''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ''

ಬೆಂಗಳೂರು: ಕರ್ನಾಟಕ ಸರ್ಕಾರದ ಸಾಲದ ಬಗ್ಗೆ ಸ್ಪಷ್ಟನೆ ನೀಡಿದ್ದ ಸಿದ್ದರಾಮಯ್ಯ ಅವರು ವಿತ್ತೀಯ ಕೊರತೆ, ಕೇಂದ್ರದ ಅನುದಾನ ಅಸಹಕಾರ ಸೇರಿದಂತೆ ಹಲವು ಅಂಶಗಳನ್ನು ಬುಧವಾರ ವಿವರಿಸಿದ್ದರು. ಇದರ ಬೆನ್ನಲ್ಲೆ ಮುಖ್ಯಮಂತ್ರಿಗಳು 1.15 ಲಕ್ಷ ಕೋಟಿ ರೂ. ಸಾಲ ಮಾಡಿ ಕರ್ನಾಟಕ ಬಜೆಟ್ (Karnataka Budget 2026) ಮಂಡಿಸಲಿದ್ದಾರೆ. ಜನರಿಗೆ ಮತ್ತಷ್ಟು ತೆರಿಗೆ ಹೊರೆ ಹಾಕಲಾಗುತ್ತದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಎಂದರೆ ತೆರಿಗೆ ಹೇರುವ ರಾಮಯ್ಯ ಎಂದು ಲೇವಡಿ ಮಾಡಿದರು. 2026ರ ಕೇಂದ್ರ ಬಜೆಟ್‌ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ತೆರಿಗೆಗಳ ಹೊರೆಯನ್ನು ಕಡಿಮೆ ಮಾಡಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ತಿಂಗಳಿಗೆ ನಾಲ್ಕರಂತೆ ತೆರಿಗೆ ಹಾಕುತ್ತಾರೆ. ಈಗಾಗಲೇ 36 ತೆರಿಗೆಗಳನ್ನು ಜನರ ಮೇಲೆ ಹೇರಿದ್ದಾರೆ. ಚುನಾವಣೆಗೆ ಮುನ್ನ ಜನರ ಮೇಲೆ ಹೊರೆ ಹಾಕದೆ ಗ್ಯಾರಂಟಿ ತರುತ್ತೇವೆ ಎಂದು ಭರವಸೆ ನೀಡಿ, ಈಗ ತೆರಿಗೆಗಳ ಹೊರೆ ಹೇರಿದ್ದಾರೆ. ಸಿದ್ದರಾಮಯ್ಯನವರ ಅವಧಿ ಮುಗಿಯುವ ವೇಳೆಗೆ ಒಟ್ಟು ಸಾಲ 8 ಲಕ್ಷ ಕೋಟಿ ರೂ. ಮೀರಲಿದೆ. ಇದರಿಂದಾಗಿ ಆರ್ಥಿಕ ಶಿಸ್ತು ಮೀರಿ ಹೋಗುತ್ತದೆ. ಇದು ಅವರ ಕಣ್ಕಟ್ಟು ವಿದ್ಯೆ ಎಂದು ಟೀಕಿಸಿದರು.

Karnataka Budget 2026

ಇಲ್ಲದ ಆದಾಯವನ್ನು ಸೃಷ್ಟಿಸಿ ಜಿಎಸ್‌ಡಿಪಿಗೆ ಹೋಲಿಕೆ ಮಾಡುವ ಶೇಕಡ ಪ್ರಮಾಣವನ್ನು ಕಡಿಮೆ ಇರುವಂತೆ ಸಿದ್ದರಾಮಯ್ಯ ತೋರಿಸುತ್ತಾರೆ. ಈ ಮೂಲಕ ಆರ್ಥಿಕ ಶಿಸ್ತು ಪಾಲಿಸಿದ್ದೇವೆ ಎಂದು ಸುಳ್ಳಾಗಿ ತೋರಿಸುತ್ತಾರೆ. ಬಜೆಟ್ ಎಂದರೆ ಆದಾಯ ಹೆಚ್ಚಿಸಿ, ಜನರಿಗೆ ಹೊರೆಯಾಗದಂತೆ ಮಾಡಬೇಕು. ಇದನ್ನೇ ಆರ್ಥಿಕ ಪರಿಣತಿ ಎಂದು ಹೇಳುತ್ತಾರೆ. ಸಾಲ ಮಾಡಿ ಸರ್ಕಾರ ನಡೆಸಲು ಇವರೇ ಬೇಕಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಲಿದೆ ಎಂದು ಜನರು ಅಂದುಕೊಂಡಿದ್ದು ಸಂಪೂರ್ಣ ಸುಳ್ಳಾಗಿದೆ.

ಜನರ ಮೇಲೆ ಮತ್ತಷ್ಟು ತೆರಿಗೆ ಹೊರೆ

ಬಿಜೆಪಿ ಅಧಿಕಾರದಲ್ಲಿದ್ದಾಗ ಸಿಎಂ ಬಸವರಾಜ ಬೊಮ್ಮಾಯಿ ಸಾಲ ಇಲ್ಲದ ಬಜೆಟ್ ಮಂಡಿಸಿದ್ದರು. ಇನ್ನೂ 24,400 ಕೋಟಿ ರೂ. ಸಾಲ ಪಡೆಯಬಹುದಿತ್ತು. ಅಂತಹ ಅವಕಾಶವಿದ್ದರೂ ಅವರು ಆಗ ಸಾಲ ಪಡೆದಿರಲಿಲ್ಲ. ಕಾಂಗ್ರೆಸ್‌ ಮಾತ್ರ ಪ್ರತಿ ವರ್ಷ ಸಾಲ ಪಡೆಯುತ್ತಲೇ ಇದೆ. ಈ ಬಾರಿ 1.15 ಲಕ್ಷ ಕೋಟಿ ರೂ. ಸಾಲ ಪಡೆಯಲಿದ್ದಾರೆ. ಸಾಲವನ್ನು ಜನರ ತಲೆ ಮೇಲೆ ಹೇರುವ ಬಜೆಟ್‌ನ್ನು ಈ ಬಾರಿ ಮಂಡಿಸುತ್ತಾರೆ. ನಂಜುಂಡಪ್ಪ ವರದಿಯಲ್ಲಿದ್ದ ಹಿಂದುಳಿದ ತಾಲೂಕುಗಳ ಸಂಖ್ಯೆ, ಗೋವಿಂದರಾವ್ ವರದಿಯಲ್ಲಿ ಇನ್ನಷ್ಟು ಅಧಿಕವಾಗಿದೆ. ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಪ್ರತಿ ವರ್ಷ 15,000 ಕೋಟಿ ರೂ. ಮೀಸಲಿಡಬೇಕೆಂದು ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಈ ಬಜೆಟ್‌ನಲ್ಲಿ ಸರ್ಕಾರ ಇಷ್ಟೂ ಅನುದಾನವನ್ನು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.

ಮುಖ್ಯಮಂತ್ರಿ ಹುದ್ದೆಗಾಗಿ ಕಚ್ಚಾಟ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗದಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಶಾಸಕ ಇಕ್ಬಾಲ್ ಹುಸೇನ್‌ ಹೇಳಿದ್ದಾರೆ. ಇಂತಹ ಸ್ಥಿತಿಯಲ್ಲಿ ಮಂಡಿಸುವ ಬಜೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಅಂಶಗಳಿರುತ್ತದೆ. ಆದೇಶ ಹೊರಡಿಸಲಾಗಿದೆ, ಅಭಿಪ್ರಾಯ ಸಂಗ್ರಹಣೆ ಎಂಬುದನ್ನೇ ಸಾಧನೆಯಾಗಿ ಈ ಬಜೆಟ್‌ನಲ್ಲಿ ತೋರಿಸುತ್ತಾರೆ. ಪೂರ್ಣವಾಗಿರುವ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇರುವುದಿಲ್ಲ. ತೆರಿಗೆಗಳನ್ನು ಸಂಗ್ರಹಿಸುವುದರಲ್ಲೂ ಸರ್ಕಾರ ವಿಫಲವಾಗಿದ್ದು, ಕೇವಲ ಶೇಕಡಾ 48 ಸಾಧನೆ ಆಗಿದೆ. ನಿಗದಿ ಮಾಡಿದ ಅನುದಾನದಲ್ಲಿ ಕೆಲವು ಇಲಾಖೆಗಳಿಗೆ ಶೇಕಡಾ 40 ಹಣವನ್ನೂ ಬಿಡುಗಡೆ ಮಾಡಿಲ್ಲ. ಹೀಗಾಗಿ ಇಲಾಖೆಗಳಿಗೆ ಖರ್ಚು ಮಾಡಲು ಹಣವೇ ಇರುವುದಿಲ್ಲ ಎಂದರು.

ಕೆಪಿಎಸ್‌ಸಿ ಹಗರಣ: ಹಣ ಇಲ್ಲದಿದ್ದರೆ ಕಚೇರಿಗೆ ಪ್ರವೇಶವಿಲ್ಲ

ಕರ್ನಾಟಕ ಲೋಕಸೇವಾ ಆಯೋಗ (KPSC) ಎಂದರೆ ಕಳ್ಳರ ದಂಧೆಯ ಕೇಂದ್ರ. ಹಣ ಕೊಡಲ್ಲ ಎಂದರೆ ಕಚೇರಿಯ ಒಳಗೆ ಕೂಡ ಬಿಡುವುದಿಲ್ಲ. ಕುಟುಂಬ, ಜಾತಿ ಎನ್ನುವುದು ಇಲ್ಲಿ ಮಾನದಂಡವೇ ಹೊರತು ಅಂಕ, ಪ್ರತಿಭೆ ಮುಖ್ಯವಲ್ಲ. ಕೆಪಿಎಸ್‌ಸಿ ಮುಚ್ಚಿ ಕೇಂದ್ರದ ಯುಪಿಎಸ್‌ಸಿ ಮಾದರಿಯ ಒಂದು ಸಂಸ್ಥೆಯನ್ನು ನಿರ್ಮಿಸಬೇಕು. ಈ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಮಾತಾಡುತ್ತೇನೆ. ಜೊತೆಗೆ ಕಾನೂನು ಸುವ್ಯವಸ್ಥೆ, ಪ್ರತಿಭಟನೆಗಳು, ಮೊದಲಾದ ವಿಷಯಗಳ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುವ ಬಗ್ಗೆ ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+