Karnataka Bundh: ರಾಜ್ಯದಲ್ಲಿ ಶಾಲಾ-ಕಾಲೇಜು ರಜೆ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದೇನು?
School Holiday: ಎಂಇಎಸ್, ಶಿವಸೇನೆ ಪುಂಡಾಟ ಖಂಡಿಸಿ ಮಾರ್ಚ್ 22ರಂದು ಕರ್ನಾಟಕ ಬಂದ್ ಕರೆ ನೀಡಲಾಗಿದೆ. ಈ ಹಿನ್ನೆಲೆ ಅಂದು ರಾಜ್ಯದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗುತ್ತಿದೆಯೇ? ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇತ್ತೀಚೆಗಷ್ಟೇ ಎಂಇಎಸ್, ಶಿವಸೇನೆ ಕೆಲ ಪುಂಡರು ಕರ್ನಾಟಕ ಸಾರಿಗೆ ಕೆಎಸ್‌ಆರ್‌ಟಿಸಿ ಬಸ್ ಚಾಲಕ, ನಿರ್ವಾಹಕರಿಗೆ ಮಸಿ ಬಳಿದು ಹಲ್ಲೆಯನ್ನು ಸಹ ಮಾಡಿದ್ದರು. ಆದರೆ ಪುಂಡಾಟಿಕೆ ಮೆರೆದ ಪುಂಡರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳುವಂತೆ ಒತ್ತಡ ಹೇರಲು ಕರ್ನಾಟಕ ಬಂದ್ ಮಾಡಲಾಗುತ್ತದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದರು.

ಮತ್ತೊಂದೆಡೆ ಅಂದೇ ಕೆಲ ತರಗತಿಗಳಿಗೆ ಪರೀಕ್ಷೆಗಳು ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಬೇರೆ ದಿನ ಬಂದ್‌ಗೆ ಕರೆ ನೀಡಿ ಎನ್ನುವ ಮಾತುಗಳು ಕೇಳಿಬಂದಿದ್ದವು. ಅಲ್ಲದೆ, ಪೋಷಕರು ಕೂಡ ತಮ್ಮ ಮಕ್ಕಳನ್ನು ಅಂದು ಶಾಲೆಗೆ ಕಳುಹಿಸುವುದಾ ಬೇಡವಾ ಎನ್ನುವ ಆತಂಕದಲ್ಲಿದ್ದರು. ಇದೀಗ ಈ ಬಗ್ಗೆ ಮಧು ಬಂಗಾರಪ್ಪ ಮಾತನಾಡಿದ್ದಾರೆ.
ಶಾಲಾ-ಕಾಲೇಜುಗಳ ರಜೆ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ಮಾರ್ಚ್ 21ರಂದು ಅಂದರೆ ಇಂದು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶನಿವಾರ ಎಸ್ಎಸ್ಎಲ್ಸಿ ಪರೀಕ್ಷೆ ಇಲ್ಲ. ಸಾರ್ವಜನಿಕ ವಾಹನ ಇಲ್ಲದೆ ಇದ್ದರೆ ಮಕ್ಕಳಿಗೆ ತೊಂದರೆ ಆಗುತ್ತದೆ. ಗೃಹ ಇಲಾಖೆ ಜೊತೆ ಚರ್ಚೆ ನಡೆಸಿ ಮಾರ್ಚ್ 21ರಂದು ತೀರ್ಮಾನ ಮಾಡುತ್ತೇವೆ. ಬಂದ್ಗೆ ಸಾರಿಗೆ ಬೆಂಬಲ ನೀಡಿದರೆ, ವಿದ್ಯಾರ್ಥಿಗಳಿಗೆ ತೊಂದರೆ ಆಗಲಿದೆ ಎಂದು ಹೇಳಿದ್ದಾರೆ.
ಈಗಾಗಲೇ ಓಲಾ ಉಬರ್ ಸಂಘಟನೆ ಈ ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿದೆ. ಇನ್ನು ಈ ಬಗ್ಗೆ ಮಾತನಾಡಿರುವ ಓಲಾ, ಉಬರ್ ಡ್ರೈವರ್ ಅಸೋಸಿಯೇಷನ್ ಅಧ್ಯಕ್ಷ ತನ್ವೀರ್ ಪಾಷ ಮಾತನಾಡಿದ್ದು, ನೆಲ, ಜಲ, ಭಾಷೆ ವಿಚಾರವಾಗಿ ಬಂದ್‌ಗೆ ಕರೆ ನೀಡಲಾಗಿದೆ. ಈ ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ.
ಶನಿವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಮ್ಮ ವಾಹನಗಳು ರಸ್ತೆಗೆ ಇಳಿಯುವುದಿಲ್ಲ. ಶನಿವಾರ ಬಂದ್ ವೇಳೆ ಓಲಾ ಉಬರ್ ಸೇವೆ ಇರುವುದಿಲ್ಲ ಎಂದು ಹೇಳಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಹಲವು ಪರೀಕ್ಷೆಗಳು ನಡೆಯುತ್ತಲಿವೆ. ಈ ಮಧ್ಯೆಯೇ ಕರ್ನಾಟಕ ಬಂದ್‌ಗೆ ಕನ್ನಡ ಪರ ಸಂಘಟನೆ ಕರೆ ನೀಡಿದೆ. ಪರಿಣಾಮ ಪೋಷಕರು ಚಿಂತೆಗೆ ಒಳಗಾಗಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಬಂದ್ ಪರಿಣಾಮ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಾ ಎಂಬ ಪ್ರಶ್ನೆ ಕೂಡ ಎದುರಾಗಿದೆ. ಈ ನಡುವೆ ಕೆಲ ಶಾಲಾ-ಕಾಲೇಜುಗಳು ನೈತಿಕ ಬೆಂಬಲ ವ್ಯಕ್ತಪಡಿಸಿವೆ ಎನ್ನಲಾಗುತ್ತಿದೆ.












Click it and Unblock the Notifications