ಕರ್ನಾಟಕ ಬಜೆಟ್ 2018 : ಅನ್ನಭಾಗ್ಯ ಯೋಜನೆಯಲ್ಲಿ ಕೆಲವು ಬದಲಾವಣೆ

Recommended Video

      Karnataka Budget 2018 : ಅನ್ನಭಾಗ್ಯ ಯೋಜನೆಯಲ್ಲಿ ಬದಲಾವಣೆ ತಂದ ಎಚ್ ಡಿ ಕುಮಾರಸ್ವಾಮಿ | Oneindia Kannada

      ಬೆಂಗಳೂರು, ಜುಲೈ 05 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಚೊಚ್ಚಲ ಬಜೆಟ್ ಮಂಡನೆ ಮಾಡಿದರು. ಹಿಂದಿನ ಸರ್ಕಾರದ ಜನಪ್ರಿಯ ಕಾರ್ಯಕ್ರಮ ಅನ್ನಭಾಗ್ಯದಲ್ಲಿ ಅವರು ಹಲವು ಬದಲಾವಣೆಗಳನ್ನು ಮಾಡಿದ್ದಾರೆ.

      ಗುರುವಾರ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ 2018-19ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಅನ್ನಭಾಗ್ಯ ಯೋಜನೆಯಲ್ಲಿ ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಕೆ ಮಾಡಲಾಗುತ್ತದೆ ಎಂದು ಕುಮಾರಸ್ವಾಮಿ ಘೋಷಣೆ ಮಾಡಿದರು.

      Karnataka Buget 2018 : What for Anna Bhagya scheme

      ಅನ್ನಭಾಗ್ಯ ಯೋಜನೆಯ ಬದಲಾವಣೆಗಳು

      * ಅನ್ನಭಾಗ್ಯ ಯೋಜನೆಯಡಿ ನೀಡುತ್ತಿದ್ದ ಅಕ್ಕಿ 7 ರಿಂದ 5 ಕೆಜಿಗೆ ಇಳಿಕೆ
      * ಬಿಪಿಎಲ್ ಪಡಿತರ ಚೀಟಿಗೆ 1 ಕೆಜಿ ಪಾಮ್ ಎಣ್ಣೆ, ರಿಯಾಯಿತಿ ದರದಲ್ಲಿ ಅರ್ಧ ಕೆಜಿ ತೊಗರಿ ಬೇಳೆ ವಿತರಣೆ
      * 1 ಕೆಜಿ ಅಯೋಡಿನ್ ಉಪ್ಪು, 1 ಕೆಜಿ ಸಕ್ಕರೆ ವಿತರಣೆ

      ಬಜೆಟ್‌ನಲ್ಲಿನ ಘೋಷಣೆಗಳು

      * ಅನ್ನಭಾಗ್ಯ ಯೋಜನೆಯ ಮೌಲ್ಯವರ್ಧನೆ. ಪ್ರತಿ ಫಲಾನುಭವಿಗೆ 5 ಕೆ.ಜಿ ಉಚಿತ ಅಕ್ಕಿ ಮತ್ತು ರಿಯಾಯಿತಿ ದರದಲ್ಲಿ ಅರ್ಧ ಕೆ.ಜಿ. ತೊಗರಿಬೇಳೆ ಹಾಗೂ ಪ್ರತಿ ಬಿಪಿಎಲ್ ಪಡಿತರ ಚೀಟಿಗೆ 1 ಕೆ.ಜಿ. ಪಾಮ್ ಎಣ್ಣೆ, 1 ಕೆ.ಜಿ. ಅಯೋಡಿನ್ ಮತ್ತು ಕಬ್ಬಿಣಾಂಶಯುಕ್ತ ಉಪ್ಪು ಹಾಗೂ 1 ಕೆ.ಜಿ. ಸಕ್ಕರೆ ವಿತರಣೆ.

      * ವರ್ಷಕ್ಕೊಂದು ತಿಂಗಳು ಆಹಾರ ಸುರಕ್ಷಾ ಮಾಹೆ ಆಯೋಜನೆ; ಜಾಗೃತ ಸಮಿತಿಯ ಸದಸ್ಯರ ಸಹಕಾರದೊಂದಿಗೆ ಪಡಿತರ ಚೀಟಿಗಳ ವಾರ್ಷಿಕ ಪರಿಷ್ಕರಣೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+