ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆ.6 ರಿಂದ ಬಜೆಟ್ ಅಧಿವೇಶನ, 8ರಂದು ಬಜೆಟ್ ಮಂಡನೆ

|
Google Oneindia Kannada News

ಬೆಂಗಳೂರು, ಜನವರಿ 25 : ಕರ್ನಾಟಕ ಬಜೆಟ್ ಅಧಿವೇಶನ ಫೆ.6ರಿಂದ 15ರ ತನಕ ನಡೆಯಲಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಫೆ.8ರಂದು ಬಜೆಟ್ ಮಂಡನೆ ಮಾಡಲಿದ್ದಾರೆ.

ಶುಕ್ರವಾರ ಕರ್ನಾಟಕ ಸರ್ಕಾರ ಬಜೆಟ್ ಅಧಿವೇಶನದ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ. ಫೆ.6ರಿಂದ 15ರ ತನಕ ಈ ಬಾರಿಯ ಬಜೆಟ್ ಅಧಿವೇಶನ ನಡೆಯಲಿದೆ. ಫೆಬ್ರವರಿ 6ರಂದು ರಾಜ್ಯಪಾಲ ವಜುಭಾಯಿ ವಾಲಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ.

ಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಆಯವ್ಯಯದ Highlightsಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಆಯವ್ಯಯದ Highlights

ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಫೆಬ್ರವರಿ 8ರ ಶುಕ್ರವಾರ ಮಧ್ಯಾಹ್ನ 12.30ಕ್ಕೆ 2019-20ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ.

Karnataka budget

2ನೇ ಬಜೆಟ್ : ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ 2ನೇ ಬಜೆಟ್ ಮಂಡನೆಯಾಗುತ್ತಿದೆ. 2018ರ ಮೇ ತಿಂಗಳಿನಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಾಗ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಮಂಡಿಸಿದ್ದರು. ಈಗ 2ನೇ ಬಾರಿಗೆ ಅವರು ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ಕುಮಾರಸ್ವಾಮಿ ಜೆಡಿಸ್ ಭದ್ರಕೋಟೆ ಹಾಸನಕ್ಕೆ ಕೊಟ್ಟಿದ್ದೇನು?ಕುಮಾರಸ್ವಾಮಿ ಜೆಡಿಸ್ ಭದ್ರಕೋಟೆ ಹಾಸನಕ್ಕೆ ಕೊಟ್ಟಿದ್ದೇನು?

ಕೇಂದ್ರ ಸರ್ಕಾರದ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದೆ. ಅರುಣ್ ಜೇಟ್ಲಿ ಅವರ ಅನಾರೋಗ್ಯದ ಕಾರಣದಿಂದಾಗಿ ಹಣಕಾಸು ಖಾತೆಯನ್ನು ಪಿಯೂಷ್ ಘೋಯೆಲ್ ಅವರಿಗೆ ವಹಿಸಲಾಗಿದೆ. ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.

English summary
Karnataka budget section from February 6 to 15, 2019. Chief Minister and Finance minister H.D.Kumaraswamy will present budget on February 8.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X