Karnataka By Elections 2020 Live Updates; ಆರ್.ಆರ್ ನಗರ ಶೇ.45.24, ಶಿರಾದಲ್ಲಿ ಶೇ.82.31 ರಷ್ಟು ಮತದಾನ
ಬೆಂಗಳೂರು, ನವೆಂಬರ್ 03 : ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆಯ ಮತದಾನ ನಡೆಯುತ್ತಿದೆ. ಕೋವಿಡ್ ಸಂದರ್ಭದಲ್ಲಿ ಮತದಾನ ನಡೆಯುತ್ತಿದ್ದು, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಮಂಗಳವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶ ನೀಡಲಾಗಿದೆ. ಕೋವಿಡ್ ಸೋಂಕಿತರು ಸಹ ಸಂಜೆ 5 ರಿಂದ 6 ಗಂಟೆಯ ತನಕ ಮತದಾನ ಮಾಡಬಹುದಾಗಿದೆ. ನವೆಂಬರ್ 10ರಂದು ಮತ ಎಣಿಕೆ ನಡೆಯಲಿದೆ.
ಬೆಂಗಳೂರು ನಗರದ ಆರ್. ಆರ್. ನಗರ ಮತ್ತು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. 2018ರ ಚುನಾವಣೆಯಲ್ಲಿ ಆರ್. ಆರ್. ನಗರದಲ್ಲಿ ಕಾಂಗ್ರೆಸ್, ಶಿರಾದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆದ್ದಿದ್ದರು.

ಕರ್ನಾಟಕದಲ್ಲಿ ಈಗ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದು ಉಪ ಚುನಾವಣೆಯನ್ನು ಪಕ್ಷ ಪ್ರತಿಷ್ಠೆಯಾಗಿ ಪರಿಗಣಿಸಿದೆ. ಆರ್. ಆರ್. ನಗರದಲ್ಲಿ 16 ಮತ್ತು ಶಿರಾದಲ್ಲಿ 15 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಉಪ ಚುನಾವಣೆ ಕ್ಷಣ-ಕ್ಷಣದ ಮಾಹಿತಿಗಳು ಇಲ್ಲಿವೆ.














Click it and Unblock the Notifications