ರಾಜ್ಯದಲ್ಲಿ ಉಪ ಚುನಾವಣೆ: ಮಹತ್ವದ ಬದಲಾವಣೆಗೆ ಮುಂದಾದ ಕಾಂಗ್ರೆಸ್, ತುರ್ತು ಸಭೆ
ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುಲಿದೆ. ಈ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ಅತ್ಯಂತ ನಿರ್ಣಾಯಕವಾಗಿದೆ. ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಕಾಂಗ್ರೆಸ್ ಹಾಗೂ ಬಿಜೆಪಿ - ಜೆಡಿಎಸ್ ಪಕ್ಷಗಳು ಚುನಾವಣಾ ರಣತಂತ್ರ ರೂಪಿಸುತ್ತಿವೆ. ಈ ನಡುವೆ ಕಾಂಗ್ರೆಸ್ ನಾಯಕರು ತುರ್ತು ಸಭೆ ನಡೆಸಿದ್ದಾರೆ.
ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಡೆಯುತ್ತಿರುವ ಎರಡನೇ ಉಪ ಚುನಾವಣೆ ಇದಾಗಿದೆ. ಈ ಹಿಂದೆ ಅಂದರೆ ಇದೇ ವರ್ಷ ಜೂನ್‌ನಲ್ಲಿ ಸುರಪುರ ವಿಧಾನಸಭೆ ಕ್ಷೇತ್ರದಲ್ಲೂ ಉಪ ಚುನಾವಣೆ ನಡೆದಿತ್ತು. ಆಗ ಕಾಂಗ್ರೆಸ್‌ನ ಅಭ್ಯರ್ಥಿ ರಾಜಾ ವೇಣುಗೋಪಾಲ್ ನಾಯಕ ಅವರು ಭರ್ಜರಿ ಗೆಲುವು ಸಾಧಿಸಿದ್ದರು. ಆದರೆ, ಈಗ ರಾಜ್ಯದಲ್ಲಿ ಪರಿಸ್ಥಿತಿ ತುಂಬಾ ಭಿನ್ನವಾಗಿದೆ.

ಇದೇ ಕಾರಣಕ್ಕೆ ರಾಜ್ಯ ಕಾಂಗ್ರೆಸ್ ಅಲರ್ಟ್ ಆಗಿದ್ದು. ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರೊಂದಿಗೆ ತುರ್ತು ಸಭೆ ನಡೆಸಿದೆ. ಮೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ರಾಜ್ಯಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣಗೋಪಾಲ ಅವರು ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಮೂರು ಕ್ಷೇತ್ರದಲ್ಲಿ ಗೆಲ್ಲಲು ಪ್ರಾಥಮಿಕ ವಿಷಯಗಳನ್ನು ಈ ಸಭೆಯಲ್ಲಿ ಚರ್ಚಿಸಲಾಗಿದೆ ಎನ್ನಲಾಗಿದೆ.
ಸಚಿವರನ್ನು ಚುನಾವಣೆಗೆ ನೇಮಿಸಿ: ಇನ್ನು ಮೂರು ಕ್ಷೇತ್ರದ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್. ಏಕಕಾಲಕ್ಕೆ ಎರಡು ಹಣ್ಣುಗಳನ್ನು ಹೊಡೆಯಲು ಮುಂದಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವರ ರಹಸ್ಯ ಸಭೆಯನ್ನು ತಪ್ಪಿಸಲು ಸಚಿವರಿಗೆ ಈ ಕ್ಷೇತ್ರಗಳ ಉಸ್ತುವಾರಿ ನೀಡುವ ಸಾಧ್ಯತೆ ಇದೆ. ಇದರಿಂದ ಸಚಿವರು ಉಪ ಚುನಾವಣೆಯಲ್ಲಿ ಬ್ಯುಸಿಯಾಗುತ್ತಾರೆ ಅದರಿಂದ ಚುನಾವಣೆ ಕೆಲಸವೂ ಆಗುತ್ತೆ. ಅತ್ತ ಕಡೆ ಸಚಿವರ ರಹಸ್ಯ ಸಭೆ ಮಾಡುವುದು ಸಹ ತಪ್ಪುತ್ತದೆ. ಇಂತಹದೊಂದು ಐಡಿಯಾವನ್ನು ಕೆ.ಸಿ ವೇಣುಗೋಪಾಲ್ ಅವರು ನೀಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ಅಭ್ಯರ್ಥಿ ಘೋಷಿಸಲಿ: ಕಾಂಗ್ರೆಸ್ ಈ ಬಾರಿ ಕಾದು ನೋಡುವ ತಂತ್ರವನ್ನು ಅನುಸರಿಸಲು ನಿರ್ಧರಿಸಿದಂತೆಯಂತೆ. ಮೊದಲು ಈ ಮೂರು ಕ್ಷೇತ್ರಗಳಲ್ಲಿ ಬಿಜೆಪಿ - ಜೆಡಿಎಸ್ ತನ್ನ ಮೈತ್ರಿ ಅಭ್ಯರ್ಥಿಯನ್ನು ಘೋಷಿಸಲಿ. ಆ ಮೇಲೆ ಕಾಂಗ್ರೆಸ್ ಅಭ್ಯರ್ಥಿಯಾರಾಗಬೇಕು ಎಂದು ನಿರ್ಧರಿಸೋಣ ಎಂದು ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎನ್ನಲಾಗಿದೆ.
ಸಂಡೂರಿನಲ್ಲಿ ಮೊದಲು ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಇ ತುಕಾರಂ ಅವರು ಗೆದಿದ್ದರು. ಅಲ್ಲದೇ ಲೋಕಸಭೆ ಚುನಾವಣೆಯಲ್ಲೂ ಅವರು ಗೆದಿದ್ದಾರೆ. ಹೀಗಾಗಿ ಅವರ ಕುಟುಂಬದವರೊಬ್ಬರಿಗೆ ಟಿಕೆಟ್ ಸಿಗುವುದು ಬಹುತೇಕ ಕನ್ಫರ್ಮ್ ಎನ್ನಲಾಗಿದೆ. ಚನ್ನಪಟ್ಟಣದಲ್ಲಿ ಡಿ.ಕೆ ಶಿವಕುಮಾರ್ ಅವರ ಸಹೋದರ ಡಿ.ಕೆ ಸುರೇಶ್ ಅವರನ್ನೇ ನಿಲ್ಲಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಇನ್ನು ಶಿಗ್ಗಾಂವಿ ಬಗ್ಗೆಯೂ ಈ ಸಭೆಯಲ್ಲಿ ಚರ್ಚೆಯಾಗಿದೆಯಾರೂ, ಸ್ಪಷ್ಟತೆ ಮೂಡಿಲ್ಲ. ಸಿಪಿ ಯೋಗೇಶ್ವರ್ ಅವರ ನಡೆಯ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ.
-
Bagalkot: ಬಾಗಲಕೋಟೆಯಲ್ಲಿ ಕಮಲದ ವಿಜಯೋತ್ಸವ ನಿಶ್ಚಿತ: ಪ್ರಹ್ಲಾದ್ ಜೋಶಿ ವಿಶ್ವಾಸ -
Kerala Elections 2026: ಕೇರಳಂ ಚುನಾವಣಾ ಸಮೀಕ್ಷೆ: ಯುಡಿಎಫ್ಗೆ ಅಧಿಕಾರದ ಹಾದಿ ಸುಗಮ; ಎಲ್ಡಿಎಫ್ಗೆ ಹಿನ್ನಡೆ ಸಾಧ್ಯತೆ -
Viral Video: ತಮಿಳುನಾಡು ಚುನಾವಣೆ: ಹಸಿ ಸೊಪ್ಪು, ತರಕಾರಿ ತಿನ್ನುತ್ತಾ ಮತಯಾಚಿಸಿದ ಸ್ವತಂತ್ರ ಅಭ್ಯರ್ಥಿ ನಟ ಮನ್ಸೂರ್ ಅಲಿ ಖಾನ್ -
ಬಾಗಲಕೋಟೆಗೆ ಸಿದ್ದರಾಮಯ್ಯ ದ್ರೋಹ ಮಾಡಿದ್ರೆ ಪಕ್ಷ ಮತ್ತೆ ಗೆಲ್ಲುತ್ತಿತ್ತೇ? ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್ ತಿರುಗೇಟು -
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications