ಉಪಚುನಾವಣೆ ಮಾತ್ರವಲ್ಲ ಕಾಂಗ್ರೆಸ್‌ ಸರ್ಕಾರಕ್ಕೆ ಜನ ಹೇಳುವ 'ಟಾಟಾ..ಟಾಟಾ..ಬೈ ಬೈ ಎಲೆಕ್ಷನ್': ಆರ್.ಅಶೋಕ್ ಭವಿಷ್ಯ

Karnataka By Election 2026: ಕರ್ನಾಟಕದಲ್ಲಿ ಈ ವರ್ಷದ ಉಪಚುನಾವಣೆಗೆ ಕೆಲವೇ ಗಂಟೆಗಳು ಮಾತ್ರ ಬಾಕಿ ಇವೆ. ಕಳೆದ ಎರಡು ವಾರಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರಿಂದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆದಿದೆ. ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದ ಜನರ ತೆರಿಗೆ ಹೊರೆ ಅನುಭವಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ದೂರುತ್ತಲೇ ಬಂದಿದ್ದಾರೆ. ಚುನಾವಣೆ ಫಲಿತಾಂಶ್ ಮತ್ತು ಕಾಂಗ್ರೆಸ್ ಕುರಿತು ಅವರು ಭವಿಷ್ಯ ನುಡಿದಿದ್ದಾರೆ.

'ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗಳು ಕೇವಲ ಬೈ-ಎಲೆಕ್ಷನ್ ಅಲ್ಲ...' ಎಂದು ಅವರು ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. 'ಇದು ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕದ ಜನರು ಹೇಳುತ್ತಿರುವ 'ಟಾಟಾ... ಟಾಟಾ... ಬೈ ಬೈ ಎಲೆಕ್ಷನ್' ಅಂತಲೂ ಅವರು ಭವಿಷ್ಯ ನುಡಿಸಿದ್ದಾರೆ.

Karnataka By Elections

ಸರ್ಕಾರದ ವಿರುದ್ಧ ಜನಾಕ್ರೋಶದ ಅಲೆ ಇದೆ?

ಗುರುವಾರ ಎಕ್ಸ್ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರು 'ಅನುಕಂಪದ ಅಲೆ' ಬಗ್ಗೆ ಕನಸು ಕಾಣುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಈ ಕಾಣುತ್ತಿರುವುದು ಅನುಕಂಪದ ಅಲೆ ಅಲ್ಲ, ಜನಾಕ್ರೋಶದ ಅಲೆ! ಸಿಎಂ ಸಿದ್ದರಾಮಯ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಕಳೆದ ಮೂರು ವರ್ಷಗಳಾಗಿದೆ. ಈ ಅವಧಿಯಲ್ಲಿ ಏನೆಲ್ಲ ಆಯಿತೆಂದು ಅವರು ಪಟ್ಟಿ ನೀಡಿ ಟೀಕಿಸಿದ್ದಾರೆ.

ಆರ್.ಅಶೋಕ್ ಅವರ ಪ್ರಕಾರ, 'ಸರ್ಕಾರ ಜನರ ಮೇಲೆ ತೆರಿಗೆ ಭಾರ ಹೇರಿದೆ. ದಿನನಿತ್ಯದ ಬಳಕೆ ವಸ್ತುಗಳು ಮತ್ತು ಸೇವೆಗಳ ಬೆಲೆ ಏರಿಕೆ ಮಾಡಿದೆ, ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಅಧೋಗತಿಗೆ ತಳ್ಳಿದೆ, ಕನ್ನಡಿಗರನ್ನು ಸಾಲದ ಸುಳಿಗೆ ಸಿಲುಕಿಸಿದ್ದಲ್ಲೇ ರಾಜ್ಯದಲ್ಲಿ ಅಭಿವೃದ್ಧಿಯನ್ನು ಮರೀಚಿಕೆಯಾಗಿಸಿದೆ' ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‌ಗೆ ಜನ ಬುದ್ಧಿ ಕಲಿಸ್ತಾರೆ; ಭವಿಷ್ಯ

ಒಂದು ಕೈಯಲ್ಲಿ ಗ್ಯಾರಂಟಿ ಕೊಡುವ ನಾಟಕವಾಡಿ, ಇನ್ನೊಂದು ಕೈಯಲ್ಲಿ ತೆರಿಗೆ ಮತ್ತು ಬೆಲೆ ಏರಿಕೆಯಿಂದ ಜನರ ಜೇಬಿಗೆ ಕನ್ನ ಹಾಕುವ ಪಿಕ್ ಪಾಕೆಟ್ ನಡೆಯುತ್ತಿದೆ ಎಂದು ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಲೇವಡಿ ಮಾಡಿದರು. ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆ ಕೇವಲ ಎರಡು ಕ್ಷೇತ್ರಗಳ ಚುನಾವಣೆ ಅಲ್ಲ. ಇದು ದುರಾಡಳಿತ, ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಕನ್ನಡಿಗರು ನೀಡಲಿರುವ ಎಚ್ಚರಿಕೆಯ ಗಂಟೆ. ಉಪ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಸರ್ಕಾರವನ್ನು ತಿರಸ್ಕರಿಸಲಿದ್ದಾರೆ, ಸೋಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

ಜನಸಾಮಾನ್ಯರು ಈ ನಾಲಾಯಕ್ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಕಲಿಸುವ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಜನರಿಂದ 'ಟಾಟಾ... ಟಾಟಾ... ಬೈ ಬೈ!' ಎಂದು ಸ್ಪಷ್ಟ ಸಂದೇಶ ಬರುತ್ತದೆ ಎಂದರು. ಈ ಮೂಲಕ ಕಾಂಗ್ರೆಸ್ ವಿರುದ್ಧ ಬಿಜೆಪಿ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+