ರಾಜ್ಯಾದ್ಯಂತ ಬಸ್ ಸಂಚಾರ ಬಂದ್: ರಜೆ ಕುರಿತು ಬಿಗ್ ಅಪ್ಡೇಟ್ ಕೊಟ್ಟ ಸಾರಿಗೆ ಇಲಾಖೆ
Karnataka Bus Strike: ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಆಗಸ್ಟ್ 5ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದಾರೆ. ವೇಳೆ ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ, ಕೆಕೆಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ರಸ್ತೆಗೆ ಬಸ್ ಇಳಿಯುವುದು ಬಹುತೇಕ ಡೌಟ್ ಎನ್ನಲಾಗುತ್ತಿದೆ. ಇದರ ಬೆನ್ನಲ್ಲೇ ನೌಕಕರ ರಜೆ ಕುರಿತು ಸಾರಿಗೆ ಇಲಾಖೆ ಮಹತ್ವದ ಅಪ್ಡೇಟ್ ನೀಡಿದೆ.
ಸಾರಿಗೆ ನೌಕರರ ವೇತನ ಪರಿಷ್ಕರಣೆ ಹಾಗೂ ಪರಿಷ್ಕರಣೆ ವೇತನ ಬಾಕಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 5ರಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ವೇಳೆ KSRTC, NWKRTC, KKRTC, BMTC ಈ 4 ಸಾರಿಗೆ ನಿಗಮಗಳ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಕರೆ ನೀಡಲಾಗಿದೆ. ಇದರ ಬೆನ್ನೆಲೆ ನೌಕರರಿಗೆ ಸಾರಿಗೆ ಇಲಾಖೆ ಶಾಕ್ ನೀಡಿದ್ದು, ಮುಷ್ಕರದಲ್ಲಿ ಪಾಲ್ಗೊಳ್ಳುವ ನೌಕರರ ರಜೆ ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಮುಷ್ಕರದಲ್ಲಿ ಭಾಗಿಯಾದ್ರೆ, ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ. ಕೆಲಸಕ್ಕೆ ಹಾಜರಾಗದೇ ಗೈರಾದರೆ, ಸಂಬಳ ನೀಡುವುದಿಲ್ಲ ಎಂದು ಸಾರಿಗೆ ಇಲಾಖೆ ನೌಕರರಿಗೆ ಎಚ್ಚರಿಕೆ ಸಂದೇಶ ರಾವಾನೆ ಮಾಡಿದೆ. ಇಂದು ಮಧ್ಯ ರಾತ್ರಿಯಿಂದಲೇ ಸಾರಿಗೆ ನೌಕರರ ಮುಷ್ಕರ ಆರಂಭ ಆಗುವ ಸಾಧ್ಯತೆಯಿದೆ. ಈ ಹಿನ್ನೆಲೆ ನಾಳೆ ಅಂದರೆ ಮಂಗಳವಾರ (ಆಗಸ್ಟ್ 5) ಸಾರಿಗೆ ನೌಕರರಿಗೆ ಯಾವುದೇ ರಜೆ ಇರುವುದಿಲ್ಲ ಎಂದು ತಿಳಿಸಿದೆ.
ನೌಕರರಿಗೆ ಯಾವುದೇ ರಜೆ ಮಂಜೂರು ಮಾಡಬಾರದು. ಅಗತ್ಯ ಇದ್ದರೆ, ವೀಕ್ಲಿ ಆಫ್ ಅನ್ನು ಕೂಡ ರದ್ದು ಮಾಡುವಂತೆ ಅಧಿಕಾರಿಗಳಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ. 38 ತಿಂಗಳ ಅರಿಯರ್ಸ್ ನೀಡಲು ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಆದರೆ, ನಾವು ಮುಷ್ಕರ ಮಾಡೇ ಮಾಡುತ್ತೇವೆ ಎಂದು ಸಾರಿಗೆ ಮುಖಂಡರು ಸಭೆಯಿಂದ ಹೊರನಡೆದಿರುವ ಘಟನೆ ನಡೆದಿದೆ.
ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು ಆಗಸ್ಟ್ 5 ರಿಂದ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ಅನಿವರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಸಜ್ಜಾಗಿದ್ದು, 4 ನಿಗಮಗಳಿಂದ ಒಟ್ಟು 23,OOO ಬಸ್‌ಗಳು ರಸ್ತೆಗಿಳಿಗೆ ಇಳಿಯುವುದು ಅನುಮಾನ ಆಗಿದೆ.
ಹೈಕೋರ್ಟ್ ಆದೇಶ ಏನು?: ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಹೈಕೋರ್ಟ್ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಸಾರಿಗೆ ನೌಕರರ ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಹೈಕೋರ್ಟ್ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಗೆ ಸೂಚನೆ ನೀಡಿದೆ.
ಬಳಿಕ ನ್ಯಾ.ಕೆ.ಎಸ್.ಮುದಗಲ್, ಎಂ.ಜಿ.ಎಸ್.ಕಮಲ್ ಅವರು ಇದ್ದ ವಿಭಾಗೀಯ ಪೀಠವು ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಮತ್ತು ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿಗೂನೋಟಿಸ್ ಜಾರಿ ಮಾಡಿದೆ.
ಸಾರಿಗೆ ಸಚಿವರು ಹೇಳಿದ್ದೇನು?: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರದ ಬಗ್ಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು, ನಾವು ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಂಡಿದ್ದೇವೆ. ಈಗಾಗಲೇ ಹೈಕೋರ್ಟ್ ಮುಷ್ಕರವನ್ನ ಒಂದು ದಿನ ಮುಂದೂಡಿ ಎಂದು ಆದೇಶ ಹೊರಡಿಸಿತ್ತು. ಈ ಆದೇಶವನ್ನು ನೌಕರರು ಮತ್ತು ಅವರ ಮುಖಂಡರು ಗೌರವಿಸುತ್ತಾರೆಂದು ಅಂದುಕೊಂಡಿದ್ದೇವೆ ಎಂದು ಹೇಳಿದರು.
ಇದೇ ವೇಳೆ ಮುಂದುವರೆದು ಮಾತನಾಡಿದ ಅವರು,ಬೆಂಗಳೂರಿನ ಜೀವನಾಡಿ ಸಾರಿಗೆಯಾಗಿರು ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಆಗಿಲ್ಲ. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗಿಲ್ಲ. ಕೆಲವು ಭಾಗಗಳಲ್ಲಿ ಮಾತ್ರ ಮುಷ್ಕರ ಮಾಡುತ್ತಿದ್ದಾರೆ ಎಂದು ಹೇಳಿದರು.












Click it and Unblock the Notifications