ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಜೆಟ್ 2018 : ರಾಜ್ಯದ ಜನತೆಗೆ ವಿದ್ಯುತ್ ದರ ಹೆಚ್ಚಳದ ಬಿಸಿ

By Gururaj
|
Google Oneindia Kannada News

Recommended Video

Karnataka Budget 2018 : ವಿದ್ಯುತ್ ದರ ಹೆಚ್ಚಳ ಮಾಡಿದ ಎಚ್ ಡಿ ಕುಮಾರಸ್ವಾಮಿ | Oneindia Kannada

ಬೆಂಗಳೂರು, ಜುಲೈ 05 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚೊಚ್ಚಲ ಬಜೆಟ್ ಮಂಡನೆ ಮಾಡಿದರು. ಬಜೆಟ್‌ನಲ್ಲಿ ವಿದ್ಯುತ್ ದರವನ್ನು ಹೆಚ್ಚಳ ಮಾಡಲಾಗಿದೆ.

ಗುರುವಾರ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ 2018-19ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಬಜೆಟ್‌ನಲ್ಲಿ ಪ್ರತಿ ಯೂನಿಟ್‌ ವಿದ್ಯುತ್ ಮೇಲಿನ ದರವನ್ನು 20 ಪೈಸೆ ಹೆಚ್ಚಳ ಮಾಡಲಾಗಿದೆ.

LIVE: ಕರ್ನಾಟಕ ಬಜೆಟ್ 2018: ಪೆಟ್ರೋಲ್, ಡೀಸೆಲ್, ವಿದ್ಯುತ್ ಬೆಲೆ ಹೆಚ್ಚಳLIVE: ಕರ್ನಾಟಕ ಬಜೆಟ್ 2018: ಪೆಟ್ರೋಲ್, ಡೀಸೆಲ್, ವಿದ್ಯುತ್ ಬೆಲೆ ಹೆಚ್ಚಳ

Karnataka Buget 2018 : Power tariff hikes 20 paise per unit

ಕುಮಾರಸ್ವಾಮಿ ಅವರ ಘೋಷಣೆಯಿಂದಾಗಿ ಮೂರು ತಿಂಗಳಿನಲ್ಲಿ ಮತ್ತೆ ವಿದ್ಯುತ್ ದರ ಹೆಚ್ಚಾಗಲಿದೆ. ಮೇ ತಿಂಗಳಿನಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರವನ್ನು ಹೆಚ್ಚಳ ಮಾಡಿತ್ತು. ಈಗ ಪುನಃ ಪ್ರತಿ ಯೂನಿಟ್‌ಗೆ 20 ಪೈಸೆ ದರ ಹೆಚ್ಚಳವಾಗಿದೆ.

ಮೇ ತಿಂಗಳಿನಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಬೆಸ್ಕಾಂನಲ್ಲಿ 8 ಪೈಸೆ, ಚೆಸ್ಕಾಂನಲ್ಲಿ 113 ಪೈಸೆ, ಜೆಸ್ಕಾಂನಲ್ಲಿ 162 ಪೈಸೆ, ಹೆಸ್ಕಾಂ ವ್ಯಾಪ್ತಿಯಲ್ಲಿ 123 ಪೈಸೆ ದರ ಹೆಚ್ಚಳ ಮಾಡಲಾಗಿತ್ತು.

ಬಜೆಟ್‌ನಲ್ಲಿ ಇಂಧನ ಕ್ಷೇತ್ರಕ್ಕೆ ಕೊಟ್ಟಿದ್ದೇನು?

* ವಿದ್ಯುತ್ ಪ್ರಸರಣಾ ಜಾಲ ಬಲವರ್ಧನೆಗೆ 35 ವಿದ್ಯುತ್ ಉಪಕೇಂದ್ರ ಸ್ಥಾಪನೆ. 75 ಉಪ ಕೇಂದ್ರ ಮೇಲ್ದರ್ಜೆಗೆ ಏರಿಕೆ.

* ಬೆಂಗಳೂರು ನಗರದಲ್ಲಿ ಎಲ್ಲಾ Overhead ಮಾರ್ಗಗಳನ್ನು ಭೂಗತ ಮಾರ್ಗ(Underground Cable)ಗಳಾಗಿ ಪರಿವರ್ತಿಸಲು ವಿಸ್ತೃತ ಯೋಜನೆ ತಯಾರಿ. ಹಂತ ಹಂತವಾಗಿ ಅನುಷ್ಠಾನಕ್ಕೆ ಕ್ರಮ.

English summary
Karnataka Chief minister and Finance minister H.D.Kumaraswamy presented Karnataka budget 2018-19 on July 5, 2018. Power tariff hiked Rs 20 paise per unit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X