• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಫಲಿತಾಂಶ ಟ್ರೆಂಡ್: ಬಿಜೆಪಿಗೆ 10ರಲ್ಲಿ ಗೆಲುವು ಖಾತ್ರಿ, ಮಿಕ್ಕ ಕಡೆ ಆತಂಕ

|

ಬೆಂಗಳೂರು, ಡಿಸೆಂಬರ್ 09: 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಡಿಸೆಂಬರ್ 9ರಂದು ಆರಂಭವಾಗಿದ್ದು, ಮೊದಲ ಎರಡು ಗಂಟೆ ಅವಧಿಯಲ್ಲಿನ ವರದಿ ಇಲ್ಲಿದೆ.

ಗುರುವಾರ(ಡಿಸೆಂಬರ್ 05)ರಂದು ಎಲ್ಲಾ ಕ್ಷೇತ್ರಗಳಿಂದ ಶೇ 67.90ರಷ್ಟು ಮತದಾನ ದಾಖಲಾಗಿತ್ತು. ಸಮೀಕ್ಷೆಗಳ ಸರಾಸರಿಯಲ್ಲಿ ಬಿಜೆಪಿ ಗೆದ್ದಿದೆ. ಆದರೆ, ಮತದಾರ ಪ್ರಭುಗಳ ನಿರ್ಣಯ ಯಾರ ಪರ ಇದೆ ಎಂಬುದು ಕುತೂಹಲಕಾರಿಯಾಗಿದೆ.

ಫಲಿತಾಂಶಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಪ್ರಕ್ರಿಯೆಯತ್ತ ಯಡಿಯೂರಪ್ಪ

ಎಲ್ಲಾ ಸಮೀಕ್ಷೆಗಳ ಸರಾಸರಿ ನೋಡಿದರೆ ಕೇವಲ 8 ರಿಂದ 10 ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತವಾಗಿದೆ. ಬಿಜೆಪಿ ಸಮೀಕ್ಷೆ ಕೂಡ 10ಕ್ಕೂ ಕಡಿಮೆ ಕ್ಷೇತ್ರಗಳಲ್ಲಿ ಗೆಲ್ಲಬಹುದು ಎಂಬ ವರದಿ ಬಂದಿದೆ. ಈಗ ಈ ಸಮಯದ ಟ್ರೆಂಡ್ ನೋಡಿದರೆ ಕನಿಷ್ಠ 10-12ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಕನಿಷ್ಠ 10 ಸ್ಥಾನ ಗೆಲ್ಲುವ ಖಾತ್ರಿ ಹೊಂದಿದೆ. ಈ ನಡುವೆ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಯಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಅವರು ಭರ್ಜರಿ ಜಯ ದಾಖಲಿಸಿದ್ದಾರೆ. ಶಿವರಾಮ ಹೆಬ್ಬಾರ್ ಗೆ 31, 406 ಮತಗಳ ಅಂತರದಿಂದ ಗೆಲುವು ಲಭಿಸಿದ್ದು, ಅಧಿಕೃತ ಘೋಷಣೆ ಬಾಕಿಯಿದೆ.

By-Election Results LIVE: ಮೊದಲ ಗೆಲುವಿನ ರುಚಿ ಕಂಡ ಬಿಜೆಪಿ

ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ 105 ಸದಸ್ಯ ಬಲ ಹೊಂದಿದೆ. ವಿಧಾನಸಭೆ ಸದಸ್ಯ ಬಲ 112 ಆಗಲು ಬಿಜೆಪಿ 7 ಸ್ಥಾನವನ್ನು ಗೆಲ್ಲಲೇಬೇಕು. ಆಗ ಮಾತ್ರ ಸರ್ಕಾರ ಬಹುಮತ ಪಡೆಯಲು ಸಾಧ್ಯ. ಇನ್ನೂ 2 ಕ್ಷೇತ್ರದ ಉಪ ಚುನಾವಣೆ ನಡೆಯಬೇಕು. ಆದ್ದರಿಂದ, ಸೋಮವಾರ ಫಲಿತಾಂಶ ಪ್ರಕಟಗೊಂಡ ಬಳಿಕ ಸದನದ ಬಲ 222ಕ್ಕೆ ಏರಿಕೆಯಾಗಲಿದೆ.

English summary
With Counting underway for Karnataka Assembly by elections 2019, the early trends show that BJP is leading in 10,Congress- JDS -2 seats each, one independent.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X