ಉಪಚುನಾವಣೆ ಫಲಿತಾಂಶ: ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಮುಖಭಂಗ!
ಬೆಂಗಳೂರು, ನವೆಂಬರ್ 06: ಕರ್ನಾಟಕದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 3 ಶನಿವಾರದಂದು ನಡೆದ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ..
ಬೆಳಿಗ್ಗೆ 8 ರಿಂದ ಮತ ಎಣಿಕೆ ಆರಂಭವಾಗಲಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಲಿದೆ.
ಮಂಡ್ಯದಲ್ಲಿ ಜೆಡಿಎಸ್ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದ ಸಿ ಎಸ್ ಪುಟ್ಟರಾಜು, ಶಿವಮೊಗ್ಗದಲ್ಲಿ ಬಿಜೆಪಿಯಿಂದ ಸಂಸದರಾಗಿ ಆಯ್ಕೆಯಾಗಿದ್ದ ಬಿ ಎಸ್ ಯಡಿಯೂರಪ್ಪ ಮತ್ತು ಬಳ್ಳಾರಿ ಬಿಜೆಪಿ ಸಂಸದ ಶ್ರೀರಾಮುಲು ಅವರು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರಿಂದ ತೆರವಾದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು.

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿ ಎರಡೂ ಕಡೆಗಳಲ್ಲಿ ಗೆಲುವು ಸಾಧಿಸಿದ್ದರು. ನಂತರ ಚನ್ನಪಟ್ಟಣವನ್ನು ತಮ್ಮ ಬಳಿಯೇ ಉಳಿಸಿಕೊಂಡು ರಾಮನಗರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಕಾಂಗ್ರೆಸ್ ಶಾಸಕರಾಗಿದ್ದ ಸಿದ್ದು ನ್ಯಾಮಗೌಡ ಅವರು ಅಕಾಲಿಕ ಮರಣವನ್ನಪ್ಪಿದ್ದರಿಂದ ತೆರವಾದ ಸ್ಥಾನಕ್ಕೂ ಉಪಚುನಾವಣೆ ನಡೆದಿದೆ.
ಉಪಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ನೀಡಲಿದೆ.
ಜಮಖಂಡಿ ವಿಧಾನಸಭಾ ಉಪಚುನಾವಣೆಯಲ್ಲಿ ಜಯಗಳಿಸಿರುವ ಆನಂದ ನ್ಯಾಮಗೌಡ ಅವರಿಗೆ ಅಭಿನಂದನೆಗಳು. ಪಕ್ಷದ ಜಯಕ್ಕಾಗಿ ಶ್ರಮಿಸಿದ ನಾಯಕರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳು. ನಮ್ಮ ಅಭ್ಯರ್ಥಿಯನ್ನು ಆಶೀರ್ವದಿಸಿದ ಕ್ಷೇತ್ರದ ಮತದಾರರಿಗೆ ಕೃತಜ್ಞತೆಗಳು. #Jamakhandi @INCKarnataka
— Siddaramaiah (@siddaramaiah) November 6, 2018
ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ.
— Siddaramaiah (@siddaramaiah) November 6, 2018
ಕತ್ತಲೆಯಿಂದ ಬೆಳಕಿನ ಕಡೆಗೆ ಜನಪಯಣ.
ನಾಡಬಾಂಧವರಿಗೆ
ದೀಪಾವಳಿಯ ಶುಭಾಶಯಗಳು.@INCKarnataka
Karnataka: Counting of votes is underway for #KarnatakaByElection2018. Visuals from a counting station in Bellary. pic.twitter.com/CDvEBxQNjm
— ANI (@ANI) November 6, 2018












Click it and Unblock the Notifications