ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ 2018 : ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ?

|
Google Oneindia Kannada News

Recommended Video

Karnataka By-elections 2018 : ಉಪ ಚುನಾವಣೆ 2018ರಲ್ಲಿ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ? | Oneindia Kannada

ಬೆಂಗಳೂರು, ಅಕ್ಟೋಬರ್ 15 : ಉಪ ಚುನಾವಣೆಗೆ ಮೂರು ಪಕ್ಷಗಳು ಅಧಿಕೃತವಾಗಿ ಅಭ್ಯರ್ಥಿಯನ್ನು ಘೋಷಣೆ ಮಾಡಿವೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನವಾಗಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ.

ನವೆಂಬರ್ 3ರಂದು ಶಿವಮೊಗ್ಗ, ಮಂಡ್ಯ, ಬಳ್ಳಾರಿ ಲೋಕಸಭಾ ಕ್ಷೇತ್ರ, ರಾಮನಗರ ಮತ್ತು ಜಮಖಂಡಿ ವಿಧಾಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದೆ. ರಾಜ್ಯದಲ್ಲಿ ಅಧಿಕಾರಿ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಉಪ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಂಡಿವೆ.

ರಾಮನಗರ ಉಪ ಚುನಾವಣೆ : ಕೊನೆ ಕ್ಷಣದಲ್ಲಿ ಬಿಜೆಪಿ ತಂತ್ರ ಬದಲು!ರಾಮನಗರ ಉಪ ಚುನಾವಣೆ : ಕೊನೆ ಕ್ಷಣದಲ್ಲಿ ಬಿಜೆಪಿ ತಂತ್ರ ಬದಲು!

ಕಾಂಗ್ರೆಸ್ ಪಕ್ಷಕ್ಕೆ ಶಿವಮೊಗ್ಗ, ಬಳ್ಳಾರಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡುವುದು ಸವಾಲಾಗಿತ್ತು. ಅಂತಿಮವಾಗಿ ಶಿವಮೊಗ್ಗವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು, ಬಳ್ಳಾರಿಗೆ ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ.

ಉಪ ಚುನಾವಣೆ : ಯಾವ ಕ್ಷೇತ್ರಕ್ಕೆ ಯಾರು ಕಾಂಗ್ರೆಸ್ ಉಸ್ತುವಾರಿ?ಉಪ ಚುನಾವಣೆ : ಯಾವ ಕ್ಷೇತ್ರಕ್ಕೆ ಯಾರು ಕಾಂಗ್ರೆಸ್ ಉಸ್ತುವಾರಿ?

ಜಮಖಂಡಿ, ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಂಡ್ಯ, ರಾಮನಗರ, ಶಿವಮೊಗ್ಗ ಕ್ಷೇತ್ರವನ್ನು ಪಕ್ಷ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಉಪ ಚುನಾವಣೆ ಅಭ್ಯರ್ಥಿಗಳ ಅಂತಿಮ ಪಟ್ಟಿ ಇಲ್ಲಿದೆ....

ಉಪ ಚುನಾವಣೆ : ಉಸ್ತುವಾರಿಗಳನ್ನು ನೇಮಿಸಿದ ಕರ್ನಾಟಕ ಬಿಜೆಪಿಉಪ ಚುನಾವಣೆ : ಉಸ್ತುವಾರಿಗಳನ್ನು ನೇಮಿಸಿದ ಕರ್ನಾಟಕ ಬಿಜೆಪಿ

ಮಂಡ್ಯ ಲೋಕಸಭೆ ಉಪ ಚುನಾವಣೆ

ಮಂಡ್ಯ ಲೋಕಸಭೆ ಉಪ ಚುನಾವಣೆ

* ಬಿಜೆಪಿ - ಡಾ.ಸಿದ್ದರಾಮಯ್ಯ
* ಜೆಡಿಎಸ್ - ಎಲ್.ಆರ್.ಶಿವರಾಮೇಗೌಡ

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಜೆಡಿಎಸ್‌ಗೆ ಬೆಂಬಲ ನೀಡಿದೆ.

ಬಳ್ಳಾರಿ ಲೋಕಸಭೆ ಉಪ ಚುನಾವಣೆ

ಬಳ್ಳಾರಿ ಲೋಕಸಭೆ ಉಪ ಚುನಾವಣೆ

* ಬಿಜೆಪಿ - ಜೆ.ಶಾಂತ
* ಕಾಂಗ್ರೆಸ್ - ವಿ.ಎಸ್.ಉಗ್ರಪ್ಪ

ಕಾಂಗ್ರೆಸ್ ಸೋಮವಾರ ಬಳ್ಳಾರಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಪಕ್ಷದ ಹಿರಿಯ ನಾಯಕ ವಿ.ಎಸ್.ಉಗ್ರಪ್ಪ ಅಭ್ಯರ್ಥಿಯಾಗಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಿಫಾರಂ ವಿತರಣೆ ಮಾಡಿದರು.

ಶಿವಮೊಗ್ಗ ಲೋಕಸಭಾ ಉಪ ಚುನಾವಣೆ

ಶಿವಮೊಗ್ಗ ಲೋಕಸಭಾ ಉಪ ಚುನಾವಣೆ

* ಬಿಜೆಪಿ - ಬಿ.ವೈ.ರಾಘವೇಂದ್ರ
* ಜೆಡಿಎಸ್ - ಮಧು ಬಂಗಾರಪ್ಪ

ಕಾಂಗ್ರೆಸ್ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಜೆಡಿಎಸ್‌ ಬೆಂಬಲಿಸಿದೆ. ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಬಳಿ ಬಿಫಾರಂ ಪಡೆದಿದ್ದು, ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಜಮಖಂಡಿ ವಿಧಾನಸಭಾ ಕ್ಷೇತ್ರ

ಜಮಖಂಡಿ ವಿಧಾನಸಭಾ ಕ್ಷೇತ್ರ

* ಬಿಜೆಪಿ - ಶ್ರೀಕಾಂತ್ ಕುಲಕರ್ಣಿ
* ಕಾಂಗ್ರೆಸ್ - ಆನಂದ್‌ ಸಿದ್ದು ನ್ಯಾಮೇಗೌಡ

ದಿ.ಸಿದ್ದು ನ್ಯಾಮೇಗೌಡ ಪುತ್ರ ಆನಂದ್‌ ಸಿದ್ದು ನ್ಯಾಮೇಗೌಡ ಅವರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬಿಫಾರಂ ವಿತರಣೆ ಮಾಡಿದರು.

ರಾಮನಗರ ವಿಧಾನಸಭಾ ಕ್ಷೇತ್ರ

ರಾಮನಗರ ವಿಧಾನಸಭಾ ಕ್ಷೇತ್ರ

* ಬಿಜೆಪಿ - ಎಲ್.ಚಂದ್ರಶೇಖರ್
* ಜೆಡಿಎಸ್ - ಅನಿತಾ ಕುಮಾರಸ್ವಾಮಿ

ಎಲ್.ಚಂದ್ರಶೇಖರ್ ಕಾಂಗ್ರೆಸ್ ನಾಯಕ ಸಿ.ಎಂ.ಲಿಂಗಪ್ಪ ಪುತ್ರರಾಗಿದ್ದು 5 ದಿನಗಳ ಹಿಂದೆ ಬಿಜೆಪಿ ಸೇರಿದ್ದರು. ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದ್ದು, ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

English summary
Congress, JD(S) and BJP announced candidates list for 2 assembly constituency and 3 Lok Sabha seats by elections. By election will be held on November 3 and counting will be held on November 6, 2018. Here is a list of Candidates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X