Gruha Lakshmi Yojana: ಗೃಹಲಕ್ಷ್ಮಿ ಸೇರಿ ಗ್ಯಾರಂಟಿ ಯೋಜನೆಗಳಿಗೆ ಭರ್ಜರಿ ಅನುದಾನ, ಮಹಿಳೆಯರಿಗೆ ಗುಡ್‌ನ್ಯೂಸ್
Gruha Lakshmi Yojana: ಕರ್ನಾಟಕದ 2026 - 2027ನೇ ಸಾಲಿನ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಭರ್ಜರಿ ಆದಾಯ ಮೀಸಲಿರಿಸಲಾಗಿದೆ. ಅದರಲ್ಲೂ ಮುಖ್ಯವಾಗಿ ಬಹಳಷ್ಟು ಸಮಸ್ಯೆ ಹಾಗೂ ಗೊಂದಲಗಳಿಗೆ ಕಾರಣವಾಗಿರುವ ಗೃಹಲಕ್ಷ್ಮಿ ಯೋಜನೆಗೆ ಭರ್ಜರಿ ಆದಾಯವನ್ನು ಮೀಸಲಿರಿಸಲಾಗಿದೆ. ಕರ್ನಾಟಕ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಅನುದಾನ ಮೀಸಲಿರಿಸಲಿದೆ ಹಾಗೂ ಗ್ಯಾರಂಟಿ ಯೋಜನೆಗಳನ್ನು ಹೇಗೆ ಸರಿದೂಗಿಸಲಿದೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕರ್ನಾಟಕದ 2026 - 2027ನೇ ಸಾಲಿನ ಬಜೆಟ್ ಮಂಡಿಸಿದ್ದು, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನವನ್ನು ಮೀಸಲಿರಿಸಿದ್ದಾರೆ. ಅದರ ವಿವರ ಈ ಲೇಖನದಲ್ಲಿದೆ.
ಕರ್ನಾಟಕ ಸರ್ಕಾರವು ಈ ಬಾರಿಯ 2026 - 2027ನೇ ಸಾಲಿನ ಬಜೆಟ್‌ನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಬರೋಬ್ಬರಿ ಅನುದಾನ ಘೋಷಣೆ ಮಾಡಿದೆ. ಈ ವರ್ಷ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂಪಾಯಿ ಅನುದಾನವನ್ನು ಮೀಸಲಿರಿಸಿರುವುದಾಗಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ. ಇನ್ನು ವಿವಿಧ ಗ್ಯಾರಂಟಿ ಯೋಜನೆಗಳಿಗೂ ಭರ್ಜರಿ ಅನುದಾನವನ್ನು ಮೀಸಲಿರಿಸುವ ಸಾಧ್ಯತೆ ಇದೆ.

ಇನ್ನು ದಕ್ಷಿಣ ಭಾರತದ ಕೇರಳ - ತಮಿಳುನಾಡು ಸೇರಿದಂತೆ ದೇಶದ ಐದು ರಾಜ್ಯಗಳಲ್ಲಿ 2026ನೇ ಸಾಲಿನ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸುವ ಸಾಧ್ಯತೆ ಇದೆ. ಹೀಗಾಗಿ, ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಅನುದಾನ ಕೊರತೆ ಆಗದಂತೆ ಹೆಚ್ಚಿನ ಮುತುವರ್ಜಿ ವಹಿಸಿರುವಂತೆ ಇದೆ. ಇನ್ನು ಮುಖ್ಯವಾಗಿ ಮಹಿಳೆಯರ ಖಾತೆ ಹಣ / ಮನೆಯ ಯಜಮಾನಿಗೆ ಮಾಸಿಕವಾಗಿ ಹಣ ನೀಡುವ ಯೋಜನೆಯು ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಹೀಗಾಗಿ, ಕರ್ನಾಟಕ ಸರ್ಕಾರವು ಗೃಹ ಲಕ್ಷ್ಮಿ ಯೋಜನೆ ಒಂದಕ್ಕೇ 28,608 ಕೋಟಿ ರೂ.ಅನುದಾನ ಮೀಸಲಿರಿಸಿದೆ.
ಯಾವ ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಅನುದಾನ ಮೀಸಲು ?
ಗೃಹಲಕ್ಷ್ಮಿ ಯೋಜನೆ: ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿರಿಸಲಾಗಿದೆ.
ಗೃಹಜ್ಯೋತಿ ಯೋಜನೆ: ಉಚಿತ ವಿದ್ಯುತ್ ಒದಗಿಸುವ ಯೋಜನೆಗೆ ಈ ಬಾರಿಯ ಬಜೆಟ್‌ನಲ್ಲಿ 10,578 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ.
ಅನ್ನಭಾಗ್ಯ ಯೋಜನೆ: ಉಚಿತ ಅಕ್ಕಿ ನೀಡುವ ಯೋಜನೆಗೆ 6,200 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ.
ಶಕ್ತಿ ಯೋಜನೆ: ಮಹಿಳೆಯರಿ ಉಚಿತ ಬಸ್ ಪ್ರಯಾಣ ಯೋಜನೆ ಆಗಿರುವ ಶಕ್ತಿ ಯೋಜನೆಗಾಗಿ ಸಾರಿಗೆ ಸಂಸ್ಥೆಗಳಿಗೆ 5,300 ಕೋಟಿ ಅನುದಾನ ಮೀಸಲಿರಿಸಲಾಗಿದೆ.
ಯುವನಿಧಿ ಯೋಜನೆ: ಇನ್ನು ಯುವನಿಧಿ ಯೋಜನೆಗೆ ಈ ವರ್ಷದ ಬಜೆಟ್‌ನಲ್ಲಿ ಯಾವುದೇ ಅನುದಾನ ಘೋಷಿಸಲಾಗಿಲ್ಲ.
ಯುವ ನಿಧಿಗೆ ಅನುದಾನ ಇಲ್ಲ ಅಸಮಾಧಾನ
ಇನ್ನು ಈ ಬಾರಿಯ ಬಜೆಟ್‌ನಲ್ಲಿ ಯುವನಿಧಿಗೆ ಅನುದಾನ ಮೀಸಲಿರಿಸದೆ ಇರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಮೀಸಲಿರಿಸಲಾಗಿದೆ. ಆದರೆ ಯುವನಿಧಿ ಯೋಜನೆಗೆ ಯಾವುದೇ ಅನುದಾಮ ಮೀಸಲಿರಿಸಿರುವ ಬಗ್ಗೆ ಯಾವುದೇ ಉಲ್ಲೇಖವನ್ನು ಸಹ ಮಾಡಿಲ್ಲ. ಇದು ಭಾರೀ ಅಸಮಾಧಾನಕ್ಕೆ ಕಾರಣವಾಗಿದೆ.












Click it and Unblock the Notifications