ರಾಜ್ಯ ಬಜೆಟ್‌ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್

Karnataka Budget 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ 6) ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಈ ವೇಳೆ ರಾಜ್ಯದ ನಿರುದ್ಯೋಗಿ ಯುವಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. 2026-27ನೇ ಸಾಲಿನ ಬಜೆಟ್‌ನಲ್ಲಿ ಬರೋಬ್ಬರಿ 56,432 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಮೂಲಕ ಆಡಳಿತ ಯಂತ್ರವನ್ನು ಬಲಪಡಿಸುವುದು ಮತ್ತು ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಬೃಹತ್ ನೇಮಕಾತಿ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ, ಸರ್ಕಾರವು ವಯೋಮಿತಿಯಲ್ಲಿ 5 ವರ್ಷಗಳ ಕಾಲ ಸಡಿಲಿಕೆ ನೀಡಿರುವುದು ವಿಶೇಷವಾಗಿದೆ.

Karnataka Budget 2026 CM Siddaramaiah Announces 56 432 Government Jobs Know Complete details

ಕಳೆದ ಕೆಲ ವರ್ಷಗಳಿಂದ ನೇಮಕಾತಿಗಾಗಿ ಕಾಯುತ್ತಿದ್ದ ಮತ್ತು ವಯೋಮಿತಿ ಮೀರಿದ ಅಭ್ಯರ್ಥಿಗಳಿಗೆ ಈ ನಿರ್ಧಾರವು ದೊಡ್ಡ ಆಸರೆಯಾಗಲಿದೆ. ಈ ನೇಮಕಾತಿ ಯೋಜನೆಯು ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದು, ಉದ್ಯೋಗ ಸೃಷ್ಟಿಯ ನಿಟ್ಟಿನಲ್ಲಿ ಇದೊಂದು ಐತಿಹಾಸಿಕ ಹೆಜ್ಜೆ ಎಂದು ಹೇಳಲಾಗುತ್ತಿದೆ.

56,432 ಹುದ್ದೆಗಳನ್ನು ಭರ್ತಿಗೆ ಗ್ರೀನ್ ಸಿಗ್ನಲ್

ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ನಾವು ಆದ್ಯತೆ ನೀಡಿದ್ದೇವೆ. ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ. ಉದ್ಯೋಗ ನೇಮಕಾತಿಗಳಲ್ಲಿ ನ್ಯಾಯಾಲಯದ ಪ್ರಕರಣಗಳಿಂದ ಉಂಟಾಗಿದ್ದ ವಿಳಂಬವನ್ನು ಪರಿಗಣಿಸಿ ವಯೋಮಿತಿಯಲ್ಲಿ ಒಂದು ಬಾರಿಗೆ 5 ವರ್ಷಗಳ ಸಡಿಲಿಕೆ ನೀಡಿದ್ದೇವೆ.

ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಯಲ್ಲಿ ರಾಜ್ಯದ ರಸ್ತೆ, ಸೇತುವೆ, ಕಟ್ಟಡಗಳ ನಿರ್ಮಾಣಕ್ಕೂ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ. ಇಲಾಖಾವಾರು ನೀಡುವ ಅನುದಾನಗಳನ್ನು ಹೊರತುಪಡಿಸಿ ಕಳೆದ ವರ್ಷ ರಸ್ತೆ ಮತ್ತು ಮೂಲಸೌಕರ್ಯಗಳ 
ಅಭಿವೃದ್ಧಿಗಾಗಿ "ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ"ವನ್ನು ಜಾರಿಗೊಳಿಸಿ 8,600 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಇದರ 2ನೇ ಹಂತವಾಗಿ 2026-27ನೇ ಸಾಲಿನಲ್ಲಿ 4,000 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.

ವಸತಿರಹಿತರಿಗೆ ಮನೆಗಳು, ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗಗಳನ್ನು ಕಲ್ಪಿಸಿಕೊಡಲು ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದೇವೆ. ಹವಾಮಾನ ಬದಲಾವಣೆಯಿಂದ ಉಂಟಾಗುತ್ತಿರುವ ತಲ್ಲಣಗಳನ್ನು ನಿಭಾಯಿಸಲು ಸೂಕ್ತ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದೇವೆ. ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಮತ್ತಷ್ಟು ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ. ಪ್ರೊ.ಎಂ.ಗೋವಿಂದರಾವ್ ಸಮಿತಿಯ ಶಿಫಾರಸ್ಸುಗಳಿಗೆ ತಾತ್ವಿಕ ಅನುಮೋದನೆ ನೀಡಲಾಗಿದೆ. ರಾಜ್ಯ ನೀತಿ ಮತ್ತು ಯೋಜನಾ ಆಯೋಗ, ಐದನೇ ಹಣಕಾಸು ಆಯೋಗ, ಆಡಳಿತ ಸುಧಾರಣಾ ಆಯೋಗಗಳ ಶಿಫಾರಸ್ಸುಗಳನ್ನು ಪರಿಶೀಲಿಸಿ ಅನುಷ್ಠಾನಗೊಳಿಸಲು ಬದ್ಧರಾಗಿದ್ದೇವೆ.

ಕರ್ನಾಟಕದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ಸ್ಟಾರ್ಟ್ಅಪ್, ಎಲೆಕ್ಟ್ರಾನಿಕ್ಸ್, ಏರೋಸ್ಪೇಸ್ ಕ್ಷೇತ್ರಗಳಲ್ಲಿನ ಸಾಧನೆಗಳು ಜಾಗತಿಕ ಹೂಡಿಕೆ ಮತ್ತು ಪ್ರತಿಭೆಗಳನ್ನು ಸೆಳೆಯುತ್ತಿವೆ. ಬಿಯಾಂಡ್‌ ಬೆಂಗಳೂರು ಪರಿಕಲ್ಪನೆಯು ಹೆಚ್ಚಿನ ಬಂಡವಾಳವನ್ನು ಆಕರ್ಷಿಸುತ್ತಿದೆ. ರಾಜ್ಯವು ರೂಪಿಸಿರುವ ಹೊಸ ಕೈಗಾರಿಕಾ ನೀತಿಯಿಂದ ಹಂತ-2 ಮತ್ತು ಹಂತ-3 ನಗರಗಳಲ್ಲಿಯೂ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+