ಮೀನುಗಾರರ ಬಹುಕಾಲದ ಬೇಡಿಕೆಗೆ ಸರ್ಕಾರ ಅಸ್ತು: 7ಕೋಟಿ ರೂ ವೆಚ್ಚದಲ್ಲಿ ಸಮುದ್ರ ಆಂಬುಲೆನ್ಸ್
ಬೆಂಗಳೂರು, ಫೆಬ್ರವರಿ 16: ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಮೀನುಗಾರಿಕೆ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ.
ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಮೀನುಗಾರರ ಹಲವು ದಿನದ ಬೇಡಿಕೆ ಸಮುದ್ರ ಆಂಬುಲೆನ್ಸ್‌ಗೆ ರಾಜ್ಯ ಸರ್ಕಾರದಿಂದ ಅಸ್ತು ಎನ್ನಲಾಗಿದೆ. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ 7ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.

2024-25ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಮೀನುಗಾರಿಕಾ ವಲಯಕ್ಕೆ ಸಿಕ್ಕಿರುವುದೇನು..?
*ಹೊನ್ನಾವರ ತಾಲೂಕಿನ ಮಂಕಿ/ಕಾಸರಕೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ.
*ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ಸ್ಥಾಪನೆ.
*ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಸುಸಜ್ಜಿತ ಮೀನುಗಾರಿಗೆ ಹೊರ ಬಂದರು ನಿರ್ಮಾಣ.
*ವಿಜಯಪುರ ಆಟಮಟ್ಟಿಯಲ್ಲಿ ಒಳ ಮೀನುಗಾರಿಕೆ ಕೌಶಲಾಭಿವೃದ್ಧಿ ಕೇಂದ್ರ.
*ನಬಾರ್ಡ್ ಸಹಯೋಗದೊಂದಿಗೆ 20 ಕೋಟಿ ರೂ ವೆಚ್ಚದಲ್ಲಿ 16 ಮೀನು ಮರಿ ಉತ್ಪಾದನಾ ಕೇಂದ್ರ.
*10,000 ವಸತಿರಹಿತ ಮೀನುಗಾರಿಗೆ ಮನೆ ನಿರ್ಮಿಸಲು ಸಹಾಯ ಧನ.
*ಮೀನುಗಾರಿಕೆ ನಿಷೇಧ ಅವಧಿಯಲ್ಲಿ ಮೀನುಗಾರರಿಗೆ ನೀಡುವ ಪರಿಹಾರದ ಮೊತ್ತ 3,000ಕ್ಕೆ ಏರಿಕೆ.
*ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ ತಾಲೂಕುಗಳ ಗಣಿ ಭಾಧಿತ ಪ್ರದೇಶದಲ್ಲಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ಮೀನುಗಾರಿಕೆ.












Click it and Unblock the Notifications