MySugar Factory: ಹೊಸ ಸಕ್ಕರೆ ಕಾರ್ಖಾನೆ- ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣ: ಎಲ್ಲಿ? ವಿವರ
ಬೆಂಗಳೂರು, ಫೆಬ್ರವರಿ 16: ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದಲ್ಲಿ ಕೆಲವು ಅಭಿವೃದ್ಧಿ ಯೋಜನೆ ಘೋಷಣೆ ಆಗಿದೆ. ಜೊತೆಗೆ ಈ ಭಾಗದಲ್ಲಿ ಉದ್ಯೋಗ ಸೃಜನೆಗೂ ಸರ್ಕಾರ ಒತ್ತು ನೀಡಿದೆ.
ಕರ್ನಾಟಕ ರಾಜ್ಯದ ಪ್ರಸಕ್ತ ಸಾಲಿನಲ್ಲಿ ಮಂಡ್ಯದ ಮೈಶುಗರ್ ಕಾರ್ಖಾನೆಯ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆಯನ್ನು ನಿರ್ಮಿಸಲಾಗುವುದು. ಸರ್ಕಾರದ ಅನುದಾನ, ಇತರೆ ಮೂಲಗಳು ಹಾಗೂ ಕಾರ್ಖಾನೆಯ Asset Monetisation ಮೂಲಕ ಸಂಪನ್ಮೂಲವನ್ನು ಕ್ರೋಢೀಕರಿಸಲಾಗುವುದು ಎಂದು ಬಜೆಟ್ ನಲ್ಲಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಜವಳಿ ಹಾಗೂ ನೇಕಾರಿಕೆ ಅಭಿವೃದ್ಧಿ, ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಜಿಸಲು 2024-29ರ ಅವಧಿಗೆ 10,000 ಕೋಟಿ ರೂ.ಗಳ ಬಂಡವಾಳ ಹೂಡಿಕೆ ಹಾಗೂ 2 ಲಕ್ಷ ಉದ್ಯೋಗಗಳ ಸೃಜನೆಯ ಗುರಿಯೊಂದಿಗೆ ಹೊಸ ಜವಳಿ ನೀತಿಯನ್ನು ಸರ್ಕಾರ ಮುಂದಿನ ದಿನಗಳಲ್ಲಿ ಜಾರಿಗೆ ತರಲಿದೆ ಎಂದರು.
ಮೆಗಾ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣ
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಮೆಗಾ ಟೆಕ್ಸ್‌ಟೈಲ್ ಪಾಕ್ ಅನ್ನು (Kalaburagi Texitile Park ) ಸ್ಥಾಪಿಸಲಾಗುತ್ತಿದೆ.
ಇದರಿಂದ ಕಲ್ಯಾಣ ಕರ್ನಾಟಕ ಭಾಗದ 1 ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಜನೆಯಾಗುವ ನಿರೀಕ್ಷೆಯಿದೆ. ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು ಎಂದು ಹೇಳಿದರು.

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ (ರಾಯಚೂರು) ಮತ್ತು ಮೈಸೂರು ವಿಭಾಗಗಳಲ್ಲಿ ನೂತನ ಜವಳಿ ಪಾರ್ಕ್ಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು. ಇದರಿಂದ ಸುಮಾರು 10,000 ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅವರು ಭರವಸೆ ನೀಡಿದರು.












Click it and Unblock the Notifications