ರಾಜ್ಯಾದ್ಯಂತ ಆಗಸ್ಟ್ 5ರಿಂದ ಬಸ್ ಸಂಚಾರ ಸ್ಥಗಿತ: ರಜೆ ಘೋಷಣೆ ಸಾಧ್ಯತೆ?
Karnataka Bus Strike: ಸಾಮಾನ್ಯವಾಗಿ ಬಸ್ ಸಂಚಾರ ಸ್ಥಗಿತಗೊಂಡರೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕಾರ್ಮಿಕರು ಸೇರಿದಂತೆ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗಲಿದೆ. ಹಾಗೆಯೇ ಇದೀಗ ಇದೇ ಆಗಸ್ಟ್ 5ರಿಂದ ಬೆಂಗಳೂರು ಜೀವನಾಡಿ ಸಾರಿಗೆ ಬಿಎಂಟಿಸಿ ಸೇರಿ ರಾಜ್ಯಾದ್ಯಂತ ಸಾರಿಗೆ ಬಸ್ ಸಂಚಾರ ಬಂದ್ ಆಗಲಿದೆ ಎಂದು ಕರೆ ನೀಡಲಾಗಿದೆ. ಹಾಗಾದ್ರೆ ಕಾರಣ ಏನು ಹಾಗೂ ಇರಿಂದ ಯಾರ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂದು ಇಲ್ಲಿ ತಿಳಿಯಿರಿ.
ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಕಾರಣಾಂತರಗಳಿಂದ ಶಾಲಾ-ಕಾಲೇಜುಗಳಿಗೆ ಸಾಲು ರಜೆಗಳನ್ನೇ ಘೋಷಣೆ ಮಾಡಲಾಗಿದೆ. ಪ್ರತಿಭಟನೆ, ಹವಾಮಾನ ವೈಪರಿತ್ಯದಂತಹ ಸಮಯಗಳಲ್ಲಿ ರಜೆ ನೀಡಲಾಗಿದೆ. ಇನ್ನೂ ಸಾರಿಗೆ ನಿಗಮಗಳ ನೌಕರರು ಆಗಸ್ಟ್ 5ರಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಲು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆ ಅಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಸಾಧ್ಯತೆಯಿದೆ.

KSRTC, NWKRTC, KKRTC, BMTC ಈ 4 ಸಾರಿಗೆ ನಿಗಮಗಳ ಸಾರಿಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಕರೆ ನೀಡಲಾಗಿದೆ. ಈ ನೌಕರರ ವೇತನ ಪರಿಷ್ಕರಣೆ ಹಾಗೂ ಪರಿಷ್ಕರಣೆ ವೇತನ ಬಾಕಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 5ರಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸದಸ್ಯ ಆರ್.ಎಫ್.ಕವಳಿಕಾಯಿ ಹೇಳಿದರು.
ಈ ಬಗ್ಗೆ ಮಾತನಾಡಿದ ಅವರು, ಆಗಸ್ಟ್ 4ರೊಳಗೆ ಸರ್ಕಾರ ಸಂಘಟನೆಗಳ ಜೊತೆ ಚರ್ಚಿಸಿ ಬೇಡಿಕೆ ಈಡೇರಿಸಲು ಒಪ್ಪಿಗೆ ನೀಡಿದರೆ, ಮುಷ್ಕರ ಹಿಂಪಡೆಯಲು ಸಿದ್ಧರಿದ್ದೇವೆ. ಒಂದು ವೇಳೆ ಇದು ಆಗದಿದ್ದರೆ, ಮುಷ್ಕರ ನಿರ್ಧಾರದಿಂದ ನಾವಂತೂ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಹೇಳಿರು.
ಮುಷ್ಕರಕ್ಕೆ ನಾಲ್ಕು ಸಾರಿಗೆ ನಿಗಮಗಳ ಎಲ್ಲಾ ಸಂಘಟನೆಗಳು ಹಾಗೂ ಎಐಟಿಸಿ ಸೇರಿದಂತೆ ಇತರೆ ಸಂಘಟನೆಗಳು ನಮಗೆ ಬೆಂಬಲ ವ್ಯಕ್ತಪಡಿಸಿವೆ. ಬೇಡಿಕೆ ಈಡೇರುವವರೆಗೂ ಮುಷ್ಕರ ಕೈ ಬಿಡುವುದಿಲ್ಲ. ಅಲ್ಲದೆ, ಅಂದು ಒಂದೇ ಒಂದು ಬಸ್ ಸಹ ರಸ್ತೆಗೆ ಇಳಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಎಸ್ಮಾ ಜಾರಿ ಮಾಡಿದರೂ ನಾವು ಎದುರಿಸುತ್ತೇವೆ. ಅದು ಸರ್ಕಾರಕ್ಕೆ ತಿರುಗು ಬಾಣ ಆಗಲಿದೆ. ಖಾಸಗಿ ಬಸ್‌ಗಳ ಮಾಲೀಕರನ್ನು ಸಹ ವಿಶ್ವಾಸಕ್ಕೆ ಪಡೆದು, ಬೆಂಬಲ ನೀಡುವಂತೆ ವಿನಂತಿ ಮಾಡುತ್ತಿದ್ದೇವೆ. ಸಾರ್ವಜನಿಕರು ಸಹ ಸಹಕರಿಸಬೇಕು ಎಂದು ವಿನಂತಿಸಿದರು. 2020ರಿಂದ ಶೇಕರ 15ರಷ್ಟು ವೇತನ ಪರಿಷ್ಕರಣೆಯ 38 ತಿಂಗಳ ಬಾಕಿ ಹಣವನ್ನು ಕೂಡಲೇ ಪಾವತಿ ಮಾಡಬೇಕು. 2023ರಲ್ಲಿ ಇದ್ದ ನೌಕರರ ಮೂಲ ವೇತನಕ್ಕೆ ಶೇಕಡ 31ರಷ್ಟು ತುಟ್ಟಿ ಭತ್ಯೆ ವಿಲೀನಗೊಳಿಸಿ, 2024ರಿಂದ ಶೇಕಡ 25ರಷ್ಟು ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿದರು.
2024 ಜನವರಿಯಿಂದ ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ ಆಗಸ್ಟ್ 5ರಂದು ಬಸ್ ಸಂಚಾರ ಬಂದ್ ಗೆ ಕರೆ ನೀಡಿದೆ. ಈ ಬಂದ್‌ನಿಂದ ರಾಜ್ಯದಲ್ಲಿ ಯಾವುದೇ ಸರ್ಕಾರಿ ಬಸ್ ಸಂಚಾರ ಮಾಡುವುದಿಲ್ಲ ಎಂದು ಸಾರಿಗೆ ನೌಕರರ ಸಂಘ ತಿಳಿಸಿದೆ.












Click it and Unblock the Notifications