ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಹೈಕಮಾಂಡ್‌ಗೆ ಈ ತಲೆನೋವು ಬೇಡ ಎಂದ ದೇವೇಗೌಡ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 21: ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ದಿನಾಂಕ ಘೋಷಣೆ ಪ್ರಕಟವಾದ ಬೆನ್ನಲ್ಲೇ ಕಾಂಗ್ರೆಸ್ ಜತೆಗಿನ ಮೈತ್ರಿಯನ್ನು ಸಂಪೂರ್ಣವಾಗಿ ಕಡಿತಗೊಳಿಸುವ ಬಗ್ಗೆ ಜೆಡಿಎಸ್ ನಾಯಕರು ಮುಂದಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಇಬ್ಬರೂ ಕಾಂಗ್ರೆಸ್ ಜತೆಗೆ ಮೈತ್ರಿ ಮುಂದುವರಿಯುವುದಿಲ್ಲ. ಮುಂದಿನ ಉಪ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಇಬ್ಬರೂ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ಉಪಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ ಸ್ಪರ್ಧೆಕರ್ನಾಟಕ ಉಪಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ ಸ್ಪರ್ಧೆ

ರಾಜ್ಯದಲ್ಲಿ ಅ. 21ರಂದು ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಹಿರಿಯ ಮುಖಂಡರ ಸಭೆ ಕರೆಯಲಾಗುತ್ತದೆ. ಚುನಾವಣೆ ಘೋಷಣೆಯಾಗಿರುವ ಎಲ್ಲ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಭಾನುವಾರ ಘೋಷಣೆ ಮಾಡಲಾಗುತ್ತದೆ ಎಂದು ಎಚ್ ಡಿ ದೇವೇಗೌಡ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡ, ಸಭೆಯ ಬಳಿಕ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವುದಾಗಿ ತಿಳಿಸಿದರು.

ಎಲ್ಲರ ಅಭಿಪ್ರಾಯವೂ ಮೈತ್ರಿಯ ವಿರುದ್ಧ

ಎಲ್ಲರ ಅಭಿಪ್ರಾಯವೂ ಮೈತ್ರಿಯ ವಿರುದ್ಧ

'ಕಳೆದ ಮೂರು ತಿಂಗಳಿನಿಂದ ಸಭೆಗಳನ್ನು ನಡೆಸುತ್ತಾ ಬಂದಿದ್ದೇನೆ. ಕಾಂಗ್ರೆಸ್ ಜತೆಗೆ ಮೈತ್ರಿ ಮುಂದುವರಿಸುವುದರ ವಿಚಾರದಲ್ಲಿ ಇಡೀ 30 ಜಿಲ್ಲೆಗಳ ಕಾರ್ಯಕರ್ತರ ಅಭಿಪ್ರಾಯ ಅಭಿಪ್ರಾಯ ಸಂಗ್ರಹಿಸಲಾಗಿದೆ. ಎಲ್ಲರೂ ಅಭಿಪ್ರಾಯ ಉಪ ಚುನಾವಣೆಯಲ್ಲಿ ಮೈತ್ರಿ ಮುಂದುವರಿಸುವುದು ಬೇಡ ಎಂಬುದೇ ಆಗಿದೆ ಎಂದು ಹೇಳಿದರು.

ಹೈಕಮಾಂಡ್‌ಗೆ ತಲೆನೋವು ಬೇಡ

ಹೈಕಮಾಂಡ್‌ಗೆ ತಲೆನೋವು ಬೇಡ

ಕೆಪಿಸಿಸಿ ಅಧ್ಯಕ್ಷರು ಮತ್ತು ವಿರೋಧಪಕ್ಷದ ನಾಯಕರ ಆಯ್ಕೆಯ ವಿಚಾರದಲ್ಲಿಯೇ ಕಾಂಗ್ರೆಸ್‌ನ ಹೈಕಮಾಂಡ್ ಗೊಂದಲದಲ್ಲಿದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ಜತೆಗಿನ ಮೈತ್ರಿ ವಿಚಾರದ ಬಗ್ಗೆ ತೀರ್ಮಾನ ಮಾಡುವ ಮತ್ತೊಂದು ತಲೆನೋವು ಅವರಿಗೆ ಬೇಡ ಎಂದು ನಾವೇ ಮೈತ್ರಿಗೆ ಇತಿಶ್ರೀ ಹಾಡಿದ್ದೇವೆ ಎಂದು ತಿಳಿಸಿದರು.

Big Breaking: ಅನರ್ಹ ಶಾಸಕರು ಉಪ ಚುನಾವಣೆ ಸರ್ಧಿಸಲು ಅವಕಾಶವಿಲ್ಲBig Breaking: ಅನರ್ಹ ಶಾಸಕರು ಉಪ ಚುನಾವಣೆ ಸರ್ಧಿಸಲು ಅವಕಾಶವಿಲ್ಲ

ಕುಮಾರಸ್ವಾಮಿಗೆ ನೋವು

ಕುಮಾರಸ್ವಾಮಿಗೆ ನೋವು

'ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಆಗಿದೆ. ಈಗಾಗಲೇ ಕುಮಾರಸ್ವಾಮಿ ಅವರು ಎಲ್ಲ ಕ್ಷೇತ್ರಗಳಲ್ಲಿಯೂ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ತಿಳಿಸಿದ್ದಾರೆ. 14 ತಿಂಗಳು ಮೈತ್ರಿ ಸರ್ಕಾರದಲ್ಲಿ ನೋವುಂಡ ಹಿನ್ನೆಲೆಯಲ್ಲಿ ಈ ಘೋಷಣೆ ಮಾಡಿದ್ದಾರೆ. ಇದರ ಬಗ್ಗೆ ನಾಳೆ ವಿವರವಾಗಿ ಹೇಳುತ್ತೇನೆ' ಎಂದರು.

ಮೈತ್ರಿ ಇಲ್ಲ ಎಂದ ಕುಮಾರಸ್ವಾಮಿ

ಮೈತ್ರಿ ಇಲ್ಲ ಎಂದ ಕುಮಾರಸ್ವಾಮಿ

'ಬಿಜೆಪಿಗಿಂತಲೂ ಕಾಂಗ್ರೆಸ್ ನನ್ನ ಮೊದಲ ಶತ್ರು. ನನ್ನದು ಅತ್ಯಂತ ಕೆಟ್ಟ ಸರ್ಕಾರವಾಗಿತ್ತು. ನನಗೆ ಯಾವುದೇ ಬೆಂಬಲ ಸಿಕ್ಕಿರಲಿಲ್ಲ. ನಮ್ಮ ಪಕ್ಷವನ್ನು ಮುಗಿಸಲು ಕಾಂಗ್ರೆಸ್‌ನ ಹಲವು ನಾಯಕರು ಪ್ರಯತ್ನಿಸುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ನಮಗೆ ಮೈತ್ರಿ ಅಗತ್ಯವಿಲ್ಲ' ಎಂದು ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ಹೇಳಿದ್ದರು.

ಚುನಾವಣಾ ಆಯೋಗದಿಂದ ಆಘಾತ: ಅನರ್ಹ ಶಾಸಕರ ಮುಂದಿನ ದಾರಿಗಳೇನು?ಚುನಾವಣಾ ಆಯೋಗದಿಂದ ಆಘಾತ: ಅನರ್ಹ ಶಾಸಕರ ಮುಂದಿನ ದಾರಿಗಳೇನು?

English summary
JDS chief HD Deve Gowda has announced the breakup of alliance with Congress in the upcoming by elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X