆ ನ್ಯಾಯಾಂಗ ತನಿಖೆಗೆ ಸೂಚನೆ ನೀಡಿಲಾಗಿದೆ.

ಮೈಸೂರಿನಲ್ಲಿರುವ ನೆಪ್ರೋ ನ್ಯೂರಾಲಜಿ ಆಸ್ಪತ್ರೆಯನ್ನ ನೂರು ಹಾಸಿಗೆ ಉನ್ನತಿ ಕರಿಸುವುದು. ಕಲಬುರ್ಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯ ತಾಂತ್ರಿಕ ನೆರವೊಂದಿಗೆ ಸ್ಥಾಪನೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪನೆ ಕುರಿತು ಸಿದ್ದರಾಮಯ್ಯ ತಿಳಿಸಿದ್ದಾರೆ.ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನು ಸ್ಥಾಪಿಸಲಾಗುವುದು.

ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಸಾಲಿನಲ್ಲಿ ಉಳಿದ ೯ ಜಿಲ್ಲೆಗಳಲ್ಲಿಯೂ ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನು ಸ್ಥಾಪಿಸಲಾಗುವುದು.

ಜಿಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿರುವ ಮಕ್ಕಳ ತಜ್ಞರು, ಮತ್ತು ಕ್ರಿಟಿಕಲ್ ಕೇರ್ ಮೆಡಿಸಿನ್ ತಜ್ಞ ಮತ್ತಿತರ ತಜ್ಞ ವೈದ್ಯರುಗಳ ಸೇವೆಯನ್ನು ಟೆಲಿ-ಐಸಿಯು ವ್ಯವಸ್ಥೆಯ ಮೂಲಕ ತಾಲ್ಲೂಕು ಆಸ್ಪತ್ರೆಗಳಿಗೆ ಒದಗಿಸಲಾಗುವುದು.

ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ Chemotherapy ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು ಸ್ಥಾಪಿಸಲಾಗುವುದು. ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್ ಆಸ್ಪತ್ರೆ ಬೆಂಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ Colposcopy ಉಪಕರಣಗಳ ಖರೀದಿಗೆ ಒಟ್ಟಾರೆಯಾಗಿ 21 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.

2025 ರೊಳಗೆ ಕ್ಷಯರೋಗ ನಿರ್ಮೂಲನೆಗೊಳಿಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಷಯರೋಗ ತಪಾಸಣೆಗಾಗಿ 87 True-Nat Machines ಗಳನ್ನು ಖರೀದಿಸಲು 6 ಕೋಟಿ ರೂ. ಗಳ ಅನುದಾನ ಒದಗಿಸಲಾಗುವುದು.

ಕಲ್ಯಾಣ ಕರ್ನಾಟಕದಲ್ಲಿ Haemophilia ಮತ್ತು Thalassemia ರೋಗಿಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯಗಳ ಕೊರತೆಯಿರುವುದರಿಂದ ಕಲಬುರಗಿ ಮತ್ತು ಕೊಪ್ಪಳದ ICDT ಕೇಂದ್ರಗಳ ಬಲವರ್ಧನೆಗೆ 7 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳ First Referral Unit (FRU) ಗಳಲ್ಲಿ ರಕ್ತ ಸಂಗ್ರಹ ಘಟಕಗಳಿಲ್ಲದ ಕಾರಣ, ರೋಗಿಗಳಿಗೆ ತುರ್ತು ಸಮಯದಲ್ಲಿ ರಕ್ತ ಪೂರೈಸಲು ತೊಂದರೆ ಉಂಟಾಗುತ್ತಿದೆ. ಇದನ್ನು ನೀಗಿಸಲು ೫೦ ಹೊಸ ರಕ್ತ ಶೇಖರಣಾ ಘಟಕಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಸ್ಥಾಪಿಸಲಾಗುವುದು.

ಮುಂದಿನ 4 ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು (IPHL) ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಚಿಕ್ಕಮಗಳೂರು, ವಿಜಯನಗರ, ಶಿವಮೊಗ್ಗ, ಬೆಳಗಾವಿ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮತ್ತು 2025-26 ನೇ ಸಾಲಿನಲ್ಲಿ ಚಿತ್ರದುರ್ಗ, ಬಾಗಲಕೋಟೆ, ಚಾಮರಾಜನಗರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರಯೋಗಾಲಯವನ್ನು (IPHL) ಸ್ಥಾಪಿಸಲಾಗುವುದು. ಇದಲ್ಲದೇ ಪ್ರಸಕ್ತ ಸಾಲಿನಲ್ಲಿ ಹುನಗುಂದ, ಸಿರಾ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ಇದಕ್ಕೆ ಒಟ್ಟಾರೆಯಾಗಿ 11 ಕೋಟಿ ರೂ.ಗಳ ಅನುದಾನವನ್ನು ನೀಡಲಾಗುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+