ಒಂದೆರೆಡು ರಾಜ್ಯಗಳಲ್ಲಿ ಬಿಟ್ಟರೆ ದೇಶಾದ್ಯಂತ ಕಾಂಗ್ರೆಸ್ ನಶಿಸಿ ಹೋಗ್ತಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ, ನವೆಂಬರ್ 23: ಉಪ ಚುನಾವಣೆಯಲ್ಲಿ ಜನ ಆಡಳಿತಾರೂಢ ಪಕ್ಷಕ್ಕೆ ಜೈಕಾರ ಹಾಕೋದು ಸಹಜ. ಜೊತೆಗೆ ರಾಜ್ಯದಲ್ಲಿ ಹಣ, ಹೆಂಡ ಮತ್ತು ಸರ್ಕಾರಿ ಮಿಶಿನರಿಗಳು ಅವ್ಯಾಹತ ಬಳಕೆ ಈ ಫಲಿತಾಂಶಕ್ಕೆ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ವಿಧಾನಸಭೆ ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳು ಕಾಂಗ್ರೆಸ್ ಪಾಲಾದ ಬಗ್ಗೆ ಪ್ರತಿಕ್ರಿಯಿಸಿದರು.
ಉಪ ಚುನಾವಣೆಗಳಲ್ಲಿ ಜನರು ಆಡಳಿತ ಪಕ್ಷದ ಜತೆ ಹೋಗೋದು ಸಾಮಾನ್ಯ. ಕ್ಷೇತ್ರದ ಅಭಿವೃದ್ಧಿ, ಹೆಚ್ಚಿನ ಅನುದಾನ ನಿರೀಕ್ಷಿಸಿ ಆಡಳಿತಾರೂಢ ಅಕ್ಷಕ್ಕೆ ಜೈಕಾರ ಹಾಕುತ್ತಾರೆ. ಆದರೆ, ಈ ಚುನಾವಣೆಯಲ್ಲಿ ಆಡಳಿತಾರೂಢರ ಹಣ-ಹೆಂಡ ಕೆಲಸ ಮಾಡಿದೆ. ಒಂದೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯಯಲ್ಲಿ ಒಬ್ಬಿಬ್ಬರು ಸಚಿವರು, 10-15 ಶಾಸಕರು ಬೀಡು ಬಿಟ್ಟು ಹಣ ಬಲದಿಂದ ಚುನಾವಣೆ ಎದುರಿಸಿದ್ದಾರೆ. ಜೊತೆಗೆ ಸರ್ಕಾರದ ಮಶಿನರಿಗಳ ದುರ್ಬಳಕೆ ಆಗಿರುವುದೂ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಹೇಳಿದರು.

ರಾಜ್ಯ ಉಪ ಚುನಾವಣೆ ಸೋತಿದ್ದೇವೆ ನಿಜ. ಆದರೆ, ನಾವು ಕಾಂಗ್ರೆಸ್ ನವರ ಹಾಗೆ ಇವಿಎಂ ದೋಷ ಅಂತ ಹೇಳುತ್ತಿಲ್ಲ. ಬೈ ಎಲೆಕ್ಷನ್ ಅಲ್ಲಿ ಆಡಳಿತಾರೂಢ ಅಲೆ ಸಾಮಾನ್ಯ.ಬಿಜೆಪಿಯೂ ಹಿಂದೆ ಅನೇಕ ಬಾರಿ ಉಪ ಚುನಾವಣೆಗಳಲ್ಲಿ ಗೆದ್ದಿದೆ. 2019ರ ಬಳಿಕ ನಡೆದಂತಹ ಉಪ ಚುನಾವಣೆಗಳಲ್ಲಿ ಗೆದ್ದಿದ್ದೇವೆ. ಆದರೆ, ಸಾರ್ವತ್ರಿಕ ಚುನಾವಣೆಯಲ್ಲಿ ಸೋತಿದ್ದಿದೆ. ಈ ಬಾರಿ ಜನ ತೀರ್ಮಾನ ಮಾಡಿದ್ದರೆ ಗೆಲ್ಲಬಹುದಿತ್ತು ಎಂದರು.
ರಾಜ್ಯ ವಿಧಾನಸಭೆ ಉಪ ಚುನಾವಣೆ ಸೋಲಿನ ಬಗ್ಗೆ ಬಿಜೆಪಿ ನಾಯಕರು ಆತ್ಮವಿಮರ್ಶೆ ಮಾಡಿಕೊಳ್ಳುತ್ತೇವೆ. ಸೋಲಾದ ಮಾತ್ರಕ್ಕೆ ಕಾಂಗ್ರೆಸ್ ಪಕ್ಷದವರ ಹಾಗೆ ಇವಿಎಂ ದೋಷ ಎನ್ನುವುದಿಲ್ಲ. ಒಂದೆರೆಡು ರಾಜ್ಯಗಳಲ್ಲಿ ಬಿಟ್ಟರೆ ದೇಶಾದ್ಯಂತ ಕಾಂಗ್ರೆಸ್ ನಶಿಸಿ ಹೋಗುತ್ತಿದೆ. ಸಂಪೂರ್ಣ ನೆಲಕಚ್ಚಿದೆ. ಮಹಾರಾಷ್ಟ್ರದಲ್ಲಿ ಬರೀ 21 ಸ್ಥಾನ ಪಡೆದಿದ್ದಾರೆ. ವಿರೋಧ ಪಕ್ಷದ ಲೀಡರ್ ಆಗಲೂ ಲಾಯಕ್ಕಿಲ್ಲದಂತಹ ಸ್ಥಿತಿ ತಲುಪಿದ್ದಾರೆ ಎಂದು ಟೀಕಿಸಿದರು.

ಜಾರ್ಖಂಡ್ ಅಲ್ಲಿ ಜೆಎಂಎಂ ಕೈ ಹಿಡಿದಿದ್ದರಿಂದ ಕಾಂಗ್ರೆಸ್ 10 ಸೀಟ್ ಗೆದ್ದುಕೊಂಡಿದೆ ಅಷ್ಟೇ, ಆದರೆ ಬಿಜೆಪಿ, ಜೆಎಂಎಂ ಮಧ್ಯೆ ಸಮಬಲ ಹೋರಾಟ ನಡೆದಿದೆ. ಕಾಂಗ್ರೆಸ್ ಪಕ್ಷ ಪರಜೀವಿ ಪಾರ್ಟಿ. ಅತೃಪ್ತರ ದೇಹದೊಳಕ್ಕೆ ಹೊಕ್ಕು ಇರುವಂತಹ ಅದೃಶ್ಯದ ಅಕ್ಷ ಎಂದು ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು.












Click it and Unblock the Notifications