ಫೆ. 16ರಂದು ಸಿದ್ದರಾಮಯ್ಯ ಅವರಿಂದ ಕೊನೆಯ ಬಜೆಟ್ ಮಂಡನೆ
ಬೆಂಗಳೂರು, ಜನವರಿ 2: ಸಿದ್ದರಾಮಯ್ಯ ಅವರ ಕೊನೆಯ ಬಜೆಟ್ ಮಂಡನೆಗೆ ದಿನ ನಿಗದಿಯಾಗಿದೆ. ಇದೇ ಫೆಬ್ರವರಿಯಲ್ಲಿ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಸಿದ್ದರಾಮಯ್ಯ ತಮ್ಮ 5 ವರ್ಷಗಳ ಸರಕಾರದ ಕೊನೆಯ ಬಜೆಟ್ ಮಂಡಿಸಲಿದ್ದಾರೆ.
ವಿಧಾನಸಭೆ ಮತ್ತು ವಿಧಾನ ಪರಿಷತ್ ಜಂಟಿ ಅಧಿವೇಶನ ಫೆಬ್ರವರಿ 5ರಿಂದ ಆರಂಭವಾಗಲಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲಾ ಭಾಷಣ ಮಾಡಲಿದ್ದಾರೆ.

ಭಾಷಣದ ಮೇಲೆ ಫೆಬ್ರವರಿ 9ರವರೆಗೆ ಚರ್ಚೆ ನಡೆಯಲಿದೆ. ನಂತರ ಫೆಬ್ರವರಿ 16ರಂದು ಸಿದ್ದರಾಮಯ್ಯನವರು ಈ ಸರಕಾರದ ಅವಧಿಯ ಕೊನೆಯ ಬಜೆಟ್ ಮಂಡಿಸಲಿದ್ದಾರೆ.
ಬಜೆಟ್ ಅಧಿವೇಶನ ಫೆಬ್ರವರಿ 28ರಂದು ಕೊನೆಯಾಗಲಿದೆ ಎಂದು ಕಾನೂನು ಸಚಿವ ಟಿ.ಬಿ ಜಯಚಂದ್ರ ವಿವರ ನೀಡಿದ್ದಾರೆ. ಇಂದು ನಡೆದ ಸಂಪುಟ ಸಭೆಯಲ್ಲಿ ಬಜೆಟ್ ಅಧಿವೇಶನದ ದಿನ ನಿಗದಿ ಮಾಡಲಾಗಿದೆ. ಈ ವಿವರಗಳನ್ನು ಜಯಚಂದ್ರ ಪತ್ರಿಕಾಗೋಷ್ಠಿಯಲ್ಲಿ ನೀಡಿದ್ದಾರೆ.












Click it and Unblock the Notifications