ಸೋಮವಾರದಿಂದ ಬಜೆಟ್ ಅಧಿವೇಶನ, ಜು.5ರಂದು ಬಜೆಟ್
Recommended Video

ಬೆಂಗಳೂರು, ಜುಲೈ 01 : 15ನೇ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ಕಾಂಗ್ರೆಸ್-ಜೆಡಿಎಸ್ ನಡುವಿನ ಗೊಂದಲದ ನಡುವೆಯೇ ಅಧಿವೇಶನಕ್ಕೆ ವೇದಿಕೆ ಸಿದ್ಧವಾಗಿದೆ.
ಜುಲೈ 2ರಂದು ಅಧಿವೇಶನ ಆರಂಭವಾಗಲಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರು 12.30ಕ್ಕೆ ಭಾಷಣ ಮಾಡಲಿದ್ದಾರೆ. ಜುಲೈ 2ರಿಂದ 12ರ ತನಕ ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ.
ಜುಲೈ 5ರಂದು ರಾಜ್ಯ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ 2018-19ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ 2ನೇ ಅಧಿವೇಶ ಇದಾಗಿದೆ. ಮೇ 25ರಂದು ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡಲು ಅಧಿವೇಶನ ನಡೆದಿತ್ತು.
ರೈತರ ಸಾಲ ಮನ್ನಾ : ರೈತರ ಸಾಲ ಮನ್ನಾ ವಿಚಾರದಲ್ಲಿ ಮೈತ್ರಿ ಸರ್ಕಾರದ ನಾಯಕರ ನಡುವೆ ಜಟಾಪಟಿ ನಡೆಯುತ್ತಿದೆ. ಬಜೆಟ್ ಅಧಿವೇಶನದಲ್ಲಿ ರೈತರ ಸಾಲ ಮನ್ನಾ ಬಗ್ಗೆ ಭಾರೀ ಕುತೂಹಲವಿದೆ. ಯಾವ ರೈತರ, ಎಷ್ಟು ಸಾಲ ಮನ್ನಾವಾಗಲಿದೆ? ಎಂದು ಜನರು ಕಾಯುತ್ತಿದ್ದಾರೆ.












Click it and Unblock the Notifications