Karnataka Budget 2024: ಬಜೆಟ್‌ನಲ್ಲಿ ಬೆಂಗಳೂರಿಗೆ ಬಂಪರ್: ಸಿಲಿಕಾನ್ ಸಿಟಿಗೆ ಸಿಕ್ಕಿದ್ದೇನು..?
ಬೆಂಗಳೂರು, ಫೆಬ್ರವರಿ 16: ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಸಿದ್ದರಾಮಯ್ಯ 15ನೇ ಬಜೆಟ್ ಮಂಡಿಸಿದ್ದು, ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬೆಂಗಳೂರಿಗೆ ಬಂಪರ್ ಕೊಡುಗೆಗಳನ್ನು ನೀಡಲಾಗಿದೆ.
ರಾಜ್ಯ ಬಜೆಟ್‌ನಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್‌ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 73 ಕಿ.ಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಪಿಪಿಪಿ ಮಾದರಿಯಲ್ಲಿ ಆರ್‌ಎಫ್‌ಪಿ ಕರೆಯಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಆಕರ್ಷಕ ಪ್ರವಾಸಿ ತಾಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ನಗರಾಭಿವೃದ್ಧಿ ಅಂಗಸಂಸ್ಥೆ ಬಿಬಿಎಂಪಿ, ಬಿಎಂಆರ್‌ಸಿಎಲ್, ಬಿಡಬ್ಲ್ಯುಎಸ್‌ಎಸ್‌ಬಿ, ಬಿಡಿಎನಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುವುದು. 2025ರೊಳಗೆ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ ಮಾಡಲಾಗುವುದು ಹಾಗೂ 2026ರ ಜೂನ್ ವೇಳೆಗೆ ವಿಮಾನ ನಿಲ್ದಾಣಕ್ಕೂ ಮೆಟ್ರೋ ಮಾರ್ಗ ನಿರ್ಮಾಣ ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು.
ಇನ್ನು ಬಿಎಂಟಿಸಿಗೆ 1,334 ಹೊಸ ಎಲೆಕ್ಟ್ರಿಕ್ ಬಸ್ಗಳ ಸೇರ್ಪಡೆ. ಬಿಎಂಟಿಸಿ ಪ್ರಯಾಣಿಕರಿಗೆ ವೆಹಿಕಲ್ ಟ್ರ್ಯಾಕಿಂಗ್ ಪ್ ಸೌಲಭ್ಯ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದು, ಬೆಂಗಳೂರು ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಜಪಾನ್ ತಂತ್ರಜ್ಞಾನ ಹಾಗೂ ಏರಿಯಾ ಟ್ರಾಫಿಕ್ ಸಿಗ್ನಲ್ ಕಂಟ್ರೋಲ್ ಸಿಸ್ಟಮ್ ಬಳಕೆ ಮಾಡಲಾಗುವುದು ಎಂದರು. ಇನ್ನು ಬೆಂಗಳೂರಿನಲ್ಲಿ ವ್ಯಾಪಾರ, ವಹಿವಾಟು ತಡರಾತ್ರಿ 1ರವರೆಗೆ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ತಿಳಿಸಿದ್ದಾರೆ.












Click it and Unblock the Notifications