• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
LIVE

ಮೂರು ಕ್ಷೇತ್ರಗಳ ಉಪಚುನಾವಣೆ, ಶಾಂತಿಯುತ ಮತದಾನ

|

ಏಪ್ರಿಲ್ 17ರಂದು ಕರ್ನಾಟಕದ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ಆರಂಭವಾಗಿದೆ.

ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದರೆ, ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರ ನಿಧನದಿಂದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ.

ಇನ್ನು ಕಳೆದ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲರು ತಮ್ಮ ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ಮಸ್ಕಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದೆ.

ಬೆಳಗಾವಿ ಲೋಕಸಭೆ ಉಪ ಚುನಾವಣಾ ಕಣದಲ್ಲಿ ಬಿಜೆಪಿಯಿಂದ ದಿ.ಸುರೇಶ್ ಅಂಗಡಿ ಅವರ ಪತ್ನಿ ಮಂಗಲ ಸುರೇಶ್ ಅಂಗಡಿ ಅವರು ಸ್ಪರ್ಧಿಸಿದ್ದರೆ, ಕಾಂಗ್ರೆಸ್ ಪಕ್ಷದಿಂದ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಸ್ಪರ್ಧಿಸಿದ್ದಾರೆ. ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

Karnataka By Elections 2021 Live Updates: Maski, Basavakalyana Assembly and Belagavi LS Bypoll News

ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಶರಣು ಸಲಗರ ಸ್ಪರ್ಧಿಸಿದ್ದರೆ, ಕಾಂಗ್ರೆಸ್ ಪಕ್ಷದಿಂದ ಬಿ.ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಬಿ.ನಾರಾಯಣರಾವ್ ಸ್ಪರ್ಧಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ ಚುನಾವಣಾ ಕಣದಲ್ಲಿದ್ದರೆ, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖೂಬಾ ಆಖಾಡಕ್ಕಿಳಿದಿದ್ದಾರೆ.

ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭೆ ಉಪ ಚುನಾವಣಾ ಕಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪಗೌಡ ಪಾಟೀಲ್ ಸ್ಪರ್ಧಿಸಿದ್ದು, ಕಾಂಗ್ರೆಸ್ ಪಕ್ಷದಿಂದ ಬಸನಗೌಡ ತುರವಿಹಾಳ ಸ್ಪರ್ಧಿಸಿದ್ದಾರೆ. ಇಲ್ಲಿ ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

ಈ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಮೇ 02 ರಂದು ಪ್ರಕಟವಾಗಲಿದೆ.

   ಲಕ್ಷ ಲಕ್ಷ ಜನರಿಗೆ ಕೊರೋನ ಸೋಂಕು ! | Oneindia Kannada

   Newest First Oldest First
   9:40 PM, 17 Apr
   ಅಂತಿಮ ಶೇಕಡವಾರು ಮತದಾನ
   ಬೆಳಗಾವಿ ಲೋಕಸಭಾ ಕ್ಷೇತ್ರ: 54.73% ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ: 59.57% ಮಸ್ಕಿ ವಿಧಾನಸಭಾ ಕ್ಷೇತ್ರ: 70. 48%
   8:41 PM, 17 Apr
   ಮತದಾರರಿಗೆ ಧನ್ಯವಾದ ಅರ್ಪಿಸಿದ ಬಿಜೆಪಿ
   ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಮತದಾರ ಬಂಧುಗಳಿಗೆ ಧನ್ಯವಾದಗಳು ಎಂದು ಬಿಜೆಪಿ ಟ್ವೀಟ್ ಮಾಡಿದೆ
   6:48 PM, 17 Apr
   ಸಂಜೆ 6 ಗಂಟೆಗೆ ಮೂರು ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯವಾಗಿದೆ. ಆದರೆ, ಕೋವಿಡ್ ಸೋಂಕಿತರಿಗೆ ಸಂಜೆ 7 ಗಂಟೆಯ ತನಕ ಮತದಾನ ಮಾಡಲು ಅವಕಾಶ ನೀಡಲಾಗಿದೆ.
   6:07 PM, 17 Apr
   ರಾಯಚೂರು
   ಮಸ್ಕಿ ಕ್ಷೇತ್ರದಲ್ಲಿ ಸಂಜೆ 5 ಗಂಟೆಯ ತನಕ ಶೇ 62.76ರಷ್ಟು ಮತದಾನ ನಡೆದಿದೆ.
   5:45 PM, 17 Apr
   ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ಗೋಕಾಕ ನಗರದ ಜಿ.ಆರ್.ಬಿ.ಸಿ. ಕಾಲನಿಯ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 162 ರಲ್ಲಿ ಮತ ಚಲಾಯಿಸಿದರು.
   5:23 PM, 17 Apr
   ಮಸ್ಕಿ ತಾಲೂಕಿನ ವಟಗಲ್ ಗ್ರಾಮದ ಮತಗಟ್ಟೆ 8ರಲ್ಲಿ ಮತದಾನದ ವೇಳೆ ಮತದಾರ ಮೊಬೈಲ್ ಬಳಕೆ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಅದರ ವಿಡಿಯೋ ಮಾಡಿಕೊಂಡಿದ್ದಾರೆ.
   4:38 PM, 17 Apr
   ರಾಯಚೂರು
   ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಮಧ್ಯಾಹ್ನ 3 ಗಂಟೆಯ ತನಕ ಶೇ 52.56ರಷ್ಟು ಮತದಾನವಾಗಿದೆ.
   4:04 PM, 17 Apr
   ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಇದುವರೆಗೂ 37.73ರಷ್ಟು ಮತದಾನವಾಗಿದೆ. ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವನ್ನು ನೀಡಲಾಗಿದೆ.
   3:41 PM, 17 Apr
   ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿನ ಮತದಾನದ ಪ್ರಮಾಣ
   3:29 PM, 17 Apr
   ಉಪ ಚುನಾವಣೆಯ ಮತದಾನದ ಪ್ರಮಾಣ
   3:14 PM, 17 Apr
   ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಇದುವರೆಗೂ ಶೇ 25.2ರಷ್ಟು ಮತದಾನವಾಗಿದೆ.
   2:46 PM, 17 Apr
   ಬೀದರ್
   ಬೀದರ್
   ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
   2:20 PM, 17 Apr
   ಮತದಾನ ಮಾಡುವಾಗ ಜನರು ಗೌಪ್ಯತೆ ಕಾಪಾಡಬೇಕು. ಆದರೆ, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಎಂಇಎಸ್ ಅಭ್ಯರ್ಥಿ ಮತದಾನ ಮಾಡುವ ವಿಡಿಯೋವನ್ನು ಮಾಡಲಾಗಿದ್ದು, ಅದು ಈಗ ವೈರಲ್ ಆಗಿದೆ.
   2:04 PM, 17 Apr
   ಬೆಳಗಾವಿ
   ರಾಜ್ಯಸಭಾ ಸದಸ್ಯ, ಬಿಜೆಪಿ ನಾಯಕ ಈರಣ್ಣ ಕಡಾಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಮತದಾನ ಮಾಡಿದರು.
   1:54 PM, 17 Apr
   ಮಸ್ಕಿ ಕ್ಷೇತ್ರದ ಸಿಂಧನೂರು ತಾಲೂಕಿನ ಕುರಕುಂದಿ ಗ್ರಾಮದ ಮತಗಟ್ಟೆ ಹತ್ತಿರ ಕಾಂಗ್ರೆಸ್ ಬೆಂಬಲಿಗರು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಮತಗಟ್ಟೆ ವ್ಯಾಪ್ತಿಯ 100 ಮೀಟರ್ ಒಳಗೆ ಬಿಜೆಪಿ ಅವರು ನಿಂತಿದ್ದಾರೆ. ಪೊಲೀಸರು ಬಿಜೆಪಿ ಏಜೆಂಟರಂತೆ ವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
   1:47 PM, 17 Apr
   ರಾಯಚೂರು
   ಮಸ್ಕಿ ಉಪ ಚುನಾವಣೆಯಲ್ಲಿ ಮಧ್ಯಾಹ್ನ 1 ಗಂಟೆಯ ತನಕ 32.51ರಷ್ಟು ಮತದಾನವಾಗಿದೆ.
   1:27 PM, 17 Apr
   ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಮಧ್ಯಾಹ್ನ 1 ಗಂಟೆಯ ತನಕ ಶೇ 32.51ರಷ್ಟು ಮತದಾನವಾಗಿದೆ.
   1:15 PM, 17 Apr
   ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಉಪ ಚುನಾವಣೆ ಕರ್ತವ್ಯಕ್ಕೆ ಶಿಕ್ಷಕರು ಸೇರಿದಂತೆ 29 ಜನರು ಗೈರಾಗಿದ್ದಾರೆ. ಎಲ್ಲರ ವಿರುದ್ಧ ಮಸ್ಕಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
   1:03 PM, 17 Apr
   ಬೆಳಗಾವಿ
   ಬೆಳಗಾವಿ
   ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಮತದಾನದ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಲಾಗುತ್ತಿದೆ.
   12:45 PM, 17 Apr
   ಮಸ್ಕಿ ಕ್ಷೇತ್ರದಲ್ಲಿ ಒಟ್ಟು 7 ಜನ ಕೋವಿಡ್ ಸೋಂಕಿತರು ಇದ್ದಾರೆ. ಎಲ್ಲರಿಗೂ ಸಂಜೆ 6 ಗಂಟೆಯ ನಂತರ ಮತದಾನ ಮಾಡಲು ಮಾಹಿತಿ ನೀಡಲಾಗಿದೆ. ಮತಗಟ್ಟೆಯ ಸಿಬ್ಬಂದಿಗೆ ಪಿಪಿಇ ಕಿಟ್ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಮಾಹಿತಿ ನೀಡಿದ್ದಾರೆ.
   12:32 PM, 17 Apr
   ಬೆಳಗಾವಿ
   ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬೆಳಗ್ಗೆ 11 ಗಂಟೆಯ ತನಕ ಶೇ 12.29ರಷ್ಟು ಮತದಾನ ನಡೆದಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹೆಚ್ಚು ಎಂದರೆ 19.48ರಷ್ಟು ಮತದಾನ ನಡೆದಿದೆ.
   12:27 PM, 17 Apr
   ರಾಯಚೂರು
   ಮಸ್ಕಿ ಕ್ಷೇತ್ರದಲ್ಲಿ 11 ಗಂಟೆಯ ತನಕ ಶೇ 19.30ರಷ್ಟು ಮತದಾನ ನಡೆದಿದೆ.
   11:48 AM, 17 Apr
   ಬೆಳಗಾವಿ
   ಚುನಾವಣಾಧಿಕಾರಿ ಆಗಿರುವ ಬೆಳಗಾವಿ ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ್ ಬೆಳಗ್ಗೆ ನಗರದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ, ಮತದಾನ ಪ್ರಕ್ರಿಯೆ ವೀಕ್ಷಿಸಿದರು. ಕೋವಿಡ್ ಮಾರ್ಗಸೂಚಿ ಪಾಲನೆಯನ್ನು ವೀಕ್ಷಣೆ ಮಾಡಿದರು.
   11:32 AM, 17 Apr
   ಮೈಸೂರು
   ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಹಣ ಹಂಚಿಕೆ ಕುರಿತಂತೆ ಕಾಂಗ್ರೆಸ್ ಮಾಡಿರುವ ಆರೋಪವನ್ನು ತಳ್ಳಿಹಾಕಿರುವ ವಸತಿ ಸಚಿವ ವಿ. ಸೋಮಣ್ಣ, ಮೂರು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
   11:15 AM, 17 Apr
   ಬೀದರ್
   ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಯಸ್ರಬ್ ಅಲಿ ಖಾದ್ರಿ ತಾಯಿಯ ಜೊತೆ ಆಗಮಿಸಿ ಮತಗಟ್ಟೆ ಸಂಖ್ಯೆ 97ರಲ್ಲಿ ಹಕ್ಕು ಚಲಾವಣೆ ಮಾಡಿದ್ದಾರೆ.
   11:08 AM, 17 Apr
   ಗೋಕಾಕ್ ವಿಧಾನಸಭಾ ಕ್ಷೇತ್ರದ ನ್ಯೂ ಇಂಗ್ಲಿಶ್ ಶಾಲೆಯ ಮತಗಟ್ಟೆಯಲ್ಲಿ ಜಯಶ್ರೀ ಜಾರಕಿಹೊಳಿ ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಮತದಾನ ಮಾಡಿದರು.
   10:31 AM, 17 Apr
   ಬಸವಕಲ್ಯಾಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ ಪತಿ ನಾರಾಯಣರಾವ್ ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಪುತ್ರ ಗೌತಮ್ ಜೊತೆಗೆ ತ್ರಿಪುರಾಂತ ಮತಗಟ್ಟೆ ಸಂಖ್ಯೆ 115ರಲ್ಲಿ ಮತ ಚಲಾವಣೆ ಮಾಡಿದ್ದಾರೆ.
   10:27 AM, 17 Apr
   ಮೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಬೆಳಗ್ಗೆ 9ರ ತನಕ ನಡೆದ ಮತದಾನದ ವಿವರ
   10:19 AM, 17 Apr
   ಬೆಳಗಾವಿ ಉಪ ಚುನಾವಣೆ
   ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇತಡಸಿ, ಚಿಕ್ಕತಡಸಿ ಗ್ರಾಮಸ್ಥರು ಲೋಕಸಭೆ ಉಪ ಚುನಾವಣೆ ಮತದಾನ ಬಹಿಷ್ಕಾರ ಮಾಡಿದ್ದಾರೆ. ಪ್ರವಾಹ ಪೀಡಿತ ಗ್ರಾಮಗಳನ್ನು ಸ್ಥಳಾಂತರ ಮಾಡುವ ತನಕ ಮತದಾನ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
   10:08 AM, 17 Apr
   ಗೋಕಾಕ, ಅಥಣಿಗೆ ಬಸ್
   ವಿಜಯಪುರದಿಂದ ಗೋಕಾಕ, ಅಥಣಿ ಮತಗಟ್ಟೆಗಳಿಗೆ 100 ಬಸ್ ಸಂಚಾರ ವ್ಯವಸ್ಥೆ ಮಾಡಲಾಗಿದೆ.
   READ MORE

   English summary
   Maski, Basavakalyana and Belagavi By Election 2021 Live Updates: All you need to know about the Karnataka By election polling schedule, voting date and time, key candidates and all latest news, highlights.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X