Karnataka By-elections: "ರಾಜ್ಯ ಸರ್ಕಾರದಿಂದ ಎಲೆಕ್ಷನ್ ರೂಲ್ಸ್ ಬ್ರೇಕ್"
ಕರ್ನಾಟಕ 3 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರವು ಚುನಾವಣಾ ಆಯೋಗದ ಪ್ರಮುಖ ರೂಲ್ಸ್ ಬ್ರೇಕ್ ಮಾಡಿದೆ ಎನ್ನುವ ಆರೋಪ ಕೇಳಿ ಬಂದಿದೆ. ಕರ್ನಾಟಕದ ಮೂರು ಪ್ರಮುಖ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಘೋಷಣೆಯಾಗಿದೆ. ಚುನಾವಣೆ ಘೋಣೆಯಾದ ಬೆನ್ನಲ್ಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾಗುತ್ತದೆ.
ಚುನಾವಣಾ ನೀತಿ ಸಂಹಿತೆ ಇರುವಾಗ ಯಾವುದೇ ಯೋಜನೆಗಳು ಸೇರಿದಂತೆ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಬಾರದು ಎನ್ನುವುದು ಸೇರಿದಂತೆ ಹಲವು ನಿಯಮಗಳು ಇವೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರವು ಈ ರೂಲ್ಸ್ ಬ್ರೇಕ್ ಮಾಡಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ನಿಯಮ ಉಲ್ಲಂಘನೆ ಆರೋಪ: ಕರ್ನಾಟಕ ರಾಜ್ಯ ಸರ್ಕಾರವು ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿರುವುದಾಗಿ ಬಿಜೆಪಿ ಆರೋಪಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು,ಕಾಂಗ್ರೆಸ್ ಸರ್ಕಾರದಿಂದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಚುನಾವಣೆ ಘೋಷಣೆಯಾದ ಕೂಡಲೇ ಚುನಾವಣಾ ಮಾದರಿ ನೀತಿ ಸಂಹಿತೆಯೂ ಜಾರಿಗೆ ಆಗುತ್ತದೆ. ನೀತಿ ಸಂಹಿತೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಪತ್ರ ಸಹ ಬರೆಯಲಾಗಿದೆ. ಆದರೆ, ಸರ್ಕಾರ ರೂಲ್ಸ್ ಬ್ರೇಕ್ ಮಾಡಿದೆ.
ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸರ್ಕಾರದ ಖರ್ಚಿನಲ್ಲಿ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಬಾರದು. ಸರ್ಕಾರದ ಸಾಧನೆಗಳ ಬಗ್ಗೆ ಪ್ರಚಾರ ಮಾಡುವುದು, ಜಾಹೀರಾತುಗಳಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರ ಫೋಟೋಗಳನ್ನು ಬಳಸಬಾರದು. ಈ ರೀತಿ ಮಾಡುವುದು ಸ್ಪಷ್ಟವಾಗಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಮಾಡಿದಂತೆ ಆಗುತ್ತದೆ. ಈ ವಿಷಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿದಿಲ್ಲವೇ ಎಂದು ಆರ್ ಅಶೋಕ್ ಅವರು ಪ್ರಶ್ನೆ ಮಾಡಿದ್ದಾರೆ.
ಮುಂದುವರಿದು ವಾಲ್ಮೀಕಿ ಜಯಂತಿಯ ಪ್ರಯುಕ್ತ ಗುರುವಾರ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸರ್ಕಾರಿ ಜಾಹೀರಾತಿನಲ್ಲಿ ಸರ್ಕಾರದ ಸಾಧನೆಗಳನ್ನು ಎಂದು ಪ್ರಕಟಿಸಲಾಗಿದೆ. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಫೋಟೋ ಸಹ ಬಳಸಲಾಗಿದೆ ಎಂದು ಅವರು ದೂರಿದ್ದಾರೆ.
ಒಂದೊಮ್ಮೆ ರಾಜ್ಯ ಸರ್ಕಾರಕ್ಕೆ ವಾಲ್ಮೀಕಿ ಜಯಂತಿಗೆ ಶುಭಾಶಯ ಕೋರುವುದು ಮಾತ್ರ ಸರ್ಕಾರದ ಉದ್ದೇಶವಾಗಿದ್ದರೆ. ರಾಜ್ಯ ಸರ್ಕಾರವು ಸರ್ಕಾರದ ಸಾಧನೆಗಳು ಹಾಗೂ ಸಿಎಂ ಮತ್ತು ಡಿಸಿಎಂ ಅವರ ಭಾವಚಿತ್ರ ಇಲ್ಲದೆಯೂ ಕೇವಲ ಶುಭಾಶಯ ಕೋರುವ ಜಾಹಿರಾತು ಪ್ರಕಟಿಸಲು ಅವಕಾಶ ಇತ್ತು. ಆದರೆ, ಸರ್ಕಾರ ಉದ್ದೇಶಪೂರ್ವಕವಾಗಿಯೇ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.
ರಾಜ್ಯ ಸರ್ಕಾರವು ಮಾದರಿ ನೀತಿ ಸಂಹಿತೆಯ ಎಲ್ಲ ನಿಯಮಗಳನ್ನೂ ಗಾಳಿಗೆ ತೂರಿದೆ. ಸರ್ಕಾರಿ ಖರ್ಚಿನಲ್ಲಿ ಇಂದು ಪ್ರಕಟವಾಗಿರುವ ಜಾಹೀತರಾತನ್ನ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ಪರಿಗಣಿಸಿ ರಾಜ್ಯ ಸರ್ಕಾರದ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇನೆ ಎಂದೂ ಅವರು ಹೇಳಿದ್ದಾರೆ.












Click it and Unblock the Notifications