Karnataka By Elections: ಮೂರು ವಿಧಾನಸಭಾ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಪೈಪೋಟಿ, ಯಾರಿಗೆ ಮುನ್ನಡೆ ?

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ನಿರ್ಣಾಯಕ ಹಂತವನ್ನು ತಲುಪುತ್ತಿದೆ. ರಾಜ್ಯ ರಾಜಕೀಯದಲ್ಲಿ ಈ ಕ್ಷೇತ್ರಗಳ ಚುನಾವಣೆ ಫಲಿತಾಂಶವು ಭಾರೀ ಮಹತ್ವನ್ನು ಪಡೆದುಕೊಂಡಿದೆ. ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಈ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿನ ಉಪ ಚುನಾವಣೆಯು ಹಲವು ಕಾರಣಗಳಿಂದ ಮಹತ್ವ ಪಡೆದುಕೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಎದುರುಗೊಂಡಿದ್ದು. ಚನ್ನಪಟ್ಟಣದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್‌ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ಇದೆ. ಚನ್ನಪಟ್ಟಣ ವಿಧಾನಸಭೆ ಚುನಾವಣೆಯ ಫಲಿತಾಂಶವು ಮೊದಲ ಹಂತದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿತ್ತು. ಆದರೆ, ಇದಾದ ಮೇಲೆ ಮಹತ್ವದ ತಿರುಪಡೆದುಕೊಂಡಿದೆ.

Karnataka By Elections Fierce competition in three assembly constituencies who will take lead

ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆ: ಇನ್ನು ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ 10.15ರ ಸುಮಾರಿಗೆ ಕಾಂಗ್ರೆಸ್‌ನ ಅಭ್ಯರ್ಥಿಗಳು ಮುನ್ನಡೆ ಕಾಪಾಡಿಕೊಂಡಿದ್ದರು. ಆದರೆ, ಕರ್ನಾಟಕದಲ್ಲಿ ಕ್ಷಣ ಕ್ಷಣದ ಮಾಹಿತಿ ಬದಲಾಗುತ್ತಲ್ಲೇ ಇದೆ. ಯಾವುದೇ ಕ್ಷಣದಲ್ಲಿ ಚುನಾವಣೆಯ ಫಲಿತಾಂಶ ಯಾವ ರೀತಿ ಬೇಕಾದರೂ ಬದಲಾಗುವಂತೆ ಇದೆ. ಮೂರು ಪಕ್ಷಗಳಿಗೂ ಈ ಉಪ ಚುನಾವಣೆ ಒಂದೊಂದು ಕಾರಣಕ್ಕೆ ಮುಖ್ಯವಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ ಮೇಲೆ ಈ ಉಪ ಚುನಾವಣೆ ಮಹತ್ವ ಪಡೆದುಕೊಂಡಿದೆ. ಇನ್ನು ಜೆಡಿಎಸ್‌ಗೂ ನಿಖಿಲ್‌ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಕೊಳ್ಳಬೇಕಿದೆ.

ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮುನ್ನಡೆ: ಶಿಗ್ಗಾಂವಿಯಲ್ಲಿ ಭರತ್‌ ಬೊಮ್ಮಾಯಿ ಅವರೇ ಗೆಲ್ಲಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಶಿಗ್ಗಾಂವಿಯಲ್ಲಿ ಯಾಸೀರ್‌ಖಾನ್ ಪಠಾಣ್ ಅವರು ಭರ್ಜರಿ ಮುನ್ನಡೆ ಕಾಪಾಡಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್‌ ಬೊಮ್ಮಾಯಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್‌ ಕೊಟ್ಟಿತ್ತು.

ಭರತ್‌ ಬೊಮ್ಮಾಯಿ ಅವರಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗಿತ್ತು. ಕಾರ್ಯಕರ್ತರನ್ನು ಗುರುತಿಸುತ್ತಿಲ್ಲ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಮತ ಎಣಿಕೆ ನಡೆಯುವ ಸಂದರ್ಭದಲ್ಲೇ ಬಿಜೆಪಿಗೆ ಆಘಾತ ಎದುರಾಗಿದೆ.

ಮಹಾರಾಷ್ಟ್ರ & ಜಾರ್ಖಂಡ್‌: ದೇಶದ ಶ್ರೀಮಂತ ರಾಜ್ಯವಾದ ಮಹಾರಾಷ್ಟ್ರ ಹಾಗೂ ಸಣ್ಣ ರಾಜ್ಯವಾದ ಜಾರ್ಖಂಡ್ ವಿಧಾನಸಭೆ ಚುನಾವಣೆ ಸಹ ಇದೇ ಸಂದರ್ಭದಲ್ಲಿ ನಡೆದಿದೆ. ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆದಿದ್ದರೆ, ಜಾರ್ಖಂಡ್‌ನಲ್ಲಿ ಎರಡು ಹಂತದಲ್ಲಿ ವಿಧಾನಸಭೆ ಉಪ ಚುನಾವಣೆ ನಡೆದಿತ್ತು. ಮಹಾರಾಷ್ಟ್ರದಲ್ಲಿ ಮಹಾಯುತಿ & ಬಿಜೆಪಿ ಮುನ್ನಡೆ ಸಾಧಿಸಿದ್ದರೆ, ಜಾರ್ಖಂಡ್‌ನಲ್ಲಿ ಕಾಂಗ್ರೆಸ್‌ ಮುನ್ನಡೆ ಕಾಪಾಡಿಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+