ಕರ್ನಾಟಕ ಉಪಚುನಾವಣೆ 2026: ಗ್ಯಾರಂಟಿ ಯೋಜನೆಗಳ ಅಗ್ನಿ ಪರೀಕ್ಷೆ, ಬಿಜೆಪಿ - ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆ ನಿರೀಕ್ಷೆ

Karnataka By-Elections 2026: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿದ್ದು, ಈ ಉಪ ಚುನಾವಣೆಯು ಗ್ಯಾರಂಟಿ ಯೋಜನೆಗಳ ಅಗ್ನಿ ಪರೀಕ್ಷೆ ಎಂದೇ ಪರಿಗಣಿಸಲಾಗಿದೆ. ಸಾಮಾನ್ಯವಾಗಿ ಯಾವುದೇ ರಾಜ್ಯದಲ್ಲಾರೂ ಆಡಳಿತರೂಢ ಪಕ್ಷವೇ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಇದೆ. ಆದರೆ ಈ ಬಾರಿ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಚಿತ್ರಣವು ಭಿನ್ನವಾಗಿದೆ. ಮುಖ್ಯವಾಗಿ ದಾವಣಗೆರೆ ವಿಧಾನಸಭೆಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮುಸ್ಲಿಂ ನಾಯಕರು ಹಾಗೂ ಮುಸ್ಲಿಂ ಸಮುದಾಯವು ಮುನಿಸಿಕೊಂಡಿರುವುದು ಕಾಂಗ್ರೆಸ್ ಪಕ್ಷಕ್ಕೆ ದುಬಾರಿಯಾಗಿ ಪರಿಣಮಿಸುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಮೇಲೆ ಇದು ಎರಡನೇ ವಿಧಾನಸಭೆ ಉಪ ಚುನಾವಣೆಯಾಗಿದೆ. 2024ರಲ್ಲಿ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಹೆಚ್ಚಿನ ಮತದಾನ ದಾಖಲಾಗಿತ್ತು. ಈ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವು ಭರ್ಜರಿ ಗೆಲುವು ದಾಖಲಿಸಿತ್ತು. ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್.ವೈ. ಮೇಟಿ (ಬಾಗಲಕೋಟೆ) ಮತ್ತು ಶಾಮನೂರು ಶಿವಶಂಕರಪ್ಪ (ದಾವಣಗೆರೆ ದಕ್ಷಿಣ) ಅವರ ನಿಧನದಿಂದ ಈ ಎರಡೂ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದೆ. ಈ ಬಾರಿಯ ಉಪ ಚುನಾವಣೆಯಲ್ಲಿ ಅನುಕಂಪದ ಆಧಾರದ ಮೇಲೆ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆ ಇದೆಯಾದರೂ, ಬಿಜೆಪಿ ಸ್ಪರ್ಧಿಗಳ ತೀವ್ರ ಪೈಪೋಟಿ ಇದೆ.

Karnataka By-Elections 2026

Karnataka By-Elections 2026: ಮುಸ್ಲಿಂ ನಾಯಕರ ಮುನಿಸು

ಅಲ್ಲದೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಅಧಿಕಾರ ಹಂಚಿಕೆಗಾಗಿ ನಡೆಯುತ್ತಿರುವ ಕಸರತ್ತು ಹಾಗೂ ಮುಸ್ಲಿಂ ಸಮುದಾಯದ ಮುನಿಸು ಪ್ರಭಾವ ಬೀರುವ ಸಾಧ್ಯತೆ ದಟ್ಟವಾಗಿದೆ. ಈ ಉಪ ಚುನಾವಣೆಯಲ್ಲಿ ಯಾವುದೇ ಕ್ಷೇತ್ರದಲ್ಲಿ ಸೋತರು ಅದನ್ನು ಬಿಜೆಪಿ ಆಡಳಿತ ವಿರೋಧಿ ಅಲೆ ಹಾಗೂ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿನ ಲೋಪ ಎಂದು ಹೇಳುವ ಸಾಧ್ಯತೆ ಇದೆ. ಇದು ಅಭಿಯಾನ ರೂಪದಲ್ಲಿ ಬದಲಾಗುವ ಸಾಧ್ಯತೆಯೂ ಇದೆ.

ಬಿಜೆಪಿ - ಜೆಡಿಎಸ್ ವಿರೋಧ ಪಕ್ಷಗಳಿಗೆ ಈ ಉಪ ಚುನಾವಣೆಯ ಗೆಲುವು ಪ್ರತಿಷ್ಠೆಯಾಗಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮ ಆಡಳಿತ ನೀಡುತ್ತಿದ್ದೇವೆ. ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೇಳಿದರೂ, ಈ ಉಪ ಚುನಾವಣೆಯ ಫಲಿತಾಂಶವು ಹಲವು ವಿಚಾರಗಳ ಮೇಲೆ ಪ್ರಭಾವ ಬೀರಲಿದೆ. ಉಪ ಚುನಾವಣೆಯ ನಂತರ ಮುಖ್ಯಮಂತ್ರಿ ಬದಲಾವಣೆ - ಸಚಿವ ಸಂಪುಟ ಪುನರ್ ರಚನೆಯಂತಹ ವಿಷಯಗಳು ಹೆಚ್ಚು ಮುನ್ನೆಲೆಗೆ ಬರಲಿವೆ.

ಈಗಾಗಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ಬದಲಾವಣೆ ಅಥವಾ ಪುನರ್ ರಚನೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ಕಾಂಗ್ರೆಸ್ - ಬಿಜೆಪಿ ಹೈಕಮಾಂಡ್ ನಾಯಕರು ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಬದಲಾವಣೆಗೆ ಮುಂದಾಗಿರಲಿಲ್ಲ. ಇದೀಗ ಮೇ 4ರ ನಂತರ ಹಲವು ಬದಲಾವಣೆಗಳು ಎದುರಾಗುವ ಸಾಧ್ಯತೆ ಇದೆ.

2026ರ ಏಪ್ರಿಲ್‌9ರಂದು ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಎರಡೂ ವಿಧಾಸಭೆ ಉಪ ಚುನಾವಣೆಗಳಲ್ಲಿ ಶೇ. 60ಕ್ಕೂ ಹೆಚ್ಚು ಮತದಾನವಾಗಿದೆ. ಹಿರಿಯ ಶಾಸಕರ ನಿಧನದಿಂದ ತೆರವಾಗಿದ್ದ ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದ್ದು, ಫಲಿತಾಂಶ ಮೇ 4, 2026ರಂದು ಪ್ರಕಟವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+