Karnataka Budget 2025: ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್- ದುಬಾರಿ ಎಣ್ಣೆ

ಬೆಂಗಳೂರು ಮಾರ್ಚ್ 7: ಸಿಎಂ ಸಿದ್ದರಾಮಯ್ಯ ಇಂದು ತಮ್ಮ 16ನೇ ಬಜೆಟ್ ಮಂಡನೆಯ ವೇಳೆ ಕೆಲವರಿಗೆ ಸಿಹಿ ನೀಡಿದರೆ ಕೆಲವರಿಗೆ ಕಹಿ ಸುದ್ದಿಗಳನ್ನು ನೀಡಿದ್ದಾರೆ. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಕುಳಿತುಕೊಂಡು ಬಜೆಟ್ ಮಂಡನೆ ಮಾಡಿದರು. ಬಜೆಟ್‌ನಲ್ಲಿ ಜನತೆ ಪಾಲಿಗೆ ಸಿಹಿ ಮಾತ್ರ ನೀಡಬೇಕು ಎಂಬ ಉದ್ದೇಶವಿದ್ದರೂ ಗ್ಯಾರಂಟಿಗಳ ಹೊರೆ, ಬದ್ಧತಾ ವೆಚ್ಚ ಹೆಚ್ಚಳ, ಸಾಲದ ಹೊರೆ ನಡುವೆಯೂ ಅಭಿವೃದ್ಧಿಗೆ ಒತ್ತು ನೀಡಬೇಕಾದ ಅನಿವಾರ್ಯತೆಯಿಂದಾಗಿ ಮದ್ಯ ಪ್ರಿಯರಿಗೆ ಈ ಬಾರಿ ಬಜೆಟ್ ಕಹಿಯಾಗಿದೆ.

ಹೌದು... ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ 36,500 ಕೋಟಿ ರೂ. ಆದಾಯದ ಗುರಿ ನಿಗದಿ ಮಾಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಮದ್ಯದ ಬೆಲೆ ಏರಿಕೆಯಾಗಲಿದೆ. ರಾಜ್ಯ ಸರ್ಕಾರ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿದೆ ಎಂದು ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

Karnataka Budget 2025 CM Siddaramaiah has given a big shock to liquor lovers

ರಾಜ್ಯ ಬಜೆಟ್ ಮುಖ್ಯ ಅಂಶಗಳು ಹೀಗಿದೆ:-

*ಪ್ರೀಮಿಯಂ ಮಧ್ಯದ ಬೆಲೆಗಳನ್ನು ನೆರೆಯ ರಾಜ್ಯಗಳಲ್ಲಿ ವಿಧಿಸುತ್ತಿರುವ ಬೆಲೆಗಳಿಗೆ ಅನುಸಾರವಾಗಿ ಪರಿಷ್ಕರಿಸುವುದರೊಂದಿಗೆ ಸರ್ಕಾರವು ಅಬಕಾರಿ ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸಿದೆ. 2025-26ರಲ್ಲಿಯೂ ಅಬಕಾರಿ ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸುವ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು.

*ಖಾಲಿ ಅಥವಾ ಲಭ್ಯವಿರುವ ಮದ್ಯದ ಪರವಾನಗಿಗಳನ್ನು ಪಾರದರ್ಶಕ ಎಲೆಕ್ಟ್ರಾನಿಕ್ ಹರಾಜಿನ ಮೂಲಕ ಹಂಚಿಕೆ ಮಾಡಲು ಪ್ರಸ್ತಾಪಿಸಲಾಗಿದೆ. ಇದರಿಂದ ಹೆಚ್ಚುವರಿ ರಾಜಸ್ವ ಸಂಗ್ರಹಣೆಯಾಗುವ ನಿರೀಕ್ಷೆಯಿದೆ.

*2024-25ರ ಪರಿಷ್ಕೃತ ಅಂದಾಜಿನಲ್ಲಿ ಅಬಕಾರಿ ತೆರಿಗೆಯಿಂದ ಒಟ್ಟು 36,500 ಕೋಟಿ ರೂಪಾಯಿಗಳ ರಾಜಸ್ವವನ್ನು ನಿರೀಕ್ಷಿಸಲಾಗಿದೆ.

*2025-26ನೇ ಸಾಲಿಗೆ 40,000 ಕೋಟಿ ರೂಪಾಯಿಗಳ ಸಂಗ್ರಹಣಾ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಲಾಗಿದೆ.

ಆದರೆ ಈಗಾಗಲೇ ಆದಾಯ ಸಂಗ್ರಹ ಹೆಚ್ಚಳಕ್ಕಾಗಿ ಸರ್ಕಾರ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಗುರಿ ನೀಡಿದ್ದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಮದ್ಯದ ಚಟ ಹೆಚ್ಚಳವಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. 2024-25ರಲ್ಲಿ ಈ ಸಂಬಂಧ 17,390 ಪ್ರಕರಣಗಳನ್ನು ದಾಖಲಿಸಿ, 18,253 ಮಂದಿಯನ್ನು ಬಂಧಿಸಲಾಗಿದೆ ಎಂದು ವಿಪಕ್ಷಗಳು ಕೆಲ ದಿನಗಳಿಂದ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿವೆ.

ಸರ್ಕಾರದ ಈ ನಿಲುವನ್ನು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ವಿರೋಧಿಸಿ, ಅಬಕಾರಿ ಇಲಾಖೆಯವರು ಪ್ರತಿ ಮದ್ಯದಂಗಡಿಗೂ ಮಾರಾಟದ ಗುರಿ ನಿಗದಿಪಡಿಸಿದೆ. ಗುರಿ ತಲುಪುವುದಕ್ಕಾಗಿ ಹಳ್ಳಿ ಹಳ್ಳಿಗೂ ಬೈಕ್‌ಗಳಲ್ಲಿ ಮದ್ಯ ತೆಗೆದುಕೊಂಡು ಹೋಗಿ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

Karnataka Budget 2025 CM Siddaramaiah has given a big shock to liquor lovers

ಅಲ್ಲದೆ ಅಬಕಾರಿ ಇಲಾಖೆ ಅಧಿಕಾರಿಗಳು, ಪೊಲೀಸರಿಗೆ ಗೊತ್ತಿಲ್ಲದೇ ಹಳ್ಳಿಗಳಲ್ಲಿ ಮದ್ಯ ಮಾರಾಟ ಆಗುವುದಿಲ್ಲ. ಮಾಮೂಲಿ ತೆಗೆದುಕೊಂಡು ಮದ್ಯದ ಅಕ್ರಮ ಮಾರಾಟಕ್ಕೆ ಅವಕಾಶ ನೀಡುತ್ತಿದ್ದಾರೆ. ಕಿರಾಣಿ ಅಂಗಡಿಗಳಲ್ಲೂ ಮದ್ಯ ಮಾರಾಟಕ್ಕೆ ಅಧಿಕೃತ ಪರವಾನಗಿ ಕೊಡಿ. ಸರ್ಕಾರಕ್ಕೂ ತೆರಿಗೆ ಬರುತ್ತದೆ. ಕಳಪೆ ಗುಣಮಟ್ಟದ ಮದ್ಯವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೊನಿಗಳಿಗೆ ಪೂರೈಕೆ ಮಾಡಲಾಗುತ್ತಿದೆ. ಇದರಿಂದ ಆ ಕಾಲೋನಿಗಳಲ್ಲಿ 35ರಿಂದ 40 ವರ್ಷದೊಳಗಿನ ಯುವಕರೂ ಸಾಯುತ್ತಿದ್ದಾರೆಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಕಿಡಿ ಕಾರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+