Karnataka budget 2024: 7ನೇ ವೇತನ ಆಯೋಗ ವರದಿಯ ಕೆಲವು ಅಂಶಗಳ ಸೇರ್ಪಡೆ ಸೇರಿ ಈ ಮಹತ್ವದ ಘೋಷಣೆಗಳ ಸಾಧ್ಯತೆ
ಬೆಂಗಳೂರು, ಫೆಬ್ರವರಿ, 16: ಸಿಎಂ ಸಿದ್ದರಾಮಯ್ಯ ಅವರು ಇಂದು (ಫೆಬ್ರವರಿ 16) ಬೆಳಗ್ಗೆ 10:15ಕ್ಕೆ 15ನೇ ಬಜೆಟ್ ಮಂಡಿಸಲಿದ್ದಾರೆ. ಸಿಎಂ ಮಂಡಿಸುವ ಈ ಬಜೆಟ್ ಮಂಡನೆ ಮೇಲೆ ರಾಜ್ಯದ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಏಳನೇ ವೇತನ ಆಯೋಗ ವರದಿಯಲ್ಲಿನ ಕೆಲವು ಅಂಶಗಳ ಸೇರ್ಪಡೆ ಸೇರಿದಂತೆ ವಿವಿಧ ವಲಯಗಳಿಗೆ ಹೆಚ್ಚಿನ ಅನುದಾನ ಸೇರಿದಂತೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ಅಬಕಾರಿ ಮೇಲಿನ ಸುಂಕ ಏರಿಕೆ, ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಿಶೇಷ ಅನುದಾನ, ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುದಾನ ನೀಡುವ ಸಾಧ್ಯತೆ ಇದೆ.

ಹಾಗೆಯೇ ಟ್ರಾಫಿಕ್ ಸಮಸ್ಯೆ ನಿವಾರಿಸಲು ಸುರಂಗ ಮಾರ್ಗ ನಿರ್ಮಾಣಕ್ಕೆ ಅನುದಾನ ನೀಡುವ ಸಾಧ್ಯತೆ ಇದ್ದು, ನಮ್ಮ ಮೆಟ್ರೋ ಮಾರ್ಗ ವಿಸ್ತರಣೆಗೆ ಹೆಚ್ಚಿನ ಅನುದಾನ ಬಿಡುಗಡೆ, ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಅನುದಾನ ಘೋಷಣೆ ಮಾಡುವ ಸಾಧ್ಯತೆಯಿದೆ.
100 ಕೋಟಿ ರೂಪಾಯಿ ವೆಚ್ಚದಲ್ಲಿ ದೇವಸ್ಥಾನಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ನಿರೀಕ್ಷೆಯಿದೆ. ಸುವರ್ಣ ಮಹೋತ್ಸವ ಹೆಸರಿನಲ್ಲಿ ಅಭಿವೃದ್ಧಿ ಪೂರಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.
ಬೆಂಗಳೂರು ಅಥವಾ ಕಲಬುರಗಿಯಲ್ಲಿ ವಚನ ಮಂಟಪ, ವಚನ ವಿವಿ ಸ್ಥಾಪನೆ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ. ಇನ್ನು ಚಿಕ್ಕೋಡಿ, ಗೋಕಾಕ್ ಸೇರಿದಂತೆ ಕೆಲವು ನೂತನ ಜಿಲ್ಲಾ ಕೇಂದ್ರಗಳ ಘೋಷಣೆ ಮಾಡಬಹುದು. ಜಿಲ್ಲೆ, ತಾಲೂಕು ಕೇಂದ್ರಗಳಿಗೂ ಇಂದಿರಾ ಕ್ಯಾಂಟೀನ್ ವಿಸ್ತರಣೆ, ಬಿಬಿಎಂಪಿ ಚುನಾವಣೆ ದೃಷ್ಟಿಯಿಂದ ಬ್ರಾಂಡ್ ಬೆಂಗಳೂರುಗೆ ಹೆಚ್ಚಿನ ನೆರವು, 2006ಕ್ಕಿಂತ ಮೊದಲು ನೇಮಕಾತಿ ಆದೇಶವಾದ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿಗೆ ಘೋಷಣೆ ಮಾಡುವುದಾಗಿ ಸಾಧ್ಯತೆಯಿದೆ.












Click it and Unblock the Notifications