• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಉಪ ಸಮರ ಫಲಿತಾಂಶ: ತಲಾ ಒಂದು ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಮುನ್ನಡೆ

|
Google Oneindia Kannada News

ಕರ್ನಾಟಕ, ನವೆಂಬರ್ 2: ರಾಜ್ಯದಲ್ಲಿ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತ ಎಣಿಕೆ ನಡೆಯುತಲಿದ್ದು, ಫಲಿತಾಂಶ ಕುತೂಹಲ ಕೆರಳಿಸಿದೆ.

ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದರೆ, ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ್ ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಇನ್ನು ಜೆಡಿಎಸ್ ಪಕ್ಷದ ಅಭ್ಯರ್ಥಿ ನಿಯಾಜ್ ಶೇಖ್ ಮೂರನೇ ಸ್ಥಾನದಲ್ಲಿದ್ದಾರೆ.

By Election Result: ಹಾನಗಲ್‌ ಕಾಂಗ್ರೆಸ್, ಸಿಂದಗಿ ಬಿಜೆಪಿ ಮುನ್ನಡೆBy Election Result: ಹಾನಗಲ್‌ ಕಾಂಗ್ರೆಸ್, ಸಿಂದಗಿ ಬಿಜೆಪಿ ಮುನ್ನಡೆ

ಇನ್ನು ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಎರಡನೇ ಸ್ಥಾನದಲ್ಲಿದ್ದಾರೆ. ಹಾಲಿ ಕ್ಷೇತ್ರ ಕೈತಪ್ಪುವ ಭೀತಿಯಲ್ಲಿ ಜೆಡಿಎಸ್ ಇದೆ.

ಹಾನಗಲ್‌ನಲ್ಲಿ ಫಲಿತಾಂಶ ಹಾವು ಏಣಿಯಂತೆ ಸರಿದಾಡುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ನಾಯಕರು ಭಾರೀ ಕುತೂಹಲದಲ್ಲಿ ಫಲಿತಾಂಶ ವೀಕ್ಷಿಸುತ್ತಿದ್ದಾರೆ.

ಈ ನಡುವೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.​ಡಿ. ದೇವೇಗೌಡರು ದಿಢೀರನೆ ದೆಹಲಿಯತ್ತ ಪ್ರಯಾಣ ಬೆಳೆಸಿದ್ದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೂರ್ವನಿಗದಿಯಂತೆ ಮಂಡ್ಯ ಜಿಲ್ಲೆಯತ್ತ ಪ್ರಯಾಣ ಮಾಡಿದ್ದಾರೆ.

ಮಾಜಿ ಪ್ರಧಾನಿ ದೇವೆಗೌಡ ದಿಢೀರನೆ ಬೆಂಗಳೂರಿನಿಂದ ದೆಹಲಿಗೆ ಇಂದು ಬೆಳಗ್ಗೆ 9 ಗಂಟೆಗೆ ತೆರಳಿದ್ದಾರೆ. ರಾತ್ರಿ ವೇಳೆಗೆ ದೇವೆಗೌಡರು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಹಾನಗಲ್​ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರದಲ್ಲಿ ಜೆಡಿಎಸ್ ಹೀನಾಯ ಸೋಲಿನತ್ತ ಮುಖ ಮಾಡಿದೆ.

ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯ ಹಾನಗಲ್ ವಿಧಾನಸಭೆ ಆರಂಭಿಕ ಫಲಿತಾಂಶ ಮೊದಲು ಸುತ್ತಿನಿಂದಲೂ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿತ್ತು. ಸಿಎಂ ತಮ್ಮ ಆರ್.ಟಿ. ನಗರದ ನಿವಾಸದಲ್ಲಿ ಬೆಳಗ್ಗೆಯಿಂದ ಟಿವಿ ವರದಿ ನೋಡುತ್ತಿದ್ದರು.

ಸಿಎಂ ಬೊಮ್ಮಾಯಿ ಅವರು ಇವತ್ತು ಮಧ್ಯಾಹ್ನದ ವೇಳೆಗೆ ಮೊದಲು ಕಬಿನಿ ಜಲಾಶಯಕ್ಕೆ ಬಾಗಿನ ಮತ್ತು ಆ ನಂತರ ಕೆಆರ್​ಎಸ್ ಜಲಾಶಯ ಬಳಿ ಕಾವೇರಿ ನದಿಗೆ ಬಾಗಿನ ಕೊಟ್ಟು ಬರುತ್ತೇನೆ ಎಂದು ಹೇಳಿ ಬೆಂಗಳೂರಿನಿಂದ ಹೊರಟಿದ್ದಾರೆ.

ಸದ್ಯದ ಚುನಾವಣಾ ಫಲಿತಾಂಶ ನೋಟ ಏನಿದೆ?
ಸಿಂದಗಿ ಉಪ ಚುನಾವಣೆ ಫಲಿತಾಂಶದಲ್ಲಿ ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡು ಬಂದಿರುವ ಬಿಜೆಪಿ ಗೆಲುವಿನ ಸನಿಹ ಬಂದು ನಿಂತಿದೆ. ಇನ್ನು ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದ್ದರೆ, ಜೆಡಿಎಸ್ ಮೂರನೇ ಸ್ಥಾನಕ್ಕೆ ಕುಸಿದಿದೆ. ಉಪ ಚುನಾವಣೆಗೂ ಮುನ್ನ ಜೆಡಿಎಸ್ ಪಕ್ಷದ ಶಾಸಕರು ಇದ್ದರು.

ಸದ್ಯದ ವರದಿಯ ಪ್ರಕಾರ ಸಿಂದಗಿಯಲ್ಲಿ ಹನ್ನೊಂದನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ 50050 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ 31473 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ 2067 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಕುಸಿದಿದೆ. ಬಿಜೆಪಿ ಅಭ್ಯರ್ಥಿ ತಮ್ಮ ಪ್ರತಿಸ್ಪರ್ಧಿಗಿಂತ 18577 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

   ಈ ಪವಾಡ ನಡೆದು ಟೀಮ್ ಇಂಡಿಯಾಗೆ ಸೆಮಿಫೈನಲ್ ಚಾನ್ಸ್ ಸಿಗುತ್ತಾ? | Oneindia Kannada

   ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶದ ಏಳನೇ ಸುತ್ತಿನ ಮತ ಏಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ 31620 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ 29368 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ 314 ಮತಗಳನ್ನು ಪಡೆದಿದೆ.

   English summary
   Karnataka By Elections Results 2021: BJP candidate leading in Sindagi assembly constituency, Congress candidate Leading in Hanagal constituency. JDS likely to loose deposit in both the constituencies. Know more.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X