ಕರ್ನಾಟಕ ಬಜೆಟ್ 2025: ಐಟಿ ವಲಯಕ್ಕೆ ಸಿದ್ದರಾಮಯ್ಯ ಕೊಡುಗೆಗಳು
ಬೆಂಗಳೂರು, ಮಾರ್ಚ್ 07: ಕರ್ನಾಟಕದ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ಸಿದ್ದರಾಮಯ್ಯ 2025-26ನೇ ಸಾಲಿನ ಬಜೆಟ್ ಮಂಡಿಸಿದರು. 16ನೇ ಬಾರಿಗೆ ಬಜೆಟ್ ಮಂಡಿಸಿ ದಾಖಲೆ ಬರೆದ ಸಿದ್ದರಾಮಯ್ಯ 4,09,549 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದರು. ರಾಜ್ಯದಲ್ಲಿನ ಐಟಿ ಮತ್ತು ಬಿಟಿ ವಲಯಕ್ಕೆ ಅವರು ಹಲವು ಕೊಡುಗೆಗಳನ್ನು ಘೋಷಣೆ ಮಾಡಿದರು.
ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಬೆಂಗಳೂರು ಹೊರತುಪಡಿಸಿ ಇತರ ನಗರಗಳಲ್ಲಿಯೂ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು 1,000 ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯ ಆರ್ಥಿಕ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುತ್ತದೆ. ಇದಕ್ಕೆ ಪ್ರಸಕ್ತ ಸಾಲಿನಲ್ಲಿ 200 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ ಎಂದು ಹೇಳಿದರು.

ಈ ಉದ್ಯೋಗ ಕಾರ್ಯಕ್ರಮಗಳಿಂದ ರಾಜ್ಯಾದ್ಯಂತ 5 ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದೆ. ಈ ಕಾರ್ಯಕ್ರಮದಡಿಯಲ್ಲಿ ವಿವಿಧ ಉಪ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
* ಮೈಸೂರು, ಮಂಗಳೂರು-ಉಡುಪಿ-ಮಣಿಪಾಲ್, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಕಲಬುರಗಿಗಳಲ್ಲಿ ನವೋದ್ಯಮ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು.
* ಇನ್ಕ್ಯುಬೇಟರ್‌ಗಳು, ಆಕ್ಸಿಲರೇಟರ್‌ಗಳು, ಉತ್ಕೃಷ್ಟತಾ ಕೇಂದ್ರಗಳು ಮತ್ತು ಜಾಗತಿಕ ತಂತ್ರಜ್ಞಾನ ಕೇಂದ್ರಗಳನ್ನು (GTC) ಸ್ಥಾಪಿಸಲು ಲೈಫ್‌ಸೈಕಲ್ (Life Cycle) ವಿಧಾನ ಅನುಸರಿಸಲಾಗುವುದು.
* ಡೀಪ್-ಟೆಕ್ ಅಭಿವೃದ್ಧಿಗಾಗಿ 100 ಕೋಟಿ ರೂ. ಕಾರ್ಪಸ್ ನಿಧಿ ಹಾಗೂ 300 ಕೋಟಿ ರೂ.ಗಳ Fund of Funds (FoF) ಸ್ಥಾಪಿಸಲಾಗುವುದು.
* ವಾಣಿಜ್ಯೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಅವಿಷ್ಕಾರಕ್ಕೆ ಸಂಬಂಧಿಸಿದ ಜಾಗತಿಕ ಮತ್ತು ರಾಷ್ಟ್ರೀಯ ಸೂಚ್ಯಂಕಗಳಲ್ಲಿ ಕರ್ನಾಟಕವು ಅಗ್ರಸ್ಥಾನದಲ್ಲಿದೆ ಎಂಬುದು ಹೆಮ್ಮೆಯ ವಿಷಯವಾಗಿದೆ. ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ಹೊಸ ಉದ್ಯೋಗಗಳನ್ನು ಸೃಜಿಸುವ ಉದ್ದೇಶದಿಂದ ಈ ವಲಯದಲ್ಲಿ ಪ್ರೋತ್ಸಾಹಕಗಳನ್ನೊಳಗೊಂಡ ಅನೇಕ ನೀತಿಗಳನ್ನು ಜಾರಿಗೊಳಿಸಲಾಗಿರುತ್ತದೆ.
* ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಹೊಸ ಐಟಿ ನೀತಿಯನ್ನು 2025ನೇ ಸಾಲಿನಲ್ಲಿ ಜಾರಿಗೊಳಿಸಲಾಗುವುದು. ಕ್ಲೌಡ್ ಕಂಪ್ಯೂಟಿಂಗ್ (Cloud Computing) ಮತ್ತು ನೂತನ ತಂತ್ರಜ್ಞಾನಗಳ ಅಭಿವೃದ್ಧಿಗೆ ಒತ್ತು ನೀಡುವುದರ ಜೊತೆಗೆ ಶ್ರೇಣಿ-2 ಮತ್ತು ಶ್ರೇಣಿ-3 ನಗರಗಳಿಗೂ ಮಾಹಿತಿ ತಂತ್ರಜ್ಞಾನ ಕ್ಷೇತ್ರ ವಿಸ್ತರಿಸಿ ಜಾಗತಿಕ ತಂತ್ರಜ್ಞಾನ ಕೇಂದ್ರವನ್ನಾಗಿ ಕರ್ನಾಟಕದ ಸ್ಥಾನವನ್ನು ಬಲಪಡಿಸುತ್ತದೆ.
* ಕರ್ನಾಟಕವನ್ನು ಕೃತಕ ಬುದ್ಧಿಮತ್ತೆ (AI) ಆಧಾರಿತ ಕೇತ್ರದಲ್ಲಿ ಪಾರಮ್ಯ ಸಾಧಿಸಲು ಮುಂದಿನ ಐದು ವರ್ಷಗಳಲ್ಲಿ 50 ಕೋಟಿ ರೂ. ಹೂಡಿಕೆಯೊಂದಿಗೆ Centre for Applied Al for Tech Solutions (CATS) ಸ್ಥಾಪಿಸಲಾಗುವುದು. ರಾಜ್ಯವನ್ನು AI ಕ್ಷೇತ್ರದಲ್ಲಿ ಮುಂಚೂಣಿಗೆ ತರಲು ಸರ್ಕಾರ ಬದ್ಧವಾಗಿದೆ.
* ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ ಕ್ವಾಂಟಮ್ ತಂತ್ರಜ್ಞಾನದ ಅಭಿವೃದ್ಧಿಯನ್ನು ಉತ್ತೇಜಿಸಲು ಕ್ವಾಂಟಮ್ ರಿಸರ್ಚ್ ಪಾರ್ಕ್ ಹಂತ-2 ಅನ್ನು 48 ಕೋಟಿ ರೂ. ವೆಚ್ಚದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಸ್ಥಾಪಿಸಲಾಗುವುದು.
* ಕರ್ನಾಟಕ ಜೈವಿಕ ತಂತ್ರಜ್ಞಾನ ನೀತಿ 2024-2029, MSME ಮತ್ತು ದೊಡ್ಡ ಉದ್ಯಮ ವಿಭಾಗದಲ್ಲಿ 1,500 ಕೋಟಿ ರೂ. ಹೂಡಿಕೆಯನ್ನು ಆಕರ್ಷಿಸುವ ಉದ್ದೇಶ ಹೊಂದಲಾಗಿದ್ದು, 220 ಕೋಟಿ ರೂ. ಪ್ರೋತ್ಸಾಹದ ಮೂಲಕ ಜಾರಿಗೆ ತರಲಾಗುವುದು.
* ಬೆಂಕಿ ಅನಾಹುತದಲ್ಲಿ ತೀವ್ರ ಹಾನಿ ಸಂಭವಿಸಿದ ಬೆಂಗಳೂರು ಬಯೋ-ಇನ್ನೋವೇಷನ್ ಸೆಂಟರ್‌ನ ಪುನರ್ ನಿರ್ಮಾಣಕ್ಕೆ ಒಟ್ಟು 57 ಕೋಟಿ ರೂ. ನೆರವು ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 20 ಕೋಟಿ ರೂ. ಅನುದಾನ ಒದಗಿಸಿದೆ.
* ಜಾಗತಿಕ ಸಾಮರ್ಥ್ಯ ಕೇಂದ್ರಗಳ (GCC) ವಲಯದಲ್ಲಿ ಕರ್ನಾಟಕದ ನಾಯಕತ್ವವನ್ನು ಮತ್ತಷ್ಟು ಬಲಪಡಿಸಲು, ಕಿಯೋನಿಕ್ಸ್ ಮೂಲಕ ಗ್ಲೋಬಲ್ ಇನ್ನೊವೇಶನ್ ಡಿಸ್ಟ್ರಿಕ್ಸ್ ಅನ್ನು ಮೈಸೂರು, ಬೆಳಗಾವಿ, ಧಾರವಾಡ ಮತ್ತು ಬೆಂಗಳೂರಿನಲ್ಲಿ ಅಭಿವೃದ್ಧಿಪಡಿಸಲಾಗುವುದು.
* ಕೋಲಾರ, ರಾಮನಗರ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹೊಸ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಒಂಭತ್ತು ಕೋಟಿ ರೂ. ಒದಗಿಸಿದೆ.
* ಎಲೆಕ್ಟ್ರಾನಿಕ್ಸ್ ಉತ್ಪಾದನೆಗೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸಲು ಮೈಸೂರಿನ 150 ಎಕರೆ ಪ್ರದೇಶದಲ್ಲಿ ಆತ್ಯಾಧುನಿಕ Printed Circuit Board (PCB) ಪಾರ್ಕ್ ಅನ್ನು ಅಭಿವೃದ್ಧಿಪಡಿಸಲಾಗುತ್ತಿದೆ.
* ಕರ್ನಾಟಕದಲ್ಲಿ ಸಂವೇದಕಗಳಿಗೆ ಸಂಶೋಧನೆ ಮತ್ತು ಅಭಿವೃದ್ಧಿ, ಕೌಶಲ್ಯ ಮತ್ತು ಪರಿಸರ ವ್ಯವಸ್ಥೆಯನ್ನು ಉತ್ತೇಜಿಸಲು ಕೈಗಾರಿಕೆಗಳ ಮತ್ತು ಭಾರತ ಸರ್ಕಾರದ ಸಹಭಾಗಿತ್ವದಲ್ಲಿ ಸೆನ್ಸರ್‌ಟೆಕ್ ಇನ್ನೋವೇಶನ್ ಹಬ್, ಒಟ್ಟು 99 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
* ಕಿಯೋನಿಕ್ಸ್ ವತಿಯಿಂದ ಮಂಗಳೂರು, ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ಪ್ಲಗ್-ಅಂಡ್-ಪ್ಲೇ ಸೌಲಭ್ಯಗಳನ್ನೊಳಗೊಂಡ ಮೂರು ಹೊಸ ಜಾಗತಿಕ ತಂತ್ರಜಾನ ಕೇಂದ್ರ (GTC) ಗಳನ್ನು ಸ್ಥಾಪಿಸಲಾಗುವುದು.












Click it and Unblock the Notifications