ByPoll 2024: ಕರ್ನಾಟಕ ಉಪಚುನಾವಣೆ: ಅಭ್ಯರ್ಥಿಗಳು ಇವರೇ ನೋಡಿ...
Karnataka By Election 2024: ಕರ್ನಾಟಕದಲ್ಲಿ ಘೋಷಣೆಯಾದ ಉಪಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳಿಂದ ಅಭ್ಯರ್ಥಿಗಳು ಕಣಕ್ಕಿಳಿದಂತಾಗಿದೆ. ಹೀಗಾಗಿ ಚುನಾವಣೆ ಕಣ ರಂಗೇರುತ್ತಿದೆ. ಹಲವು ಲಾಭಿ, ಗೊಂದಲ, ಅಸಮಧಾನಗಳ ಮಧ್ಯೆ ಟಿಕೆಟ್ ಫೈನಲ್ ಮಾಡಿರುವ ಮೈತ್ರಿ ಪಕ್ಷ ಬಿಜೆಪಿ-ಜೆಡಿಎಸ್ ಹಾಗೂ ಆಡಳಿತ ಪಕ್ಷ ಕಾಂಗ್ರೆಸ್ ಮುಖಾ ಮುಖಿ ಆಗಲಿವೆ. ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣದಲ್ಲಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಕಾರ್ಯ ಶುರುವಾಗಿದ್ದು, ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ, ಬಳ್ಳಾರಿ ಜಿಲ್ಲೆಯ ಸಂಡೂರು ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಶುಕ್ರವಾರ (ಅಕ್ಟೋಬರ್ 25) ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಹಿರಿಯ ನಾಯಕರ ಸಮ್ಮುಖದಲ್ಲಿ ಇಂದು ಆಯಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಹಾಗಾದರೆ ಯಾವ ಪಕ್ಷದಿಂದ ಯಾರು ಕಣಕ್ಕಿಳಿದಿದ್ದಾರೆ ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಉಪಚುನಾವಣೆ 3 ಕ್ಷೇತ್ರಗಳ ಅಭ್ಯರ್ಥಿಗಳು, ಪಕ್ಷ
* ಶಿಗ್ಗಾವಿ ಕ್ಷೇತ್ರ: ಭರತ್ ಬೊಮ್ಮಾಯಿ (ಬಿಜೆಪಿ) vs ಯಾಸಿರ್ ಅಹ್ಮದ್ ಖಾನ್ ಪಠಾಣ್ (ಕಾಂಗ್ರೆಸ್).
* ಚನ್ನಪಟ್ಟಣ ಕ್ಷೇತ್ರ: ನಿಖಿಲ್ ಕುಮಾರಸ್ವಾಮಿ (ಜೆಡಿಎಸ್) vs ಸಿ.ಪಿ.ಯೋಗೇಶ್ವರ (ಕಾಂಗ್ರೆಸ್).
* ಸಂಡೂರು ಕ್ಷೇತ್ರ: ಬಂಗಾರು ಹನುಮಂತ (ಬಿಜೆಪಿ) vs ಅನ್ನಪೂರ್ಣ (ಕಾಂಗ್ರೆಸ್).
ಮೂರು ಕ್ಷೇತ್ರಗಳ ಟಿಕೆಟ್ ಹಂಚಿಕೆಯ ವಿವರ
ಈ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಸಂಡೂರಿನಲ್ಲಿ ಬಿಜೆಪಿಯಲ್ಲಿ ಎದ್ದಿದ್ದ ಅಸಮಾಧಾನವನ್ನು ಬಿವೈ ವಿಜಯೇಂದ್ರ ಸೂಚನೆ ಮೇರೆಗೆ ಶಾಸಕ ಜನಾರ್ಧನ ರೆಡ್ಡಿ ಯಶಸ್ವಿಯಾಗಿದ್ದಾರೆ. ಇನ್ನು ಶಿಗ್ಗಾವಿ ಕ್ಷೇತ್ರದಲ್ಲಿ ನಾನು ಯಾರಿಗೂ ಟಿಕೆಟ್ ಭರವಸೆ ನೀಡಿಲ್ಲ. ಪುತ್ರ ಭರತ್ ಬೊಮ್ಮಾಯಿ ಆಯ್ಕೆಯು ವರಿಷ್ಠರ ನಿರ್ಧಾರ ಎಂದು ಬಸವರಾಜ ಬೊಮ್ಮಾಯಿ ಹೇಳುತ್ತಿದ್ದಂತೆ ಕುಟುಂಬ ರಾಜಕಾರಣ ಎಂದು ಆಕ್ರೋಶ ಹೊರ ಹಾಕಿದ್ದ ಕಾರ್ಯಕರ್ತರು ತಣ್ಣಗಾಗಿದ್ದಾರೆ.
ಇನ್ನೂ ಚನ್ನಪಟ್ಟಣದಲ್ಲಿ ಇಂತದ್ದೆ ಕಥೆ ಆಗಿತ್ತು. ಆದರೆ ಟಿಕೆಟ್ ಸಿಗದಿರುವ ಮುನ್ಸೂಚನೆ ನೋಡಿಕೊಂಡು ಸಿಪಿ ಯೋಗೇಶ್ವರ ಕಾಂಗ್ರೆಸ್ ಸೇರಿ ಅಲ್ಲಿಂದ ಕಣಕ್ಕಿಳಿಯುವುದು ಫೈನಲ್ ಆಯಿತು. ಇದರ ಬೆನ್ನಲ್ಲೆ ಬಿಜೆಪಿ- ಜೆಡಿಎಸ್ ಮೈತ್ರಿ ಪಕ್ಷಗಳಿಂದ ನಿಖಿಲ್ ಕುಮಾರಸ್ವಾಮಿಯವರನ್ನು ಕಣಕ್ಕಿಳಿದರು.
ಶಿಗ್ಗಾವಿಯಿಂದ ಜಾತಿ ಆಧಾರದಲ್ಲಿ ಈ ಬಾರಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವುದು ಬೇಡ ಎಂದು ಕಾಂಗ್ರೆಸ್ ನಿರ್ಧರಿಸಿತ್ತು. ಇದೇ ವೇಳೆ, ಮಾಜಿ ಸಚಿವ, ಹಾಲಿ ಶಾಸಕ ವಿನಯ್ ಕುಲಕರ್ಣಿ ಪುತ್ರಿ ವೈಶಾಲಿ ಕುಲಕರ್ಣಿ ಅವರ ಹೆಸರು ಕೇಳಿ ಬಂತು. ಕೊನೆಗೆ ಆರನೇ ಭಾರಿಗೆ ಮುಸ್ಲಿಮ್ ಸಮುದಾಯ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಭರತ್ ಬೊಮ್ಮಾಯಿ ವಿರುದ್ಧ 'ಕೈ' ಮುಖಂಡರು ಟಿಕೆಟ್ ನೀಡಿದ್ದಾರೆ.
ಉಪ ಚುನಾವಣೆಯ ಪ್ರಮುಖ ದಿನಾಂಕಗಳು
ಇಂದು ಅಕ್ಟೋಬರ್ 25ರಂದು ನಾಪತ್ರ ಸಲ್ಲಿಕೆಗೆ ಕೊನೆ ದಿನ, ನಾಮಪತ್ರ ಪರಿಶೀಲನೆ ಅಕ್ಟೋಬರ್ 28ರಂದು ನಡೆಯಲಿದೆ. ಅಕ್ಟೋಬರ್ 30 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 13ರಂದು ಮೂರು ಕ್ಷೇತ್ರಗಳಿಗೆ ಚುನಾವಣೆಯ ನಡೆಯಲಿದೆ. ನಂತರ ನವೆಂಬರ್ 23ರಂದು ಉಪ ಚುನಾವಣೆ ಪಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಚುನಾವಣೆ ಆಯೋಗ ಮಾಹಿತಿ ನೀಡಿದೆ.












Click it and Unblock the Notifications